ಉಗ್ರರಿಗೆ ಆಶ್ರಯ ನೀಡುವವರ ಮನೆಗಳು ನೆಲಸಮ; ಲೆಫ್ಟಿನೆಂಟ್ ಗವರ್ನರ್ ಎಚ್ಚರಿಕೆ
ಶ್ರೀನಗರ, ನ. ೬: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಉಪಟಳ ಉಲ್ಬಣಗೊಂಡಿದ್ದು, ಈ ನಡುವಲ್ಲೇ ಭಯೋತ್ಪಾದಕರಿಗೆ ಆಶ್ರಯ ನೀಡುವವರಿಗೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಅಮಾಯಕರಿಗೆ ಹಾನಿಗಳಾಗದಂತೆ ಎಚ್ಚರಿಕೆ ವಹಿಸುವಂತೆ ಭದ್ರತಾ ಪಡೆಗಳಿಗೆ ಸೂಚನೆ ನೀಡಲಾಗಿದೆ. ಆದರೆ, ಅಪರಾಧಿಗಳನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡುವುದಿಲ್ಲ. ಭಯೋತ್ಪಾದಕರಿಗೆ ಆಶ್ರಯ ನೀಡುವ ಮನೆಗಳನ್ನು ನೆಲಸಮಗೊಳಿಸಲಾಗುವುದು ಎಂದು ಕಠಿಣ ಎಚ್ಚರಿಕೆ ನೀಡಿದರು. ಭಯೋತ್ಪಾದಕರಿಗೆ ಆಶ್ರಯ ನೀಡುವವರ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ ಎಂದು ಕೆಲವರು ಹೇಳಿಕೆ ನೀಡುತ್ತಿದ್ದಾರೆ. ಇದು ದೌರ್ಜನ್ಯವಲ್ಲ. ಇದು ನ್ಯಾಯ ಒದಗಿಸುತ್ತಿರುವುದು ಎಂದು ನಾನು ನಂಬುತ್ತೇನೆ, ಈ ಕ್ರಮ ಭವಿಷ್ಯದಲ್ಲಿಯೂ ಮುಂದುವರೆಯುತ್ತದೆ ಎಂದರು.
ಹೆಬ್ಬೆ ಜಲಪಾತದಲ್ಲಿ ಮುಳುಗಿ ಬೆಂಗಳೂರಿನ ಟೆಕ್ಕಿ ಸಾವು
ಬೆಂಗಳೂರು, ನ. ೬: ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಟೆಕ್ಕಿಯೊಬ್ಬರು ಕೆಮ್ಮಣ್ಣುಗುಂಡಿ ಬಳಿಯ ಹೆಬ್ಬೆ ಜಲಪಾತದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಛತ್ತೀಸಗಡ ಮೂಲದ ಅಮಿತ್ ಕುಮಾರ್ (೩೦) ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿರುವ ತಮಿಳುನಾಡಿನ ಗೆಳೆಯ ಸಲಾಮ್ ಖಾನ್ ಜೊತೆಗೆ ಹೋಗಿದ್ದರು. ರಜೆ ಇದ್ದ ಕಾರಣ ಇವರಿಬ್ಬರು ಪ್ರವಾಸ ಕೈಗೊಂಡಿದ್ದರು. ೧೨೦ ಅಡಿ ಇಳಿಜಾರಿನಲ್ಲಿ ನೀರು ಹರಿಯುವ ಹೆಬ್ಬೆ ಜಲಪಾತ ಸೇರಿದಂತೆ ಜಿಲ್ಲೆಯ ಹಲವು ಸ್ಥಳಗಳಿಗೆ ಭೇಟಿ ನೀಡಿದ್ದರು. ಜಲಪಾತದಲ್ಲಿನ ಎಚ್ಚರಿಕೆ ಫಲಕವನ್ನು ನಿರ್ಲಕ್ಷಿಸಿ ಇಬ್ಬರೂ ಈಜಲು ಹೋದಾಗ ಈ ದುರಂತ ಸಂಭವಿಸಿದೆ. ಆಳವಾದ ನೀರಿನಲ್ಲಿ ಅಮಿತ್ ಸಿಕ್ಕಿಬಿದ್ದು ನೀರಿನಲ್ಲಿ ಮುಳುಗಿದ್ದಾರೆ, ಅರಣ್ಯ ಸಿಬ್ಬಂದಿ ಮತ್ತು ಸ್ಥಳೀಯರು ಸಲಾಮ್ ಖಾನ್ನನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. ಸ್ಥಳಕ್ಕೆ ಲಿಂಗದಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾತ್ಕಾಲಿಕ ಸೇತುವೆ ಕುಸಿದು ಮೂವರ ಸಾವು
ಆನಂದ್, ನ. ೬: ಗುಜರಾತ್ನ ಆನಂದ್ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಕಾರಿಡಾರ್ನ ನಿರ್ಮಾಣ ಸ್ಥಳದಲ್ಲಿ ತಾತ್ಕಾಲಿಕ ಸೇತುವೆ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ನಿರ್ಮಾಣ ಹಂತದಲ್ಲಿರುವ ಬುಲೆಟ್ ರೈಲು ಮಾರ್ಗದ ವಾಸದ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಜಸಾನಿ ಪ್ರಕಾರ, ನಿರ್ಮಾಣ ಹಂತದಲ್ಲಿರುವ ಬುಲೆಟ್ ರೈಲು ಮಾರ್ಗದಲ್ಲಿರುವ ವಸಾದ್ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಆರಂಭದಲ್ಲಿ ಪೊಲೀಸರು ನಿರ್ಮಾಣ ಹಂತದಲ್ಲಿರುವ ಸೇತುವೆ ಕುಸಿದಿದೆ ಎಂದು ವರದಿ ಮಾಡಿದ್ದರು. ಆದರೆ, ಅನಂತರ ಬುಲೆಟ್ ರೈಲು ಯೋಜನೆಯ ಮೇಲ್ವಿಚಾರಣೆ ನಡೆಸುತ್ತಿರುವ ನ್ಯಾಷನಲ್ ಹೈಸ್ಪೀಡ್ ರೈಲ್ ಕಾರ್ಪೋರೇಶನ್ ಲಿಮಿಟೆಡ್ ವಡೋದರಾದ ಮಾಹಿ ನದಿ ಸಮೀಪ ನಿರ್ಮಿಸಲಾಗಿದ್ದ ತಾತ್ಕಾಲಿಕ ಸ್ಟೀಲ್ ಹಾಗೂ ಕಾಂಕ್ರೀಟ್ ಸೇತುವೆ ಕುಸಿಯಿತು ಎಂದು ಸ್ಪಷ್ಟನೆ ನೀಡಿದೆ. ದುರ್ಘಟನೆಯಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಗಾಯಗೊಂಡ ಇನ್ನೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಪ್ರಧಾನಮಂತ್ರಿ-ವಿದ್ಯಾಲಕ್ಷಿö್ಮ ಯೋಜನೆಗೆ ಸಂಪುಟದ ಅನುಮೋದನೆ
