ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲಿಯರು ಹತ

ಬಿಜಾಪುರ, ನ. ೮: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲಿಯರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಉಸೂರು-ಬಸಗುಡ-ಪಾಮೆಡ್ ಗ್ರಾಮಗಳ ಟ್ರೆöÊ-ಜಂಕ್ಷನ್‌ನಲ್ಲಿರುವ ಕಾಡಿನಲ್ಲಿ ಬೆಳಿಗ್ಗೆ ೧೧ ಗಂಟೆ ಸುಮಾರಿಗೆ ಗುಂಡಿನ ಚಕಮಕಿ ನಡೆದಿದ್ದು, ಭದ್ರತಾ ಸಿಬ್ಬಂದಿಯ ಜಂಟಿ ತಂಡ, ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದೆ ಎಂದು ಬಸ್ತಾರ್ ರೇಂಜ್‌ನ ಪೊಲೀಸ್ ಮಹಾನಿರೀಕ್ಷಕ ಸುಂದರರಾಜ್ ಪಿ. ಅವರು ತಿಳಿಸಿದ್ದಾರೆ. ರಾಜ್ಯ ಪೊಲೀಸ್‌ನ ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ) ಮತ್ತು ಕೋಬ್ರಾ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ಗುಂಡಿನ ಚಕಮಕಿ ನಿಲ್ಲಿಸಿದ ನಂತರ, ಇಬ್ಬರು ನಕ್ಸಲರ ಮೃತ ದೇಹಗಳನ್ನು ಮತ್ತು ಸ್ವಯಂ-ಲೋಡಿAಗ್ ರೈಫಲ್ (ಎಸ್‌ಎಲ್‌ಆರ್), ಬ್ಯಾರೆಲ್ ಗ್ರೆನೇಡ್ ಲಾಂಚರ್ ಶೆಲ್‌ಗಳು, ಸ್ಥಳೀಯವಾಗಿ ತಯಾರಿಸಿದ ಶಸ್ತಾçಸ್ತçಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ. ಇದರೊಂದಿಗೆ, ಬಿಜಾಪುರ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ರಾಜ್ಯದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ೧೯೧ ನಕ್ಸಲೀಯರನ್ನು ಹೊಡೆದುರುಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರ್ಟಿಕಲ್ ೩೭೦ ಮರುಸ್ಥಾಪನೆ ಸಾಧ್ಯವಿಲ್ಲ : ಪ್ರಧಾನಿ ಮೋದಿ

ಮುಂಬೈ, ನ. ೮: ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಜಮ್ಮು-ಕಾಶ್ಮೀರದಿಂದ ಭಾರತದ ಸಂವಿಧಾನವನ್ನು ತೆಗೆದುಹಾಕಲು ಬಯಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದು, ಜಗತ್ತಿನ ಯಾವುದೇ ಶಕ್ತಿಯಿಂದಲೂ ಆರ್ಟಿಕಲ್ ೩೭೦ ಮರುಸ್ಥಾಪನೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ತಾ. ೨೦ ರಂದು ಮತದಾನ ನಡೆಯಲಿರುವ ಮಹಾರಾಷ್ಟçದ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಒಂದು ಜಾತಿಯ ವಿರುದ್ಧ ಮತ್ತೊಂದು ಜಾತಿಯನ್ನು ಎತ್ತಿಕಟ್ಟುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಹೀಗಾಗಿ ಜನರಿಗೆ ಒಗ್ಗಟ್ಟಾಗಿರಲು ಕರೆ ನೀಡಿದರು. ಒಗ್ಗಟ್ಟಾಗಿದ್ದರೆ ಸುರಕ್ಷವಾಗಿರುತ್ತೀರಿ. ದಲಿತರು ಮತ್ತು ಆದಿವಾಸಿಗಳನ್ನು ಕೆರಳಿಸಲು ಖಾಲಿ ಪುಸ್ತಕಗಳನ್ನು ತೋರಿಸಿ ಸಂವಿಧಾನ ಎಂದು ರವಾನಿಸುತ್ತಿದ್ದಾರೆ. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಪಾಕಿಸ್ತಾನದ ಕಾರ್ಯಸೂಚಿಯನ್ನು ಪ್ರೋತ್ಸಾಹಿಸಬಾರದು ಮತ್ತು ಪ್ರತ್ಯೇಕತಾವಾದಿಗಳ ಭಾಷೆಯಲ್ಲಿ ಮಾತನಾಡಬಾರದು ಎಂದು ಪ್ರಧಾನಿ ಹೇಳಿದ್ದು, ಜನರ ಆಶೀರ್ವಾದ ಇರುವವರೆಗೂ ಈ ಕಾರ್ಯಸೂಚಿ ಯಶಸ್ವಿಯಾಗುವುದಿಲ್ಲ ಎಂದು ಮೋದಿ ಹೇಳಿದರು.

