ವೀರಾಜಪೇಟೆ, ನ. ೫: ವೀರಾಜಪೇಟೆಯ ಸೈಂಟ್ ಆ್ಯನ್ಸ್ ಪದವಿ ಕಾಲೇಜಿನ ಕನ್ನಡ ಭಾಷಾ ವಿಭಾಗ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆಸಲ್ಪಡುತ್ತಿರುವ "ನುಡಿನೃತ್ಯ ಸಂಭ್ರಮ-೨೪"ಕ್ಕೆ ಚಾಲನೆಯನ್ನು ನೀಡಲಾಯಿತು.
ಕನ್ನಡ ಭಾಷಾ ವಿಭಾಗ ಹಾಗೂ ಸಾಹಿತ್ಯ ಸಂಘ ಮತ್ತು ವೀರಾಜಪೇಟೆ ಕನ್ನಡ ಸಾಹಿತ್ಯ ಪರಿಷತ್ತು ಇವುಗಳ ಸಹಭಾಗಿತ್ವದಲ್ಲಿ ಈ ವರ್ಷ "ನುಡಿ ನೃತ್ಯ ಸಂಭ್ರಮ-೨೪ ನುಡಿಹಬ್ಬ ಸೈಂಟ್ ಆವರಣದಲ್ಲಿ ಜರುಗುತ್ತಿದ್ದು ಇದರ ಪ್ರಯುಕ್ತ ಮೊದಲಿಗೆ ಕೋಟಿ ಕಂಠ ಗಾಯನವನ್ನು ಎಲ್ಲಾ ವಿಭಾಗದ ಸಹ ಪ್ರಾಧ್ಯಾಪಕರುಗಳು ಹಾಗೂ ಕನ್ನಡ ವಿದ್ಯಾರ್ಥಿ ಬಳಗದ ಎಲ್ಲಾ ವಿದ್ಯಾರ್ಥಿಗಳು ಹಾಡಿದರು.
ಪದವಿ ವಿಭಾಗದ ವ್ಯವಸ್ಥಾಪಕರಾದ ಮದಲೈ ಮುತ್ತು ಅವರು ಸೈಂಟ್ ಆ್ಯನ್ಸ್ ನುಡಿನೃತ್ಯ ಸಂಭ್ರಮದ ಪೋಸ್ಟರ್ ಅನ್ನು ಬಿಡುಗಡೆ ಮಾಡಿ ಶುಭ ಕೋರಿದರು.
ಕನ್ನಡ ಭಾಷಾ ವಿಭಾಗದ ಮುಖ್ಯಸ್ಥರಾದ ಅರ್ಜುನ್
ಮೌರ್ಯ ಅವರು ನಗಾರಿ ಬಾರಿಸುವುದರ ಮೂಲಕ ನುಡಿ ನೃತ್ಯ ಸಂಭ್ರಮ-೨೪ ಕ್ಕೆ ಚಾಲನೆ ನೀಡಿದರು. ಕನ್ನಡ ವಿದ್ಯಾರ್ಥಿ ಬಳಗದ ವಿದ್ಯಾರ್ಥಿಗಳು ಆಕರ್ಷಕ ನೃತ್ಯ ಪ್ರದರ್ಶನವನ್ನು ನೀಡಿದರು.
ಇದೇ ಸಂದರ್ಭದಲ್ಲಿ ವೀರಾಜಪೇಟೆ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ರಾಜೇಶ್ ಪದ್ಮನಾಭ, ಪ್ರಾಂಶುಪಾಲರಾದ ತೃಪ್ತಿ ಬೋಪಣ್ಣ, ಐಕ್ಯೂಎಸಿ ಸಂಚಾಲಕಿ ಹೇಮ ಬಿ.ಡಿ, ಕನ್ನಡ ವಿಭಾಗದ ಪ್ರಾಧ್ಯಾಪಕಿ ಪ್ರತಿಮಾ ರೈ, ವಿಭಾಗಗಳ ಮುಖ್ಯಸ್ಥರು, ಎಲ್ಲಾ ಸಹ ಪ್ರಾಧ್ಯಾಪಕರು, ಕನ್ನಡ ವಿದ್ಯಾರ್ಥಿ ಬಳಗದ ಪದಾಧಿಕಾರಿಗಳು ಮತ್ತು ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಈ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು. ಅರ್ಥಶಾಸ್ತç ಪ್ರಾಧ್ಯಾಪಕರಾದ ಬಿ.ಎನ್. ಶಾಂತಿ ಭೂಷಣ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.