ವೀರಾಜಪೇಟೆ, ನ. ೭: ಸಂತ ಅನ್ನಮ್ಮ ಪದವಿ ಕಾಲೇಜು ವೀರಾಜಪೇಟೆ ದೈಹಿಕ ಶಿಕ್ಷಣ ವಿಭಾಗ ಮತ್ತು ಐ.ಕ್ಯೂ,ಎ.ಸಿ ಹಾಗೂ ಬಿ.ಬಿ.ಎ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಕಾಲೇಜು ಮೈದಾನದಲ್ಲಿ ರಾಷ್ಟçಮಟ್ಟದ ಅಂತರ ಕಾಲೇಜು ಪುರುಷರ ೫+೨ ಕಾಲ್ಚೆಂಡು ಪಂದ್ಯಾಟವನ್ನು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಜ್ಯೋತಿ ಪ್ರಕಾಶ್ ಉದ್ಘಾಟಿಸಿ ಮಾತನಾಡಿದರು.
ಬಳಿಕ ಮಾತನಾಡಿ, ಪುಸ್ತಕದಲ್ಲಿರುವ ವಿಷಯಗಳನ್ನು ಮಾತ್ರ ಕಲಿಯದೆ ಪ್ರಾಪಂಚಿಕ ಜ್ಞಾನ ಸಂಪಾದಿಸಲು ಶ್ರಮವಹಿಸಬೇಕು ಎಂದರು. ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರೇ. ಫಾ. ಮದಲೈ ಮುತ್ತು ಮಾತನಾಡಿ, ಕ್ರೀಡೆಗೆ ವಿದ್ಯಾರ್ಥಿಗಳಲ್ಲಿ ಸಾಮರಸ್ಯ, ಸಮಾನತೆಯನ್ನು ಸೃಷ್ಟಿ ಮಾಡುವ ಶಕ್ತಿಯಿದೆ ಎಂದರು.
ಸಂತ ಅನ್ನಮ್ಮ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಲೇಜು ಶಿಕ್ಷಣದೊಂದಿಗೆ ದೈಹಿಕ ಶಿಕ್ಷಣಕ್ಕೂ ಮಹತ್ವ ನೀಡಿರುವ ನಮ್ಮ ಸಂಸ್ಥೆಯು ಪ್ರಥಮ ಬಾರಿಗೆ ಅಂತರ್ ಕಾಲೇಜು ರಾಷ್ಟçಮಟ್ಟದ ಕಾಲ್ಚೆಂಡು ಪಂದ್ಯಾಟವನ್ನು ಆಯೋಜಿಸಿದೆ ಎಂದರು. ಪಂದ್ಯಾಟದಲ್ಲಿ ಕೊಡಗು ಜಿಲ್ಲೆ ಸೇರಿದಂತೆ ರಾಜ್ಯ ಮತ್ತು ಅಂತರ ರಾಜ್ಯಗಳ ಸುಮಾರು ೨೮ ತಂಡಗಳು ಭಾಗವಹಿಸಿವೆ ಎಂದು ತಿಳಿಸಿದರು.
ವೇದಿಕೆಯಲ್ಲಿ ಐ.ಕ್ಯೂ.ಎ.ಸಿ. ಸಂಚಾಲಕರು ಮತ್ತು ಬಿಬಿಎ ವಿಭಾಗದ ಮುಖ್ಯಸ್ಥೆ ಹೇಮಾ ಬಿ.ಡಿ. ಪದವಿ ಕಾಲೇಜಿನ ದೈಹಿಕ ಶಿಕ್ಷಕ ರಾಜ ರೈ, ಪದವಿ ಕಾಲೇಜಿನ ಕ್ರೀಡಾ ಕಾರ್ಯದರ್ಶಿ ಕಾವೇರಪ್ಪ ಎನ್.ಡಿ., ವಿದ್ಯಾರ್ಥಿ ಸಂಘದ ಸಂಚಾಲಕರಾದ ರಹೀಂ ಉಪಸ್ಥಿತರಿದ್ದರು.
ಪ್ರಥಮ ಪಂದ್ಯಾಟಸAತ ಅನ್ನಮ್ಮ ಪದವಿ ಕಾಲೇಜು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವೀರಾಜಪೇಟೆ ತಂಡಗಳ ನಡುವೆ ನಡೆದು ಪೆನಾಲ್ಟಿ ಶೂಟೌಟ್ನಲ್ಲಿ ಸಂತ ಅನ್ನಮ್ಮ ಕಾಲೇಜು ತಂಡ ೨-೦ ಗೋಲುಗಳಿಂದ ಜಯಗಳಿಸಿತು. ಶೇಷಪ್ಪ ಅಮ್ಮತ್ತಿ, ನಿದೀಶ್ ಮತ್ತು ಶ್ರೀನಿವಾಸ್ ಒಂಟಿಅAಗಡಿ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು. ಹೇಮಾ ಬಿ.ಡಿ. ಸ್ವಾಗತಿಸಿ, ವಾಣಿಜ್ಯ ವಿಭಾಗದ ಉಪನ್ಯಾಸಕರಾದ ವಿಲೀನಾ ಗೋನ್ಸಾಲ್ವೆಸ್ಸ್ ನಿರೂಪಿಸಿದರು. ಉಪನ್ಯಾಸಕಿ ಪೂಜಾ ವಂದಿಸಿದರು.