ನಾಪೋಕ್ಲು, ನ. ೭: ಪಟ್ಟಣದ ಮುಖ್ಯರಸ್ತೆಯ ಬದಿಯಲ್ಲಿ ಆಟೋಗಳಿಗೆ ನಿಲುಗಡೆ ಕಲ್ಪಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಇಲ್ಲಿನ ಪೊಲೀಸ್ ಠಾಣೆಯ ಠಾಣಾಧಿಕಾರಿ ಮಂಜುನಾಥ್ ಹೇಳಿದರು.

ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷೆÀ್ಷ ವನಜಾಕ್ಷಿ ರೇಣುಕೇಶ್ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಆಟೋ ಮಾಲೀಕರ ಮತ್ತು ಚಾಲಕರ ಸಂಘದ ಬೇಡಿಕೆಗಳಿಗೆ ಸಂಬAಧಿಸಿದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪಟ್ಟಣದಲ್ಲಿ ೨೦೦ಕ್ಕೂ ಅಧಿಕ ಆಟೋಗಳಿದ್ದು, ನಿಲುಗಡೆಗೆ ಸಮಸ್ಯೆಯಾಗುತ್ತಿದೆ. ಸ್ಥಳಾವಕಾಶ ಸಾಕಾಗುತ್ತಿಲ್ಲ. ಮುಖ್ಯ ರಸ್ತೆಯಲ್ಲೂ ಆಟೋಗಳ ನಿಲುಗಡೆಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಸಂಘದ ಪದಾಧಿಕಾರಿಗಳು ಈ ಹಿಂದೆ ಗ್ರಾಮ ಪಂಚಾಯಿತಿ ಹಾಗೂ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದರು.

ಪಂಚಾಯಿತಿ ಪ್ರತಿನಿಧಿಗಳು ಮತ್ತು ಠಾಣಾಧಿಕಾರಿ ಮಂಜುನಾಥ್ ಮನವಿಗೆ ಸ್ಪಂದಿಸುವುದಾಗಿ ತಿಳಿಸಿದರು. ಈ ಬಗ್ಗೆ ಹಲವು ಸಮಸ್ಯೆಗಳಿದ್ದು, ಪರಿಶೀಲಿಸಿ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿ ಸೂಕ್ತ ಕ್ರಮಕೈಗೊಳ್ಳುವುದಾಗಿ ಠಾಣಾಧಿಕಾರಿ ಹೇಳಿದರು.

ಪಂಚಾಯಿತಿ ಸದಸ್ಯರಾದ ಮಹಮ್ಮದ್ ಖುರೇಶಿ, ಶಿವಚಾಳಿಯಂಡ ಜಗದೀಶ್, ಮಾಚೇಟಿರ ಕುಸು ಕುಶಾಲಪ್ಪ, ಬಿ.ಎಂ. ಪ್ರತೀಪ , ಆಟೋ ಚಾಲಕ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಸುಕುಮಾರ್, ಉಪಾಧ್ಯಕ್ಷ ರಾಶಿದ್, ಕಾರ್ಯದರ್ಶಿ ಸತೀಶ್, ಮಾಜಿ ಅಧ್ಯಕ್ಷ ರಜಾಕ್ ಸೇರಿದಂತೆ ಸಂಘದ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.