ರಾಕ್ ಸ್ಟಾರ್ ರನ್ನರ್ಸ್

ಮಡಿಕೇರಿ, ನ. ೫: ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಇದೇ ಮೊದಲ ಬಾರಿಗೆ ಚೆಟ್ಟಳ್ಳಿ ಪ್ರೌಢಶಾಲಾ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ ಪತ್ರಕರ್ತರ ಫುಟ್ಬಾಲ್ ಪಂದ್ಯಾವಳಿ ಯಲ್ಲಿ ಇಸ್ಮಾಯಿಲ್ ಕಂಡಕರೆ ನಾಯಕತ್ವದ ಮಾಸ್ಟರ್ಸ್ ಎಫ್.ಸಿ ತಂಡವು ಚಾಂಪಿಯನ್ ಪ್ರಶಸ್ತಿಯನ್ನು ಅಲಂಕರಿಸಿದೆ. ರನ್ನರ್ಸ್ ಪ್ರಶಸ್ತಿಗೆ ಸುರ್ಜಿತ್ ನಾಯಕತ್ವದ ರಾಕ್ ಸ್ಟಾರ್ ತಂಡವು ತೃಪ್ತಿಪಟ್ಟುಕೊಂಡಿತ್ತು.

ಜಿದ್ದಾಜಿದ್ದಿನ ಫೈನಲ್ ಪಂದ್ಯದಲ್ಲಿ ಮಾಸ್ಟರ್ ಎಫ್.ಸಿ ತಂಡದ ಸವಾದ್ ಉಸ್ಮಾನ್ ಮೊದಲಾರ್ಧದಲ್ಲಿ ಒಂದು ಗೋಲು ಬಾರಿಸಿ ಮಾಸ್ಟರ್ಸ್ ಎಫ್.ಸಿ ತಂಡಕ್ಕೆ ಮುನ್ನಡೆ ತಂದುಕೊಟ್ಟರು. ದ್ವಿತೀಯಾರ್ಧದಲ್ಲಿ ಸವಾದ್ ಉಸ್ಮಾನ್ ಮತ್ತೊಂದು ಗೋಲು ಬಾರಿಸುವುದರ ಮೂಲಕ ಮಾಸ್ಟರ್ಸ್ ಎಫ್.ಸಿ. ತಂಡವು ೨-೦ ಗೋಲುಗಳ ಅಂತರದಿAದ ಫೈನಲ್ ಪಂದ್ಯವನ್ನು ಗೆದ್ದು ಚಾಂಪಿಯನ್ಸ್ ಪ್ರಶಸ್ತಿಯನ್ನು ಅಲಂಕರಿಸುವುದರ ಮೂಲಕ ಟ್ರೋಫಿಯನ್ನು ತಮ್ಮದಾಗಿಸಿ ಕೊಂಡಿತು. ಇದಕ್ಕೂ ಮೊದಲು ನಡೆದ ಸೆಮಿಫೈನಲ್ ಪಂದ್ಯದಲ್ಲಿ ರಾಕ್ ಸ್ಟಾರ್ ತಂಡವು ಫೀನಿಕ್ಸ್ ಹಂಟರ್ ತಂಡವನ್ನು ಮಣಿಸಿತು.

ಸೆಮಿಫೈನಲ್ ಪಂದ್ಯದ ಮೊದಲಾರ್ಧದಲ್ಲಿ ಫೀನಿಕ್ಸ್ ತಂಡದ ನಾಯಕ ವಿಜಯ್ ಅವರ ಆಕರ್ಷಕ ಗೋಲಿನ ನೆರವಿನಿಂದ ಮುನ್ನಡೆ ದೊರೆಯಿತು. ದ್ವಿತೀಯಾರ್ಧದಲ್ಲಿ ರಾಕ್ ಸ್ಟಾರ್ ತಂಡದ ಅಂತೋಣಿ ಬಾರಿಸಿದ ಗೋಲಿನ ನೆರವಿನಿಂದ ಸಮಬಲ ಸಾಧಿಸಿತು. ಅಂತಿಮವಾಗಿ ರಾಕ್ ಸ್ಟಾರ್ ತಂಡವು ಪೆನಾಲ್ಟಿ ಶೂಟೌಟ್ ನಲ್ಲಿ ೪-೩ ಗೋಲುಗಳ ಅಂತರದಿAದ ಗೆಲುವು ಸಾಧಿಸಿತು.

ಸೆಮಿಫೈನಲ್ ಪಂದ್ಯದ ಹೀರೋ ಆಫ್ ದಿ ಮ್ಯಾಚ್ ಪ್ರಶಸ್ತಿಯನ್ನು ಅಂತೋಣಿ ಪಡೆದುಕೊಂಡರು.ಫೀನಿಕ್ಸ್ ಹಂಟರ್ ತಂಡವು ತೃತೀಯ ಸ್ಥಾನ ಪಡೆದುಕೊಂಡರೆ, ಮೀಡಿಯಾ ಯುನೈಟೆಡ್ ತಂಡವು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟು ಕೊಳ್ಳಬೇಕಾಯಿತು.

