ಗೋಣಿಕೊಪ್ಪಲು, ನ. ೭: ಶಿಷ್ಟಾಚಾರ ಉಲ್ಲಂಘನೆಯ ಆರೋಪದಡಿ ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಿಮ್ಮಯ್ಯ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಜೂನ್ ೧೬ ರಂದು ನಡೆದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೂತನ ಕಸದ ತಡೆಗೋಡೆಯ ಉದ್ಘಾಟನಾ ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ ಅವರನ್ನು ಆಹ್ವಾನಿಸದೆ ಶಿಷ್ಟಾಚಾರ ಉಲ್ಲಂಘಿಸಿರುವ ಬಗ್ಗೆ ಸುಜಾ ಕುಶಾಲಪ್ಪ ಅವರು ದೂರು ನೀಡಿದ್ದ ಹಿನ್ನೆಲೆಯಲ್ಲಿ ತಾ. ೭.೧೦.೨೪ರಂದು ನಡೆದ ಕರ್ನಾಟಕ ವಿಧಾನ ಪರಿಷತ್ತಿನ ಹಕ್ಕು ಬಾಧ್ಯತಾ ಸಮಿತಿ ಸಭೆಯಲ್ಲಿ ಚರ್ಚಿಸಿ, ಗೋಣಿಕೊಪ್ಪಲು ಗ್ರಾಮ ಪಂಚಾಯಿತಿಯಿAದ ಕರ್ನಾಟಕ ಸರ್ಕಾರದ ಲಾಂಛನವನ್ನು ಬಳಸಿಕೊಂಡು ವಿಧಾನ ಪರಿಷತ್ತಿನ ಶಾಸಕರಾದ ಸುಜಾ ಕುಶಾಲಪ್ಪ ಅವರ ಹೆಸರನ್ನು ನಮೂದಿಸದೆ ಮತ್ತು ಸಭೆಗೆ ಆಹ್ವಾನಿಸದೆ, ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ಕಸದ ತಡೆಗೋಡೆÀ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಈ ಬಗ್ಗೆ ತೆಗೆದುಕೊಂಡ ತೀರ್ಮಾನದ ಅನ್ವಯ ದಿನಾಂಕ ೧೪. ೧೦.೨೪ರಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್

(ಮೊದಲ ಪುಟದಿಂದ) ರಾಜ್ ಇಲಾಖೆ ಪೀಠಾಧಿಪತಿಗಳಾದ ಶಿವಕುಮಾರ್ ಅವರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ತಿಮ್ಮಯ್ಯ ಅವರನ್ನು ೧೯೫೭ರ ನಿಯಮ ೧೦(೮). (೨) (ಎ) ಅನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಅನುಬಂಧ ಒಂದರಿAದ ನಾಲ್ಕರವರೆಗೆ ದೋಷಾರೋಪಣ ಪಟ್ಟಿ ಜಾರಿಗೊಳಿಸಿ ಇಲಾಖಾ ವಿಚಾರಣೆ ನಡೆಸಿ ಕರ್ನಾಟಕ ವಿಧಾನ ಪರಿಷತ್‌ನ ಹಕ್ಕು ಬಾಧ್ಯತಾ ಸಮಿತಿಗೆ ಮಾಹಿತಿ ಒದಗಿಸಿ ಅದರ ಪ್ರತಿಯನ್ನು ಸರಕಾರಕ್ಕೆ ಸಲ್ಲಿಸುವಂತೆ ಕೊಡಗು ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರಿಗೆ ಕಳುಹಿಸಲಾದ ಆದೇಶದಲ್ಲಿ ತಿಳಿಸಿದ್ದಾರೆ. - ಹೆಚ್.ಕೆ. ಜಗದೀಶ್