ಮುಳ್ಳೂರು, ನ. ೭: ಸಮೀಪದ ಕೊಡ್ಲಿಪೇಟೆ ಕಿರಿಕೊಡ್ಲಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಯಲ್ಲಿ ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ ಘಟಕದ ವತಿಯಿಂದ ೭ ದಿನಗಳ ಕಾಲ ಹಮ್ಮಿ ಕೊಂಡಿದ್ದ ೨೦೨೩-೨೪ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರ ಮುಕ್ತಾಯಗೊಂಡಿತು. ವಾರ್ಷಿಕ ಶಿಬಿರದ ಮುಕ್ತಾಯ ಸಮಾರಂಭದಲ್ಲಿ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಸಿ.ವಿ. ಶಂಭುಲಿAಗಪ್ಪ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಮಾತನಾಡಿದ ಅವರು, ವಿದ್ಯಾರ್ಥಿಗಳು ಶಿಬಿರದಲ್ಲಿ ಕಲಿತ ಅನುಭವಗಳನ್ನು ತಮ್ಮೊಳಗೆ ಅಳವಡಿಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಬೇಕೆಂದರು.

ಘಟಕದ ಯೋಜನಾಧಿಕಾರಿ ಕೆ.ಹೆಚ್. ಯೋಗೇಂದ್ರ ಮಾತನಾಡಿ, ರಾಷ್ಟಿçÃಯ ಸೇವಾ ಯೋಜನೆಯು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಸೇರಿದಂತೆ ಹತ್ತು ಹಲವು ವಿಷಯಗಳಿಗೆ ಪೂರಕವಾದ ವೇದಿಕೆಯಾಗಿದೆ ಎಂದರು. ಕಾರ್ಯಕ್ರಮದಲ್ಲಿ ವಿದ್ಯಾ ಸಂಸ್ಥೆಯ ಪ್ರೌಢಶಾಲಾ ವಿಭಾಗದ ಹಿರಿಯ ಶಿಕ್ಷಕ ಅಬ್ದುಲ್ ರಬ್, ಪ.ಪೂ. ಕಾಲೇಜು ಉಪನ್ಯಾಸಕ ಶಶಿ ಕುಮಾರ್, ಪದವಿ ಕಾಲೇಜಿನ ಉಪ ನ್ಯಾಸಕರಾದ ರಮ್ಯ, ಕಾವ್ಯ ಯೋಗೇಂದ್ರ, ಭಾನುಮತಿ, ಶಿಬಿರಾರ್ಥಿಗಳು ಹಾಜರಿದ್ದರು.