ಮಡಿಕೇರಿ, ನ. ೭ : ಹಲವು ಹಗರಣಗಳ ಆರೋಪ ಎದುರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಪರ ದಲಿತ ಸಂಘರ್ಷ ಸಮಿತಿಯ ಹೆಸರಿನಲ್ಲಿ ಕೆಲವರು ನಡೆಸಿರುವ ಅರೆಬೆತ್ತಲೆ ಪ್ರತಿಭಟನೆ ಹಾಸ್ಯಾಸ್ಪದವಾಗಿದೆ ಎಂದು ಭಾರತೀಯ ಜನತಾ ಪಾರ್ಟಿಯ ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ. ರವಿ ಟೀಕಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ನಗರದಲ್ಲಿ ಅರೆಬೆತ್ತಲೆ ಪ್ರತಿಭಟನಾ ಮೆರವಣಿಗೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಬಲ ಸೂಚಿಸಿದವರು ಕಾಂಗ್ರೆಸ್ ಪಕ್ಷದ ಅಂಗಸAಸ್ಥೆಗೆ ಸೇರಿದವರಂತೆ ವರ್ತಿಸಿ ಪರಿಶಿಷ್ಟರ ಹಾದಿ ತಪ್ಪಿಸುವ ಯತ್ನ ಮಾಡಿದ್ದಾರೆೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಪರಿಶಿಷ್ಟರ ಅಭ್ಯುದಯಕ್ಕಾಗಿ ಮೀಸಲಿಟ್ಟ ಸಾವಿರಾರು ಕೋಟಿ ರೂ. ಅನುದಾನ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿದ್ದ ಪರಿಶಿಷ್ಟರ ಅನುದಾನ ದುರುಪಯೋಗವಾಗಿದೆ, ಮೂಡಾ ಜಾಗ ನಿಯಮ ಬಾಹಿರವಾಗಿ ಮಂಜೂರಾಗಿದೆ. ಪರಿಶಿಷ್ಟರ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಇದೆಲ್ಲವನ್ನು ಮುಂದಿಟ್ಟುಕೊAಡು ಪರಿಶಿಷ್ಟರ ಪರವಾಗಿ ಬಿಜೆಪಿ ನಿರಂತರವಾಗಿ ಹೋರಾಟವನ್ನು ನಡೆಸುತ್ತಾ ಬರುತ್ತಿದೆ. ಆದರೆ ಕೆಲವರು ವಿನಾಕಾರಣ ಅರೆಬೆತ್ತಲೆ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರ ಮತ್ತಷ್ಟು ಹಗರಣಗಳನ್ನು ನಡೆಸಲು ಪ್ರೇರಣೆ ನೀಡುತ್ತಿದ್ದಾರೆ ಎಂದು ರವಿ ಆರೋಪಿಸಿದ್ದಾರೆ.