ಸೋಮವಾರಪೇಟೆ: ಕನ್ನಡ ಮಾತನಾಡುವ ಮೂಲಕ ಭಾಷಾ ಬೆಳವಣಿಗೆಗೆ ಎಲ್ಲರೂ ತಮ್ಮ ಕೊಡುಗೆ ನೀಡಬೇಕು ಎಂದು ತಾಲೂಕು ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಹಾಗೂ ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ಅಭಿಪ್ರಾಯಿಸಿದರು.

ತಾಲೂಕು ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಿದ್ದ ೬೯ನೇ ಕನ್ನಡ ರಾಜ್ಯೋತ್ಸವ ಸಮಾರಂಭದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಕರ್ನಾಟಕ ಏಕೀಕರಣಕ್ಕೆ ಸಾಹಿತಿಗಳು, ಕವಿಗಳು, ಕನ್ನಡಪರ ಹೋರಾಟಗಾರರು ಪ್ರತಿಕಾ ಮಾಧ್ಯಮದವರು ತಮ್ಮದೇ ಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದರು.

ಹರಿದು ಹಂಚಿಹೋಗಿದ್ದ ಕನ್ನಡ ನಾಡನ್ನು ಒಂದುಗೂಡಿಸಲು ಆಲೂರು ವೆಂಕಟರಾಯರು ೧೯೦೫ರಲ್ಲಿ ಕರ್ನಾಟಕ ಏಕೀಕರಣ ಚಟುವಟಿಕೆಗಳೊಂದಿಗೆ ರಾಜ್ಯವನ್ನು ಏಕೀಕರಿಸುವ ಕನಸು ಕಂಡ ಮೊದಲ ವ್ಯಕ್ತಿಯಾದರು. ೧೯೫೦ರಲ್ಲಿ ಭಾರತವು ಗಣರಾಜ್ಯವಾಯಿತು. ನಂತರ ನಿರ್ದಿಷ್ಟ ಪ್ರದೇಶದಲ್ಲಿ ಮಾತನಾಡುವ ಭಾಷೆಯ ಆಧಾರದ ಮೇಲೆ ದೇಶದಲ್ಲಿ ಪ್ರಾಂತ್ಯಗಳು ರಚನೆಯಾದವು. ೧೯೫೬ ನವೆಂಬರ್ ೧ರಂದು ಮೈಸೂರು ರಾಜ್ಯ ಸ್ಥಾಪನೆಯಾಯಿತು. ೧೯೭೩ ನ.೧ರಂದು ದೇವರಾಜು ಅರಸು ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭ ಕರ್ನಾಟಕ ರಾಜ್ಯವಾಗಿ ಬದಲಾಯಿತು ಎಂದು ಇತಿಹಾಸವನ್ನು ವಿವರಿಸಿದರು.

ಮುಖ್ಯ ಭಾಷಣಕಾರರಾಗಿ ಭಾಗವಹಿಸಿದ್ದ ಹೆಮ್ಮನೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸ್ನೇಹಬಸಮ್ಮ ಮಾತನಾಡಿ, ಜ್ಞಾನಾರ್ಜನೆಗಾಗಿ ಎಲ್ಲಾ ಭಾಷೆಗಳನ್ನು ಕಲಿತರೆ ಒಳ್ಳೆಯದು. ಆದರೆ ಕನ್ನಡ ತಮ್ಮ ಹೃದಯದ ಭಾಷೆಯಾಗಬೇಕು. ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ಕನ್ನಡದಲ್ಲೇ ಮಾತನಾಡುತ್ತೇನೆ. ಬರೆಯುತ್ತೇನೆ. ನಿತ್ಯ ವ್ಯವಹಾರದಲ್ಲಿ ಕನ್ನಡವನ್ನೇ ಬಳಸುತ್ತೇನೆ. ಕನ್ನಡ ನಾಡು, ನುಡಿ, ಸಂಸ್ಕೃತಿ, ಪರಂಪರೆ ಉಳಿಸಲು ಸದಾ ಕಟ್ಟಿಬದ್ಧರಾಗಿರುತ್ತೇವೆ ಎಂದು ನಾವೆಲ್ಲರೂ ನಿಶ್ಚಯಿಸಬೇಕಾಗಿದೆ ಎಂದು ಹೇಳಿದರು.

