ಮಡಿಕೇರಿ, ನ. ೬: ಕೇಂದ್ರದ ಬಿಜೆಪಿ ಸರ್ಕಾರ ಸಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಮುಡಾ ಪ್ರಕರಣ ಸಂಬAಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಹಾಗೂ ಜೆಡಿಎಸ್ ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.
ಜನರಲ್ ತಿಮ್ಮಯ್ಯ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಅರೆಬೆತ್ತಲೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.ಸಮಿತಿಯ ಜಿಲ್ಲಾ ಸಂಚಾಲಕ ಎಂ.ಎನ್. ರಾಜಪ್ಪ, ಸಂಘಟನಾ ಸಂಚಾಲಕರಾದ ಎನ್.ಆರ್. ದೇವರಾಜ್, ಎಸ್.ಜೆ. ರಾಜಪ್ಪ, ಕಾರ್ಯದರ್ಶಿ ಎಂ.ಈ. ಪೊನ್ನಪ್ಪ, ಮಹಿಳಾ ಘಟಕದ ಸಂಚಾಲಕಿ ಮಂಜುಳಾ, ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.