ಕುಶಾಲನಗರ, ನ. ೭: ವಕ್ಫ್ ಬೋರ್ಡ್ ಕಾಯ್ದೆ ರದ್ದುಪಡಿಸುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು, ಮುಖಂಡರು ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ನೇತೃತ್ವದಲ್ಲಿ ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿದರು.
ಕುಶಾಲನಗರ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸರಕಾರ ಹಾಗೂ ವಕ್ಫ್ ಸಚಿವ ಜಮೀರ್ ಅಹಮ್ಮದ್ ವಿರುದ್ದ ಧಿಕ್ಕಾರ ಕೂಗಿದರು.
ಪಟ್ಟಣದ ಕಾರ್ಯಪ್ಪ ವೃತ್ತದಲ್ಲಿ ಕೆಲಕಾಲ ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಈ ಸಂದರ್ಭ ಮಾಜಿ ಸಚಿವ ಎಂ.ಪಿ. ಅಪ್ಪಚ್ಚುರಂಜನ್ ಮಾತನಾಡಿ, ವಕ್ಫ್ ಕಾಯ್ದೆ ವಿರೋಧಿಸಿ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ವಕ್ಫ್ ಬೋರ್ಡ್ ಸಚಿವರು ಕರ್ನಾಟಕವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಬಡವರ, ರೈತರ ಹಾಗೂ ಮಠಗಳ ಜಮೀನುಗಳ ದಾಖಲೆಯಲ್ಲಿ ವಕ್ಫ್ ಬೋರ್ಡ್ ಹೆಸರು ದಾಖಲಿಸುವ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಈ ಕೂಡಲೇ ವಕ್ಫ್ ಬೋರ್ಡ್ ಕಾಯ್ದೆ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಶಾಂತಿ ವಾತಾವರಣ ಸೃಷ್ಟಿಸುವ ಕೆಲಸ ಮಾಡುತ್ತಿದೆ ಎಂದು ದೂರಿದರು. ಮೊದಲು ಕಾಂಗ್ರೆಸ್ ನಾಯಕರು ಒತ್ತುವರಿ ಮಾಡಿರುವ ವಕ್ಫ್ ಜಾಗವನ್ನು ತೆರವುಗೊಳಿಸಲಿ ಎಂದರು.
ಸಿಎA ಸಿದ್ದರಾಮಯ್ಯ ನೋಟೀಸ್ ಹಿಂಪಡೆಯುವುದಾಗಿಘೋಷಣೆ ಮಾಡಿದ್ದಾರೆ. ಶಾಶ್ವತವಾಗಿ ವಾಪಸ್ ಪಡೆಯಲಿ. ಈ ಸಂಬAಧ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದೊಂದಿಗೆ ಕೈಜೋಡಿಸಲಿ ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಎಂ.ಎA. ಚರಣ್, ಕಾರ್ಯದರ್ಶಿ ಎಚ್.ಎಂ. ಮಧುಸೂದನ್, ಮಂಡಲ ಅಧ್ಯಕ್ಷ ಗೌತಮ್, ಜಿಲ್ಲಾ ಯುವ ಘಟಕದ ಉಪಾಧ್ಯಕ್ಷ ನವನೀತ್, ತಾಲೂಕು ಘಟಕದ ಉಪಾಧ್ಯಕ್ಷ ಎಂ.ಡಿ. ಕೃಷ್ಣಪ್ಪ, ಯುವ ಮೋರ್ಚಾ ಅಧ್ಯಕ್ಷ ರಾಮನಾಥನ್, ಪ್ರಧಾನ ಕಾರ್ಯದರ್ಶಿ ಸಚಿನ್, ಪುರಸಭೆ ಸದಸ್ಯ ಡಿ.ಕೆ. ತಿಮ್ಮಪ್ಪ, ಮುಖಂಡರಾದ ಜಿ.ಎಲ್. ನಾಗರಾಜು, ಎಂ.ವಿ. ನಾರಾಯಣ, ಎಂ.ಎನ್. ಕುಮಾರಪ್ಪ, ಎಂ.ಎಸ್. ಚಿಣ್ಣಪ್ಪ, ಶಿವಕುಮಾರ್, ಗಣಪತಿ, ಕೆ. ವರದ, ಕೆ.ಜಿ. ಮನು, ಮಹೇಶ್ ಪ್ರವೀಣ್, ವೈಶಾಖ್, ಮಣಿ, ಸುಮನ್, ಶಶಿಕುಮಾರ್, ನಿತ್ಯಾನಂದ, ಗೀತಾ ಧರ್ಮಪ್ಪ, ಗೀತಾಂಜಲಿ ಮತ್ತಿತರರು ಪಾಲ್ಗೊಂಡಿದ್ದರು.