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ನಿವೃತ್ತ ಉಪನ್ಯಾಸಕಿ ತಿಲೋತ್ತಮೆ ನಂದಕುಮಾರ್ ಮತ್ತು ಶಿಕ್ಷಕ ಸುಕುಮಾರ್ ತೊರೆನೂರು ಅವರುಗಳನ್ನು ಸನ್ಮಾನಿಸಲಾಯಿತು. ಬೆಳಿಗ್ಗೆ ೯ಗಂಟೆಗೆ ಜೇಸಿ ವೇದಿಕೆಯಿಂದ ಕರ್ನಾಟಕ ಸಾಂಸ್ಕೃತಿಕ ವೈಭವವನ್ನು ಬಿಂಬಿಸುವ ವಿವಿಧ ಶಾಲಾ ಕಾಲೇಜುಗಳ ಸ್ಥಬ್ದ ಚಿತ್ರಗಳ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿ ನೋಡುಗರನ್ನು ರಂಜಿಸಿದವು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಸಮಾರಂಭದ ವೇದಿಕೆಯಲ್ಲಿ ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಿ.ಎಸ್.ಗೀತಾ, ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎಸ್.ಡಿ.ವಿಜೇತ್, ಸಮಿತಿಯ ಸದಸ್ಯರಾದ ಎಚ್.ಸಿ.ನಾಗೇಶ್, ನಂದಕುಮಾರ್, ಭುವನೇಶ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ ಕುಮಾರ್, ಬಿಇಒ ಎಸ್.ಭಾಗ್ಯಮ್ಮ ಮತ್ತಿತರ ಗಣ್ಯರು ಇದ್ದರು.

ಕೂಡಿಗೆ: ಕುಶಾಲನಗರ ತಾಲೂಕಿನ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವದ ಸಂದೇಶ ನೀಡಿದ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ಕೆ.ಎಸ್.ಹರೀಶ್ ಮಾತನಾಡಿ, ವಿದ್ಯಾರ್ಥಿಗಳು ಕನ್ನಡ ರಾಜ್ಯೋತ್ಸವದ ಇತಿಹಾಸ,ಪರಂಪರೆಯ ಮಹತ್ವವನ್ನು ತಿಳಿದುಕೊಳ್ಳಬೇಕು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ಕರ್ನಾಟಕ ನಮ್ಮ ಹೆಮ್ಮೆಯ ರಾಜ್ಯ, ಕನ್ನಡ ನಮ್ಮ ಮಾತೃಭಾಷೆ. ವಿದ್ಯಾರ್ಥಿಗಳು ಭಾಷಾಭಿಮಾನ ಬೆಳೆಸಿಕೊಂಡು ಕನ್ನಡ ನಾಡು- ನುಡಿ, ಕಲೆ- ಸಂಸ್ಕೃತಿ, ಪರಂಪರೆಯನ್ನು ಎತ್ತಿ ಹಿಡಿಯಬೇಕು ಎಂದರು.

ಕನ್ನಡ ರಾಜ್ಯೋತ್ಸವದ ಮಹತ್ವ ಕುರಿತು ಮಾತನಾಡಿದ ಕನ್ನಡ ಭಾಷಾ ಶಿಕ್ಷಕ ಕೆ.ಗೋಪಾಲಕೃಷ್ಣ, ಕನ್ನಡದ ಕಂಪು ಪಸರಿಸುವ ಈ ವಿಶೇಷ ದಿನದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕರ್ನಾಟಕ, ಕನ್ನಡ ಹಬ್ಬದ ಇತಿಹಾಸ, ಮಹತ್ವ ತಿಳಿದುಕೊಳ್ಳಬೇಕು ಎಂದರು.

ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ.ದಯಾನAದ ಪ್ರಕಾಶ್ ಮಾತನಾಡಿ,ಕನ್ನಡ ರಾಜ್ಯದ ಏಕೀಕರಣಕ್ಕಾಗಿ ಹೋರಾಡಿದ ಮಹಾತ್ಮರನ್ನು ಸ್ಮರಿಸಿ, ಗೌರವಿಸುವ ಹಾಗೂ ಕನ್ನಡಾಭಿಮಾನವನ್ನು ಮೆರೆಯಬೇಕು ಎಂದರು. ಶಿಕ್ಷಕರಾದ ಬಿ.ಎನ್.ಸುಜಾತ, ಬಿ.ಡಿ.ರಮ್ಯ, ಎಸ್.ಎಂ.ಗೀತಾ, ಅನ್ಸಿಲಾ ರೇಖಾ, ಕೆ.ಟಿ.ಸೌಮ್ಯ , ವಿದ್ಯಾರ್ಥಿಗಳು ಹಾಜರಿದ್ದರು.ಕೂಡಿಗೆ: ಕನ್ನಡ ನಾಡಿನಲ್ಲಿರುವಂತಹ ಭಾಷಾ ಶ್ರೀಮಂತಿಕೆ ಜಗತ್ತಿನ ಯಾವುದೇ ಭಾಷೆಯಲ್ಲಿ ಇಲ್ಲ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರರವರು ಅಭಿಪ್ರಾಯಿಸಿದರು.

ಜ್ಞಾನ ಕಾವೇರಿ ಕ್ಯಾಂಪಸ್, ಚಿಕ್ಕ ಅಳುವಾರದಲ್ಲಿ, ಧ್ವಜಾರೋಹಣ ನೆರವೇರಿಸಿ, ಭುವನೇಶ್ವರಿ ತಾಯಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, ಕನ್ನಡ ನಾಡಿನಲ್ಲಿ ಹುಟ್ಟಿರುವ ಹೆಮ್ಮೆ ನಮ್ಮದು. ಸಾಂಸ್ಕೃತಿಕವಾಗಿ ಮತ್ತು ಭೌಗೋಳಿಕವಾಗಿ ತನ್ನದೇ ಆದ ವೈಶಿಷ್ಟತೆಯನ್ನು ಹೊಂದಿರುವ ನಮ್ಮ ಕರ್ನಾಟಕ ರಾಜ್ಯವು ಪ್ರಾಕೃತಿಕವಾಗಿ ಮತ್ತು ವೈಜ್ಞಾನಿಕವಾಗಿ ಪ್ರಾದೇಶಿಕವಾರು ಜಿಲ್ಲೆಗಳಾಗಿ ವಿಂಗಡಣೆಗೊAಡಿದ್ದು, ಇಲ್ಲಿನ ಭಾಷೆ, ಮಣ್ಣು ಮತ್ತು ಜೀವರಾಶಿಗಳಿಂದ ಸಂಪತ್ಭರಿತವಾಗಿರುವುದನ್ನು ಕಾಣಬಹುದು.

ಕರ್ನಾಟಕದಲ್ಲಿ ಕನ್ನಡ ತಾಯಿ ಮಕ್ಕಳಾಗಿ ಕನ್ನಡ ಭಾಷೆಯನ್ನು ಬಳಸುವ ಮೂಲಕ ಬೆಳೆಸಬೇಕು ಮತ್ತು ಉಳಿಸಬೇಕು. ಆದರೆ ಇಂದಿಗೂ ಅದೆಷ್ಟೋ ಮಕ್ಕಳಿಗೆ ಸರಿಯಾಗಿ ಕನ್ನಡವನ್ನು ಮಾತನಾಡುವುದಕ್ಕೆ ಬರುವುದಿಲ್ಲ. ಬದಲಿಗೆ ಇಂಗ್ಲೀಷ್ ಭಾಷೆಯನ್ನು ಮಾತನಾಡುವುದೇ ಬಹಳ ದೊಡ್ಡ ಗೌರವ ಎಂಬ ಕಲ್ಪನೆಯಲ್ಲಿರುವುದು ಕಂಡುಬರುತ್ತಿದೆ. ಸುವರ್ಣ ಕರ್ನಾಟಕ ಸಂಭ್ರಮದಲ್ಲಿರುವ ನಾವು, ಕೇವಲ ನವೆಂಬರ್ ತಿಂಗಳಿಗೆ ಮಾತ್ರ ಕರ್ನಾಟಕ, ಕನ್ನಡ, ಕನ್ನಡಿಗರ ಬಗೆಗಿನ ಕಾಳಜಿಯನ್ನು ತೋರಬಾರದು. ವರ್ಷದ ೩೬೫ ದಿನಗಳು ಕೂಡ ಕನ್ನಡ ನಾಡು-ನುಡಿ, ಸಾಹಿತ್ಯ ಹಾಗೂ ಸಂಸ್ಕೃತಿಯ ಮಹತ್ವದ ಬಗೆಗಿನ ವಿಚಾರವನ್ನು ಎಲ್ಲೆಡೆ ಪಸರಿಸುವಂತಹ ಕೆಲಸಗಳನ್ನು ಮಾಡಬೇಕಾಗಿದೆ ಎಂದು ತಿಳಿಸಿದರು.ಇದೇ ಸಂದರ್ಭದಲ್ಲಿ ವಿವಿಧ ವಿಭಾಗದ ಉಪನ್ಯಾಸಕರು, ಆಡಳಿತ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿನಿ ಕುಮಾರಿ ದೀಪ್ತಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.ಐಗೂರು : ಐಗೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ೬೯ನೇ ಕನ್ನಡ ರಾಜ್ಯೋತ್ಸವ ಸಮಾರಂಭವು ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಉಮೇಶ್ ಅವರು ರಾಷ್ಟçಧ್ವಜದ ಧ್ವಜಾರೋಹಣವನ್ನು ನೆರವೇರಿಸಿದರು. ನಂತರ ನಾಡ ಧ್ವಜವನ್ನು ಪ್ರೌಢಶಾಲಾ ವಿಭಾಗದ ಪ್ರಬಾರಿ ಮುಖ್ಯೋಪಾಧ್ಯಾಯರಾದ ಮಂಜುನಾಥ ಅವರು ನೆರವೇರಿಸಿದರು.

