ಶ್ರೀಮಂಗಲ, ನ. ೫: ವಕ್ಫ್ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ಬೆಂಗಳೂರಿನಲ್ಲಿ ನಡೆಯಿತು.

ವಕ್ಫ್ ವಿಚಾರವಾಗಿ ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಈ ಸಭೆಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್ ಮತ್ತು ಸರಕಾರದ ಹಿರಿಯ ಮಟ್ಟದ ಅಧಿಕಾರಿಗಳು ಭಾಗವಹಿಸಿದರು.

ಸಭೆಯಲ್ಲಿ ರೈತರ ಪಹಣಿ ಬದಲಾವಣೆ ಸಂಬAಧ ಈಗಾಗಲೇ ನೀಡಿರುವ ನೋಟಿಸ್‌ಗಳನ್ನು ತಕ್ಷಣ ವಾಪಸ್ ಪಡೆಯಬೇಕು. ರೈತರ ಸ್ವಾಧೀನದಲ್ಲಿರುವ

(ಮೊದಲ ಪುಟದಿಂದ) ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು. ಕಾನೂನು ಬಾಹಿರವಾಗಿ ಹಾಗೂ ನೋಟಿಸ್ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು ಎಂದು ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.