ವೈಯಕ್ತಿಕ ಪ್ರಶಸ್ತಿಗಳ ವಿವರ

ಪ್ಲೇಯರ್ ಆಫ್ ದಿ-ಟೂರ್ನಮೆಂಟ್ ಪ್ರಶಸ್ತಿಯನ್ನು ಮಾಸ್ಟರ್ಸ್ ಎಫ್.ಸಿ ತಂಡದ ನಾಯಕ ಇಸ್ಮಾಯಿಲ್ ಕಂಡಕರೆ, ಪಂದ್ಯಾವಳಿಯಲ್ಲಿ ಅತೀ ಹೆಚ್ಚು ಗೋಲು ಬಾರಿಸಿದ ಆಟಗಾರ ಮತ್ತು ಫೈನಲ್ ಪಂದ್ಯದ ಮ್ಯಾನ್ ಆಫ್-ದಿ ಮ್ಯಾಚ್ ಪ್ರಶಸ್ತಿಯನ್ನು ಮಾಸ್ಟರ್ಸ್ ಎಫ್.ಸಿ ತಂಡದ ಮುನ್ನಡೆ ಆಟಗಾರ ಸವಾದ್ ಉಸ್ಮಾನ್, ಅತ್ಯುತ್ತಮ ಡಿಫೆಂಡರ್ ರಾಕ್ ಸ್ಟಾರ್ ತಂಡದ ಸುರ್ಜಿತ್, ಅತ್ಯುತ್ತಮ ಮಹಿಳಾ ಆಟಗಾರ್ತಿ ಮಾಸ್ಟರ್ಸ್ ಎಫ್.ಸಿ ತಂಡದ ಉದಿಯಂಡ ಜಯಂತಿ, ಎಮೆರ್ಜಿಂಗ್ ಆಟಗಾರ ರಾಕ್ ಸ್ಟಾರ್ ತಂಡದ ಎ.ಎಸ್ ಮುಸ್ತಫಾ ಸಿದ್ದಾಪುರ, ಹಾಗೂ ಅತ್ಯುತ್ತಮ ಗೋಲು ಕೀಪರ್ ಪ್ರಶಸ್ತಿಯನ್ನು ಫೀನಿಕ್ಸ್ ಹಂಟರ್ ತಂಡದ ಕಿರಣ್ ರಾಜ್ ಪಡೆದುಕೊಂಡರು.

ಉದ್ಘಾಟನಾ ಸಮಾರಂಭ

ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಮೊದಲ ಬಾರಿಗೆ ಚೆಟ್ಟಳ್ಳಿಯ ಪ್ರೌಢ ಶಾಲಾ ಮೈದಾನದಲ್ಲಿ ಆಯೋಜಿಸ ಲಾಗಿದ್ದ ಪತ್ರಕರ್ತರ ಫುಟ್ಬಾಲ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಬಲ್ಲಾರಂಡ ಕಂಠಿ ಕಾರ್ಯಪ್ಪ, ಪತ್ರಕರ್ತರು ಇಡೀ ಸಮಾಜವನ್ನು ತಿದ್ದಿ, ಸಮಾಜದ ಅಭಿವೃದ್ಧಿಗಾಗಿ ಸದಾ ದುಡಿಯು ತ್ತಿದ್ದಾರೆ. ವಿಶೇಷವಾಗಿ ಕೊಡಗಿನ ಪತ್ರಕರ್ತರು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ಸಂಭವಿಸಿದ ಸಂದರ್ಭದಲ್ಲಿ ಇಡೀ ಕೊಡಗಿನ ಚಿತ್ರಣವನ್ನು ಸರ್ಕಾರದ ಮುಂದಿಟ್ಟು, ಪರಿಹಾರ ಒದಗಿಸಲು ಪ್ರಮುಖ ಕಾರಣ ಜಿಲ್ಲೆಯ ಪತ್ರಕರ್ತರು. ಸದಾ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರ ಕರ್ತರಿಗಾಗಿ ಫುಟ್ಬಾಲ್ ಪಂದ್ಯಾವಳಿ ಆಯೋಜಿಸಿರುವುದು ಶ್ಲಾಘನೀಯ ಎಂದರು. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಸಿ.ಇ ತೀರ್ಥಕುಮಾರ್ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ವಹಿಸಿದ್ದರು.