ರಾಜ್ಯೋತ್ಸವದ ಪ್ರಯುಕ್ತ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಲಾಯಿತು. ವಿದ್ಯಾರ್ಥಿಗಳಿಂದ ಕನ್ನಡ ನಾಡು ನುಡಿಯ ಕುರಿತ ಭಾಷಣ, ನೃತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಶಿಕ್ಷಕಿ ರೇಖಾ ಅವರು ನಡೆಸಿಕೊಟ್ಟರು. ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಪ್ಪನವರು ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಗುಲಾಬಿಯವರು ವಂದನಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮುಳ್ಳೂರು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ೬೯ನೇ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲಾ ಮುಂಭಾಗದಲ್ಲಿ ಬೃಹತ್ ಕರ್ನಾಟಕದ ನಕ್ಷೆಯನ್ನು ಚಿತ್ರಿಸಿ ಹಚ್ಚೇವು ಕನ್ನಡದ ದೀಪ ನೃತ್ಯದೊಂದಿಗೆ ಕರ್ನಾಟಕದ ನಕ್ಷೆಯ ಸುತ್ತಲೂ ಹಣತೆಯನ್ನು ಹಚ್ಚಲಾಯಿತು. ರಾಷ್ಟçಧ್ವಜ ಮತ್ತು ಕರ್ನಾಟಕದ ಬಾವುಟ ಎರಡನ್ನು ಧ್ವಜರೋಹಣಗೊಳಿಸಿದ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಶಾಲಾ ಆವರಣದ ಕರ್ನಾಟಕ ನಕ್ಷೆಯ ಸುತ್ತಲೂ ಹಳೆಗನ್ನಡ ಕವಿಗಳಿಂದ ಹಿಡಿದು ಇತ್ತೀಚಿನ ಉದಯೋನ್ಮುಖ ಕವಿಗಳವರೆಗೂ ಭಾವಚಿತ್ರವನ್ನು ಪ್ರದರ್ಶಿಸಿ ವಿದ್ಯಾರ್ಥಿಗಳಿಗೆ ಕವಿಗಳ ಮತ್ತು ಅವರ ಸಾಹಿತ್ಯದ ಪರಿಚಯ ಮಾಡಿಕೊಡಲಾಯಿತು. ಇಡಿ ಶಾಲಾ ವಾತಾವರಣವೇ ಹಳದಿ ಮತ್ತು ಕೆಂಪು ಬಾವುಟಗಳಿಂದ ತುಂಬಿ ಕನ್ನಡದ ಕಂಪನ್ನು ಬೀರುವಂತೆ ಸೃಷ್ಟಿಸಲಾಯಿತು.

