ಮಡಿಕೇರಿ, ನ. ೫: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಡಿಸೆಂಬರ್ ೩ರಂದು ವಿಶ್ವ ವಿಕಲಚೇತನರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಇದರ ಅಂಗವಾಗಿ ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯ ಸೇವೆ ಮಾಡಿದ ಸಂಸ್ಥೆಗಳಿಗೆ ವಿಶೇಷ ಶಿಕ್ಷಕರಿಗೆ ಮತ್ತು ವೈಯಕ್ತಿಕ ಪ್ರಶಸ್ತಿಗಳನ್ನು ರಾಜ್ಯ ಮಟ್ಟದಲ್ಲಿ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ೨೦೨೪ನೇ ಸಾಲಿನಲ್ಲೂ ಪ್ರಶಸ್ತಿಗಳನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳನ್ನು ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ತಾ. ೧೧ರೊಳಗೆ ದ್ವಿಪ್ರತಿಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಮಡಿಕೇರಿ ಇಲ್ಲಿಗೆ ಸಲ್ಲಿಸಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ : ೦೮೨೭೨-೨೯೫೮೨೯ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.