ನವದೆಹಲಿ, ನ. ೬: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಪಿಎಂ ವಿದ್ಯಾಲಕ್ಷಿö್ಮ ಯೋಜನೆಗೆ ಅನುಮೋದನೆ ನೀಡಿದೆ. ಇದು ಕೇಂದ್ರ ವಲಯದ ಹೊಸ ಯೋಜನೆಯಾಗಿದ್ದು, ಆರ್ಥಿಕ ನಿರ್ಬಂಧಗಳಿAದಾಗಿ ಉನ್ನತ ಅಧ್ಯಯನದಿಂದ ವಂಚಿತರಾಗುವುದನ್ನು ತಡೆಯಲು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಪ್ರಧಾನಮಂತ್ರಿ ವಿದ್ಯಾಲಕ್ಷಿö್ಮ ಯೋಜನೆಯಡಿಯಲ್ಲಿ, ಗುಣಮಟ್ಟದ ಉನ್ನತ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶ ಪಡೆಯುವ ಯಾವುದೇ ವಿದ್ಯಾರ್ಥಿಯು ಯಾವುದೇ ಮೇಲಾಧಾರ ಅಥವಾ ಗ್ಯಾರಂಟಿ ಇಲ್ಲದೆ ಬ್ಯಾಂಕ್ಗಳು ಮತ್ತು ಹಣಕಾಸು ಸಂಸ್ಥೆಗಳಿAದ ಸಾಲವನ್ನು ಪಡೆಯಲು ಅರ್ಹರಾಗಿರುತ್ತಾರೆ. ಈ ಯೋಜನೆಯು ಸರಳ, ಪಾರದರ್ಶಕ ಮತ್ತು ವಿದ್ಯಾರ್ಥಿ ಸ್ನೇಹಿ ವ್ಯವಸ್ಥೆಯ ಮೂಲಕ ಕಾರ್ಯನಿರ್ವಹಿಸುತ್ತದೆ ಮತ್ತು ಅದು ಪರಸ್ಪರ ಕಾರ್ಯನಿರ್ವಹಿಸಬಲ್ಲ ಮತ್ತು ಸಂಪೂರ್ಣವಾಗಿ ಡಿಜಿಟಲ್ ಆಗಿರುತ್ತದೆ. ದೇಶದ ೮೬೦ ಅರ್ಹ ಅತ್ಯುನ್ನತ ಗುಣಮಟ್ಟದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದ ಸಂಭಾವ್ಯ ೨೨ ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಪ್ರಧಾನಮಂತ್ರಿ-ವಿದ್ಯಾಲಕ್ಷಿö್ಮ ಯೋಜನೆಯು ಒಳಗೊಂಡಿದೆ.
ಯುಪಿ ಸರ್ಕಾರಕ್ಕೆ ‘ಸುಪ್ರೀಂ' ತರಾಟೆ; ರೂ. ೨೫ ಲಕ್ಷ ಪರಿಹಾರ ನೀಡುವಂತೆ ಆದೇಶ!
ನವದೆಹಲಿ, ನ. ೬: ಉತ್ತರಪ್ರದೇಶದ ಅಧಿಕಾರಿಗಳ ಧೋರಣೆಯನ್ನು ತೀವ್ರವಾಗಿ ಟೀಕಿಸಿದ ಸುಪ್ರೀಂ ಕೋರ್ಟ್, ರಸ್ತೆ ವಿಸ್ತರಣೆಗಾಗಿ ೨೦೧೯ರಲ್ಲಿ ನೆಲಸಮ ಮಾಡಲಾಗಿದ್ದ ಮನೆಯ ಮಾಲೀಕರಿಗೆ ೨೫ ಲಕ್ಷ ರೂಪಾಯಿ ಪರಿಹಾರ ನೀಡುವಂತೆ ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು ಮಹಾರಾಜ್ಗಂಜ್ ಜಿಲ್ಲೆಯಲ್ಲಿ ನಡೆದ ಅಕ್ರಮ ಧ್ವಂಸಕ್ಕೆ ಸಂಬAಧಿಸಿದ ವಿಷಯದ ಬಗ್ಗೆ ತನಿಖೆ ನಡೆಸುವಂತೆ ಯುಪಿ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದೆ. ರಸ್ತೆ ವಿಸ್ತರಣೆ ಯೋಜನೆಗಾಗಿ ೨೦೧೯ರಲ್ಲಿ ನಡೆದ ಮನೆ ನೆಲಸಮಗೊಳಿಸಿದ ವಿಷಯದ ವಿಚಾರಣೆ ನಡೆಸಿದ ಪೀಠ, ನೀವು ಬುಲ್ಡೋಜರ್ ತಂದು ರಾತ್ರೋರಾತ್ರಿ ಮನೆ ಕೆಡವಬಹುದೇ ಎಂದು ಟೀಕಿಸಿದೆ.