ಕೂಡಿಗೆ, ನ. ೬: ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಕೊಡಗು ಶಾಖೆ, ರಕ್ತ ನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ ಮಡಿಕೇರಿ, ರಾಮೇಶ್ವರ ಕೂಡುಮಂಗಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕೂಡಿಗೆ, ಗ್ರಾಮ ಪಂಚಾಯಿತಿ ಕೂಡಿಗೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೂಡಿಗೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ತಾ. ೮ರಂದು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೧ ಗಂಟೆವರೆಗೆ ಕೂಡಿಗೆಯ ರೈತ ಭವನದ ಸಭಾಂಗಣದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.