ಮಡಿಕೇರಿ, ನ. ೬: ಅನಧಿಕೃತವಾಗಿ ದತ್ತು ನೀಡುವುದು ಹಾಗೂ ಪಡೆಯುವುದು ಶಿಕ್ಷಾರ್ಹ ಅಪರಾಧ. ಬಾಲನ್ಯಾಯ ಕಾಯ್ದೆ ೨೦೧೫ ಸೆಕ್ಷನ್ ೮೦ ಹಾಗೂ ೮೧ ರನ್ವಯ ಯಾವುದೇ ವ್ಯಕ್ತಿಯಾಗಲಿ ಅಥವಾ ಸಂಸ್ಥೆಯಾಗಲಿ ಯಾವುದೇ ಅನಾಥ/ ಪರಿತ್ಯಜಿಸಲ್ಪಟ್ಟ ಮಗುವನ್ನು ದತ್ತು ನೀಡುವುದು ಅಥವಾ ಪಡೆಯುವುದು ಕಂಡುಬAದಲ್ಲಿ ಅಂತಹ ವ್ಯಕ್ತಿ ಅಥವಾ ಸಂಸ್ಥೆಗೆ ೫ ವರ್ಷಗಳವರೆಗೆ ಕಾರಾಗೃಹ ಶಿಕ್ಷೆ ಮತ್ತು ೧ ಲಕ್ಷ ರೂಪಾಯಿ ದಂಡ ವಿಧಿಸಬಹುದು. ಈ ಅಪರಾಧದಲ್ಲಿ ಆಸ್ಪತ್ರೆಯ ಸಿಬ್ಬಂದಿಗಳು ಶಾಮೀಲಾದರೆ ಶಿಕ್ಷೆಯ ಅವಧಿ ೩ ವರ್ಷಗಳಿಗೆ ಕಡಿಮೆ ಇಲ್ಲದಂತೆ ೭ ವರ್ಷಗಳವರೆಗೆ ವಿಸ್ತರಿಸಬಹುದಾಗಿದೆ.
ಸಾರ್ವಜನಿಕರ ಗಮನಕ್ಕೆ: ಅನಾಥ, ಪರಿತ್ಯಕ್ತ ಮತ್ತು ಒಪ್ಪಿಸಲ್ಪಟ್ಟ ಮಕ್ಕಳ ಮಾಹಿತಿಯು ಕಂಡುಬAದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೊಡಗು ಜಿಲ್ಲೆ, ಮಡಿಕೇರಿ ದೂ. ೦೮೨೭೨-೨೨೮೮೦೦ ನ್ನು ಸಂಪರ್ಕಿಸುವAತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಈರಸ್ವಾಮಿ ತಿಳಿಸಿದ್ದಾರೆ.