ವಿದ್ಯಾರ್ಥಿಗಳು ಶಾಲಾ ಮುಂಭಾಗದಲ್ಲಿ ರೂಪುಗೊಂಡ ಸಾಹಿತ್ಯ ಕುಟೀರದೊಳಗೆ ವಿವಿಧ ಪ್ರಸಿದ್ದ ಲೇಖಕರ ಕೃತಿಗಳನ್ನು ಮತ್ತು ವಿವಿಧ ಸರಳ ಕಥಾ ಪುಸ್ತಕಗಳನ್ನು ಓದುವ ಮೂಲಕ ಸಾಹಿತ್ಯದಲ್ಲಿನ ಅಭಿರುಚಿಯನ್ನು ಬೆಳೆಸಿಕೊಂಡರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ವಿಸ್ತೀರ್ಣ, ರಾಜ್ಯದ ಬೆಳವಣಿಗೆ, ಕರ್ನಾಟಕವನ್ನು ಆಳಿದ ರಾಜ ಮನೆತನದವರು, ಸಾಹಿತಿಗಳು, ಕವಿಗಳು, ಕರ್ನಾಟಕದ ವಿಶೇಷತೆ ಇನ್ನು ಮುಂತಾದವುಗಳ ಬಗ್ಗೆ ತಮ್ಮ ತಮ್ಮ ಭಾಷಣದ ಮೂಲಕ ತಿಳಿಸಿದರು.

ಶಾಲೆಯ ಕ್ರಿಯಾಶೀಲ ಮುಖ್ಯ ಶಿಕ್ಷಕ ಸಿ.ಎಸ್.ಸತೀಶ್ ಅವರ ನೇತೃತ್ವದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಹ ಶಿಕ್ಷಕರು, ಪೋಷಕ ಸಮಿತಿ ಸದಸ್ಯರು ಮತ್ತು ಗ್ರಾಮಸ್ಥರು ಹಾಜರಿದ್ದರು.ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆಯ ಸಂಜೀವಿನಿ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ೬೯ ನೇ ಕನ್ನಡ ರಾಜ್ಯೋತ್ಸವವನ್ನು ಸಂಘದ ಕಚೇರಿ ಆವರಣದಲ್ಲಿ ಸಂಭ್ರಮದಿAದ ಆಚರಿಸಲಾಯಿತು.

ಸಂಘದ ಅಧ್ಯಕ್ಷ ಕೆ.ಎ.ನಾಗೇಶ್ ಧ್ವಜಾರೋಹಣ ನೆರವೇರಿಸಿ, ಕನ್ನಡ ನಾಡು-ನುಡಿ, ನೆಲ-ಜಲದ ಬಗ್ಗೆ ಮಾತನಾಡಿದರು.ಪ್ರಧಾನ ಕಾರ್ಯದರ್ಶಿ ಡಿ.ಆರ್.ವೇದಕುಮಾರ್, ಉಪ ಕಾರ್ಯದರ್ಶಿ ಶನಿವಾರಸಂತೆ: ಪಟ್ಟಣದ ಶ್ರೀ ವಿಘ್ನೇಶ್ವರ ಆಟೋ ಚಾಲಕರ ಹಾಗೂ ಮಾಲೀಕರ ಸಂಘದ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಆಟೋ ನಿಲ್ದಾಣದಲ್ಲಿ ೬೯ ನೇ ಕನ್ನಡ ರಾಜ್ಯೋತ್ಸವವನ್ನು ಸರಳ ಹಾಗೂ ಆಚರಿಸಲಾಯಿತು.

ಗ್ರಾಮ ಪಂಚಾಯಿತಿ ಸದಸ್ಯ ಆದಿತ್ಯ ಗೌಡ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಅವರು ಮಾತನಾಡಿ, ಕನ್ನಡ ರಾಜ್ಯೋತ್ಸವ ಕನ್ನಡ ನಾಡಿನ ಹುಟ್ಟುಹಬ್ಬವಾಗಿದೆ. ಇದು ಒಂದು ದಿನದ ಆಚರಣೆಯಾಗದೇ ನಿತ್ಯದ ಆಚರಣೆಯಾಗಬೇಕು, ದಿನನಿತ್ಯದ ಚಟುವಟಿಕೆಗಳಲ್ಲಿ ಸುಮಧುರ, ಸುಂದರ, ಸರಳ ಪ್ರಾಚೀನ ಭಾಷೆ ಕನ್ನಡಕ್ಕೆ ಆದ್ಯತೆ ನೀಡಬೇಕು, ನೆಲ, ಜಲ, ಸಂಸ್ಕೃತಿಯ ಬಗ್ಗೆ ಪ್ರತಿ ಕನ್ನಡಿಗನಲ್ಲೂ ಅಭಿಮಾನವಿರಬೇಕು ಎಂದರು.

