ಪೊನ್ನಂಪೇಟೆ, ನ. ೭: ರಾಜ್ಯಾದ್ಯಂತ ದ್ವೇಷ ಭಾಷಣ ಮಾಡಿ ಕೋಮು ಸಂಘರ್ಷಕ್ಕೆ ಬಿಜೆಪಿಯ ಕೆಲ ನಾಯಕರು ಪ್ರಚೋದನೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ದೂರು ಸಲ್ಲಿಸಲಾಗಿದೆ. ಘಟಕದ ಅಧ್ಯಕ್ಷ ಪಿ.ಎ. ಹನೀಫ್ ನೇತೃತ್ವದಲ್ಲಿ ತೆರಳಿದ ಕಾಂಗ್ರೆಸ್ ಪದಾಧಿಕಾರಿಗಳ ನಿಯೋಗ ದೂರನ್ನು ಮಡಿಕೇರಿ ಡಿವೈಎಸ್ಪಿ ಅವರಿಗೆ ಸಲ್ಲಿಸಿದೆ.
ಇತ್ತೀಚೆಗೆ ಬಿಜಾಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ನಾಯಕರುಗಳಾದ ಸಿ.ಟಿ. ರವಿ, ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಚಕ್ರವರ್ತಿ ಸೂಲಿಬೆಲೆ ಅವರು ಭಾಷಣ ಮಾಡುವಾಗ ಮುಸ್ಲಿಂ ಸಮುದಾಯವನ್ನು ಗುರಿಯಾಗಿಟ್ಟು ದ್ವೇಷದ ಮಾತನಾಡಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರ ನಿರ್ದೇಶನದಂತೆ ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಈ ಸಂಬAಧ ಪೊಲೀಸರಿಗೆ ದೂರು ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.
ನಿಯೋಗದಲ್ಲಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಖಲೀಲ್ ಭಾಷಾ, ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೋಳುಮಂಡ ರಫೀಕ್, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಜುನೈದ್, ಮಡಿಕೇರಿ ನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೌಸರ್, ಡಿಸಿಸಿ ಸದಸ್ಯ ಅಬ್ದುಲ್ ರಹಿಮಾನ್ (ಅಂದಾಯಿ), ಸಾಧಿಕ್, ಮತ್ತಿತರರು ಹಾಜರಿದ್ದರು.