ಮಡಿಕೇರಿ, ನ. ೫: ಅಸುರಕ್ಷಿತ ಆಹಾರ ಪದಾರ್ಥಗಳ ಉತ್ಪಾದನೆ ಹಾಗೂ ಮಾರಾಟ ತಡೆಗೆ ಸೂಕ್ತ ಕ್ರಮ ವಹಿಸುವಂತೆ ವೀರಾಜಪೇಟೆ ಶಾಸಕ, ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಧಿಕಾರಿಗಳಿಗೆ ಸೂಚಿಸಿದರು. ವಿಧಾನ ಸೌಧದಲ್ಲಿ ತುರ್ತು ಸಭೆ ನಡೆಸಿದ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಂಕಿತ ಅಧಿಕಾರಿ ಡಾ. ಅನಿಲ್ ದಾವನ್, ಕೊಡಗು ಹಾಗೂ ಕೇರಳ ಜಿಲ್ಲೆ ಗಡಿಭಾಗವಾದ ಕುಟ್ಟ, ಮಾಕುಟ್ಟ ಮತ್ತು ಪೆರುಂಬಾಡಿ ವ್ಯಾಪ್ತಿಯಲ್ಲಿ ಕೇರಳದ ಆಹಾರ ಪದಾರ್ಥಗಳು ಸರಬರಾಜಾಗುತ್ತಿದ್ದು. ಆಹಾರ ಪದಾರ್ಥಗಳಲ್ಲಿ ತಯಾರಿಕಾ ದಿನಾಂಕ ಹಾಗೂ ತಯಾರಿಕೆ ಮಾಡುವವರ ವಿವರ ಆಹಾರ ಪದಾರ್ಥಗಳಲ್ಲಿ ಹೆಚ್ಚಿನÀ ಕೃತಕ ಬಣ್ಣಗಳನ್ನು ಸೇರಿಸಿರುವುದರ ಬಗ್ಗೆ ೯೦ ಆಹಾರ ಪದಾರ್ಥಗಳನ್ನು ವಿಶ್ಲೇಷಣೆ ಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಪ್ರಯೋಗಾಲಯದ ವರದಿಗಳಲ್ಲಿ ೩೧ ಆಹಾರ ಮಾದರಿಗಳು ಅಸುರಕ್ಷಿತವೆಂದು, ೪ ಆಹಾರ ಮಾದರಿಯಲ್ಲಿ ಕಡಿಮೆ ಗುಣಮಟ್ಟವಿದೆ ಎಂದು ದೃಢವಾಗಿರುತ್ತದೆ ಎಂದು

(ಮೊದಲ ಪುಟದಿಂದ) ಎ.ಎಸ್. ಪೊನ್ನಣ್ಣ ಅವರಿಗೆ ಮಾಹಿತಿ ನೀಡಿದರು. ಇದು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ. ಕೂಡಲೇ ಅಸುರಕ್ಷಿತವಾದ ಆಹಾರ ಪದಾರ್ಥಗಳನ್ನು ನಿಷೇಧಿಸಿ ಹಾಗೂ ಅಂತಹ ಆಹಾರ ಪದಾರ್ಥಗಳನ್ನು ಮಾರಾಟ ಮಾಡದಂತೆ ತಡೆಯಲು ಅಧಿಕಾರಿಗಳಿಗೆ ಪೊನ್ನಣ್ಣ ಸೂಚಿಸಿದರು.

ಈ ಸಂದರ್ಭ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಧಿಕಾರಿಗಳು ಹಾಜರಿದ್ದರು.