ಮಡಿಕೇರಿ, ನ. ೮: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟಿçÃಯ ಕಾನೂನು ಸೇವಾ ದಿನಾಚರಣೆಯು ತಾ. ೯ ರಂದು (ಇಂದು) ಬೆಳಿಗ್ಗೆ ೧೦ ಗಂಟೆಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆಯಲಿದೆ. ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಡಿ.ಕೆ.ಸರಸ್ವತಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮಡಿಕೇರಿ ವಕೀಲರ ಸಂಘದ ಅಧ್ಯಕ್ಷರಾದ ಎಂ.ಎ.ನಿರAಜನ, ಇತರರು ಪಾಲ್ಗೊಳ್ಳಲಿದ್ದಾರೆ.