ಮಡಿಕೇರಿ, ನ. ೬: ಪ್ರಸಕ್ತ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-೧ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ” ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ತಾ. ೧೦ ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಕವಿತಾ ತಿಳಿಸಿದ್ದಾರೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ: hಣಣಠಿs://ssಠಿ.ಠಿosಣmಚಿಣಡಿiಛಿ. ಞಚಿಡಿಟಿಚಿಣಚಿಞಚಿ.gov.iಟಿ
ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯ ಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್‌ಸೈಟ್ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ನ್ನು ಹಾಗೂ ಇಲಾಖಾ ಸಹಾಯವಾಣಿ ಸಂಖ್ಯೆ: ೮೦೫೦೭೭೦೦೦೫ ನ್ನು ಸಂಪರ್ಕಿಸಬಹುದು. ರಾಜ್ಯ ವಿದ್ಯಾರ್ಥಿ ವೇತನ ತಂತ್ರಾAಶದ ಸಹಾಯವಾಣಿ ಮೇಲ್: ಠಿosಣmಚಿಣಡಿiಛಿheಟಠಿ@ ಞಚಿಡಿಟಿಚಿಣಚಿಞಚಿ.gov.iಟಿ ದೂ: ೦೮೨೭೨-೨೯೫೬೨೮ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.