ವೇದಿಕೆಯಲ್ಲಿ ಚೆಟ್ಟಳ್ಳಿ ಪ್ರೌಢಶಾಲಾ ಆಡಳಿತ ಮಂಡಳಿಯ ಸಂಚಾಲಕ ಮುಳ್ಳಂಡ ರತ್ತು ಚಂಗಪ್ಪ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷೆ ಬಿ.ಆರ್ ಸವಿತಾ ರೈ, ಕೊಡಗು ಪ್ರೆಸ್ ಕ್ಲಬ್ ಪ್ರ.ಕಾರ್ಯದರ್ಶಿ ಎಂ.ಕೆ. ಆದರ್ಶ್, ಕೊಡಗು ಪ್ರೆಸ್ ಕ್ಲಬ್ ಫುಟ್ಬಾಲ್ ಪಂದ್ಯಾವಳಿ ಸಂಚಾಲಕ ವಿನೋದ್ ಕೆ.ಎಂ., ಕುಶಾಲನಗರ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್ ಇದ್ದರು.

ಗಣೇಶ್ ಕುಡೆಕಲ್ ಪ್ರಾರ್ಥಿಸಿ, ಟಿ.ಆರ್. ಪ್ರಭುದೇವ್ ನಿರೂಪಿಸಿ ದರು. ಕೊಡಗು ಪ್ರೆಸ್ ಕ್ಲಬ್ ಹಿರಿಯ ಉಪಾಧ್ಯಕ್ಷ ನವೀನ್ ಡಿಸೋಜಾ ಸ್ವಾಗತಿಸಿ, ಸಂಘಟನಾ ಕಾರ್ಯದರ್ಶಿ ಶಿವರಾಜ್ ವಂದಿಸಿದರು.

ಸಮಾರೋಪ ಸಮಾರಂಭ

ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಕೊಡಗು ಜಿಲ್ಲಾ ಎಸ್‌ಎನ್‌ಡಿಪಿ ಅಧ್ಯಕ್ಷ ಹಾಗೂ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಕೆ ಲೋಕೇಶ್, ಕೊಡಗಿನ ಪತ್ರಕರ್ತರು, ಇತರೆ ಜಿಲ್ಲೆಗಳ ಪತ್ರಕರ್ತರಿಗಿಂತ ವಿಭಿನ್ನವಾಗಿ ಕಾರ್ಯನಿರ್ವ ಹಿಸುತ್ತಿದ್ದಾರೆ. ಜಿಲ್ಲೆಯ ಪತ್ರಕರ್ತರ ಒಂದು ಕುಟುಂಬದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ವಿಷಯ. ಅದಲ್ಲದೇ ಕೊಡಗು ಜಿಲ್ಲೆಯ ಪತ್ರಕರ್ತರು ಸೇರಿ ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರ ಸಂಘವನ್ನು ಸ್ಥಾಪಿಸಿ ರುವುದು ಎಲ್ಲರಿಗೂ ಮಾದರಿಯಾಗಿದೆ ಎಂದರು. ಕೊಡಗು ಜಿಲ್ಲಾ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜಾಸಿರ್ ಮೂರ್ನಾಡು, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ, ವೀರಾಜಪೇಟೆ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ರೆಜಿತ್ ಕುಮಾರ್ ಗುಹ್ಯ ಮಾತನಾಡಿದರು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಬೊಳ್ಳಜಿರ ಬಿ.ಅಯ್ಯಪ್ಪ, ದಾನಿಗಳು ಕೈ ಜೋಡಿಸಿದರೆ ಮಾತ್ರ ಕ್ರೀಡಾಕೂಟ ಗಳು ಮತ್ತು ಕಾರ್ಯಕ್ರಮಗಳು ಆಯೋಜಿಸಲು ಸಾಧ್ಯ. ದಾನಿಗಳ ಸಹಕಾರ ಮುಖ್ಯವಾಗಿ ಬೇಕಾಗಿದೆ ಎಂದು ಹೇಳಿದರು. ಫುಟ್ಬಾಲ್ ಪಂದ್ಯಾವಳಿ ಸಂಚಾಲಕ ಇಸ್ಮಾಯಿಲ್ ಕಂಡಕರೆ ಮಾತನಾಡಿದರು.

ವೇದಿಕೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಉಪಾಧ್ಯಕ್ಷ ಹಾಗೂ ಕೊಡಗು ಪ್ರೆಸ್ ಕ್ಲಬ್ ಸಹಕಾರ ಸಂಘದ ಅಧ್ಯಕ್ಷ ಅಜ್ಜಮಾಡ ರಮೇಶ್ ಇದ್ದರು.

ಕಾರ್ಯಕ್ರಮವನ್ನು ಟಿ.ಆರ್ ಪ್ರಭುದೇವ್ ನಿರೂಪಿಸಿದರು. ಕ್ಲಬ್ ಸದಸ್ಯ ಚಂದನ್ ನಂದರಬೆಟ್ಟು ಸ್ವಾಗತಿಸಿ, ಕ್ಲಬ್ ಸಂಘಟನಾ ಕಾರ್ಯದರ್ಶಿ ಶಿವರಾಜ್ ವಂದಿಸಿದರು.