ನೂರಕ್ಕೂ ಅಧಿಕ ಹೂವಿನಿಂದ ಅಲಂಕೃತ ಆಟೋರಿಕ್ಷಾಗಳು ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ಗುಡುಗಳಲೆಯ ಶಿವಕುಮಾರ ಸ್ವಾಮೀಜಿ ವೃತ್ತದವರೆಗೂ ಮೆರವಣಿಗೆಯಲ್ಲಿ ಸಾಗಿ ಜನಮನ ಸೆಳೆದವು. ಸಂಘದ ಅಧ್ಯಕ್ಷ ಬಿ.ಸಿ.ರವಿ, ಗೌರವಾಧ್ಯಕ್ಷ ವಿಜಯಕುಮಾರ್, ಉಪಾಧ್ಯಕ್ಷ ಅಹಮ್ಮದ್ ಅಶ್ರಫ್, ಗೌರವ ಕಾರ್ಯದರ್ಶಿ ಶುಕ್ಲಾಂಬರ್ ಹಾಗೂ ಸದಸ್ಯರು ಹಾಜರಿದ್ದರು.

ವೀರಾಜಪೇಟೆ : ಸಮೀಪದ ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲೆಯ ಮುಖ್ಯ ಶಿಕ್ಷಕಿ ಕಮಲಮ್ಮ ರವರು ದ್ವಜಾರೋಹಣವನ್ನು ನೆರವೇರಿಸಿ ಕನ್ನಡ ನಾಡು, ನುಡಿ, ಭಾಷೆಯ ಮಹತ್ವದ ಬಗ್ಗೆ ಮಾತನಾಡಿದರು. ಮತ್ತು ಕನ್ನಡಾಭಿಮಾನವನ್ನು ಬೆಳೆಸಿಕೊಳ್ಳುವಂತೆ ಮಕ್ಕಳಿಗೆ ಕರೆ ನೀಡಿದರು.

ಕನ್ನಡಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಲಾಯಿತು. ಶಾಲಾ ಮಕ್ಕಳು ನಾಡಗೀತೆ ಹಾಗೂ ಕನ್ನಡ ನಾಡು ನುಡಿಯ ಇತರ ಗೀತೆಗಳನ್ನು ಹಾಡಿದರು. ಈ ಸಂದರ್ಭದಲ್ಲಿ ಸಹ ಶಿಕ್ಷಕಿ ಕಮರುನ್ನಿಸ, ಎಸ್. ಡಿ. ಎಂ. ಸಿ. ಅಧ್ಯಕ್ಷರಾದ ಲತಾ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.

ಇಪ್ತಿಕರ್ ಪಾಶ, ಗೌರವಾಧ್ಯಕ್ಷ ಇಬ್ರಾಹಿಂ, ಸದಸ್ಯ ಜಯಪ್ಪ ದಿನದ ಮಹತ್ವದ ಕುರಿತು ಮಾತನಾಡಿದರು.

ಸಂಘದ ಉಪಾಧ್ಯಕ್ಷ ಶೇಖರ್, ನಿರ್ದೇಶಕರಾದ ಬಷೀರ್ ಅಹಮ್ಮದ್, ಎಲ್.ಬಿ.ರವಿ, ಮುನ್ನಾ, ಸೈಯದ್ ಜಾವಿದ್, ಮಹದೇಶ್ವರ್, ಸದಸ್ಯರಾದ ಮಧು, ಪೃಥ್ವಿರಾಜ್, ರವಿ, ತ್ಯಾಗರಾಜ್, ಧರ್ಮ, ಕೆ.ಎನ್.ಶಿವಕುಮಾರ್, ಸೈಯದ್, ರಜಾಕ್, ಇತರರು ಹಾಜರಿದ್ದರು.ಶನಿವಾರಸಂತೆ: ಪಟ್ಟಣದ ಮಧ್ಯಪೇಟೆಯ ಜನರಲ್ ಕಾರ್ಯಪ್ಪ ಆಟೋ ನಿಲ್ದಾಣದಲ್ಲಿ ಆಟೋ ಚಾಲಕರು ೬೯ ನೇ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಿದರು. ಶನಿವಾರಸಂತೆ ಪೊಲೀಸ್ ಠಾಣೆಯ ಪಿಎಸ್‌ಐ ಚಂದ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.ಮುಖ್ಯ ಅತಿಥಿ ಡಾ.ಪುಟ್ಟರಾಜ್ ಮಾತನಾಡಿದರು.ಸಂಘದ ಪದಾಧಿಕಾರಿಗಳಾದ ವೀರಭದ್ರ, ಸತ್ಯವೇಲು, ಸುರೇಶ್, ಮಂಜುನಾಥ್, ನಂದ, ಕಾರ್ತಿಕ್, ತೀರ್ಥರಾಜ್ ಇತರರು ಹಾಜರಿದ್ದರು.

ಸಿದ್ದಾಪುರ: ಇಲ್ಲಿಯ ಆಟೋ ರಿಕ್ಷಾ ನಿಲ್ದಾಣದಲ್ಲಿ ಆಟೋ ಚಾಲಕರ ಸಂಘ, ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೆ ಗೌಡರ ಬಣ) ವೀರಾಜಪೇಟೆ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ರಾಜ್ಯೋತ್ಸವವನ್ನು ಆಚರಿಸಲಾಯಿತು. ವೀರಾಜಪೇಟೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ರೆಜಿತ್ ಕುಮಾರ್ ಗುಹ್ಯ ಧ್ವಜಾರೋಹಣ ನೆರವೇರಿಸಿದರು.

ಗಡಿ ಪ್ರದೇಶವಾದ ಸಿದ್ದಾಪುರ ಪಟ್ಟಣದ ಯಾವುದೇ ಮಳಿಗೆಗಳಲ್ಲಿ ಕನ್ನಡ ಧ್ವಜವನ್ನು ಹಾರಿಸದೆ ಇರುವುದು ವಿಷಾದನೀಯ. ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ, ಕನ್ನಡ ಸಾಹಿತ್ಯ ಪರಿಷತ್ತು ಈ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಬಾವ ಮಾಲ್ದಾರೆ ಕನ್ನಡ ಭಾಷೆ ಸಂಸ್ಕೃತಿ ಉಳಿವಿಗೆ ಎಲ್ಲರೂ ಕೈಜೋಡಿಸಬೇಕು, ಮನೆಯಲ್ಲಿ ಮಕ್ಕಳಿಗೂ ಕನ್ನಡ ಕಲಿಸುವ ಮೂಲಕ ಕನ್ನಡ ಭಾಷೆ ಬೆಳೆಸಬೇಕು ಎಂದರು.

ಕರ್ನಾಟಕ ರಕ್ಷಣಾ ವೇದಿಕೆಯ ಕುಶಾಲನಗರ ಹೋಬಳಿ ಅಧ್ಯಕ್ಷ ಸಂತೋಷ್ ಮಾತನಾಡಿ ಬೀಸುವ ಗಾಳಿ, ಹರಿಯುತ್ತಿರುವ ನೀರಿನಂತೆ ಮನುಷ್ಯನು ಕೂಡ ಅಲೆಮಾರಿ ಆಗಿದ್ದು ಎಲ್ಲೆ ನೆಲೆಸಿದ್ದರು ಅಲ್ಲಿನ ನಾಡು ನುಡಿಯನ್ನು ಗೌರವಿಸಿ ಪೋಷಿಸುವ ಕೆಲಸ ಆಗಬೇಕು ಎಂದರು.

ಈ ಸಂದರ್ಭದಲ್ಲಿ ಕರವೆ ಕುಶಾಲನಗರ ತಾಲೂಕು ಉಪಾಧ್ಯಕ್ಷ ರಜಪ್ಪಣ್ಣ, ನೆಲ್ಯಹುದಿಕೇರಿ ಹೋಬಳಿ ಅಧ್ಯಕ್ಷ ವಿನು, ವೀರಾಜಪೇಟೆ ತಾಲೂಕು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಎಸ್ ಮುಸ್ತಫ, ಆಟೋ ಚಾಲಕರ ಸಂಘದ ಅಧ್ಯಕ್ಷ ಸಲೀಂ, ಡೋಮಿನೋಸ್ ಸಂಘದ ಅಧ್ಯಕ್ಷ ಶೌಕತ್ ಸೇರಿದಂತೆ ಸ್ಥಳೀಯರು ಹಾಜರಿದ್ದರು.