ಕುಸಿದು ಬಿದ್ದ ಮೂರು ಅಂತಸ್ತಿನ ಕಟ್ಟಡ

ಕೋಲಾರ, ನ. ೮: ಕೋಲಾರ ಜಿಲ್ಲೆಯ ಬಂಗಾರಪೇಟೆ ನಗರದ ದಂಡು ರಸ್ತೆಯ ಬಳಿ ಶುಕ್ರವಾರ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ರಾಜ್ ಕುಮಾರ್ ಎಂಬವರಿಗೆ ಸೇರಿದ ಮೂರು ಅಂತಸ್ತಿನ ಕಟ್ಟಡದ ನೆಲ ಮಹಡಿಯ ನವೀಕರಣದ ಸಮಯದಲ್ಲಿ ಕಟ್ಟಡ ಕುಸಿದಿದೆ. ಮನೆ ಯಲ್ಲಿದ್ದ ಮೂರು ಕುಟುಂಬಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಾಂತರಿಸಿದ್ದಾರೆ. ಕಳೆದ ಎರಡು ತಿಂಗಳ ಹಿಂದೆಯೇ ಈ ಮನೆಯನ್ನು ಖಾಲಿ ಮಾಡಲಾಗಿತ್ತು. ಹೀಗಾಗಿ ಘಟನೆಯಲ್ಲಿ ಯಾವುದೇ ಪ್ರಾಣಹಾನಿ, ಗಾಯಗಳಾದ ಬಗ್ಗೆ ವರದಿಯಾಗಿಲ್ಲ. ಕಟ್ಟಡ ಕುಸಿತದಿಂದ ಖಾಸಗಿ ಶಾಲೆಯ ಕಾಂಪೌAಡ್‌ಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಸಂಬAಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತನಿಖೆ ಹಿಂಪಡೆದ ಪ್ರಕರಣ - ಡಿಕೆಶಿಗೆ ಸುಪ್ರೀಂಕೋರ್ಟ್ ನೋಟಿಸ್

ನವದೆಹಲಿ, ನ. ೮: ಆದಾಯ ಮೀರಿದ ಆಸ್ತಿ ಗಳಿಕೆ ಆರೋಪಕ್ಕೆ ಸಂಬAಧಿಸಿದAತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಈ ಹಿಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದ ಈಗಿನ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಗೆ ಸಂಬAಧಿಸಿದAತೆ ರಾಜ್ಯ ಸರ್ಕಾರ ಹಾಗೂ ಶಿವಕುಮಾರ್‌ಗೆ ಸುಪ್ರೀಂಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ. ನ್ಯಾ. ಸೂರ್ಯಕಾಂತ್ ಹಾಗೂ ನ್ಯಾ. ಉಜ್ವಲ್ ಭುಯನ್ ಅವರಿದ್ದ ಪೀಠವು ಅರ್ಜಿಯ ವಿಚಾರಣೆ ನಡೆಸಿತ್ತು. ಕರ್ನಾಟಕ ಹೈಕೋರ್ಟ್ನ ತೀರ್ಪಿನ ವಿರುದ್ಧ ಸಿಬಿಐ ಮೇಲ್ಮನವಿ ಸಲ್ಲಿಸಿದೆ ಎಂದು ಸಿಬಿಐ ಪರ ವಕೀಲರು ಪೀಠದ ಗಮನಕ್ಕೆ ತಂದರು. ಇದನ್ನು ಪುರಸ್ಕರಿಸಿದ ಪೀಠ, ರಾಜ್ಯ ಸರ್ಕಾರ ಮತ್ತು ಡಿ.ಕೆ. ಶಿವಕುಮಾರ್‌ಗೆ ನೋಟಿಸ್ ಜಾರಿ ಮಾಡಿ ಪ್ರತಿಕ್ರಿಯಿಸುವಂತೆ ನಿರ್ದೇಶಿಸಿದೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆಗೆ ಸಂಬAಧಿಸಿದAತೆ ತನಿಖೆ ನಡೆಸುವಂತೆ ೨೦೧೯ರಲ್ಲಿದ್ದ ಬಿಜೆಪಿ ಸರ್ಕಾರ ಸಿಬಿಐಗೆ ವಹಿಸಿತ್ತು. ೨೦೨೩ರ ನ. ೨೩ ರಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿಬಿಐಗೆ ನೀಡಿದ್ದ ತನಿಖೆಯನ್ನು ಹಿಂಪಡೆದಿತ್ತು. ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಕರ್ನಾಟಕ ಹೈಕೋರ್ಟ್ ಈ ಅರ್ಜಿಗಳನ್ನು ವಜಾಗೊಳಿಸಿತ್ತು.

ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

ಕಟಕ್, ನ. ೮: ಒಡಿಶ್ಶಾದ ಕಟಕ್ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಮತ್ತು ಆಶ್ಲೀಲ ವೀಡಿಯೋ ಮಾಡಿದ ಆರೋಪದಡಿ ೬ ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ತನ್ನ ಪ್ರಿಯಕರ ಸೇರಿದಂತೆ ಆರು ಮಂದಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ವಿದ್ಯಾರ್ಥಿನಿಯು ಬಾದಾಂಬಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ದಸರಾ ಹಬ್ಬದ ಸಂದರ್ಭದಲ್ಲಿ ಸಂತ್ರಸ್ತೆಯು ಹುಟ್ಟುಹಬ್ಬ ಆಚರಿಸಿಕೊಳ್ಳಲು ಕೆಫೆಯೊಂದಕ್ಕೆ ಹೋಗಿದ್ದರು. ಈ ವೇಳೆ ಆಕೆಯ ಪ್ರಿಯಕರ ಕೆಫೆ ಮಾಲೀಕನ ಸಹಾಯದಿಂದ ಮೊಬೈಲ್‌ನಲ್ಲಿ ಆಶ್ಲೀಲ ದೃಶ್ಯಗಳನ್ನು ಸೆರೆ ಹಿಡಿದಿದ್ದರು. ಬಳಿಕ ಆಕೆಯ ವೀಡಿಯೋವನ್ನು ಬಹಿರಂಗಪಡಿಸುವುದಾಗಿ ಬೆದರಿಸಿ ಹಲವು ಬಾರಿ ಅತ್ಯಾಚಾರ ಎಸಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯುವತಿಯು ನೀಡಿದ ದೂರಿನ ಆಧಾರದಲ್ಲಿ ಆಕೆಯ ಪ್ರಿಯಕರ, ಕೆಫೆ ಮಾಲೀಕ, ಒಬ್ಬ ಅಪ್ರಾಪ್ತ ಬಾಲಕ ಮತ್ತು ಮೂವರನ್ನು ಬಂಧಿಸಲಾಗಿದೆ.

ರೂ. ೫೦ ಕೋಟಿ ಬೇಡಿಕೆ ಆರೋಪ : ಹೆಚ್.ಡಿ.ಕೆ. ವಿರುದ್ಧದ ಕ್ರಮಕ್ಕೆ ತಡೆ

ಬೆಂಗಳೂರು, ನ. ೮: ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯ ಖರ್ಚಿಗೆ ರೂ. ೫೦ ಕೋಟಿ ಬೇಡಿಕೆ ಇರಿಸಿ ಬೆದರಿಕೆ ಹಾಕಿದ ಆರೋಪಕ್ಕೆ ಸಂಬAಧಿಸಿದ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಈ ಸಂಬAಧ ಎಚ್.ಡಿ.ಕುಮಾರಸ್ವಾಮಿ ಸಲ್ಲಿಸಿರುವ ಅರ್ಜಿಯನ್ನು, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎ.ವಿ. ನಿಶಾಂತ್, ಇದೇ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಜೆಡಿಎಸ್ ನಗರದ ಘಟಕದ ಅಧ್ಯಕ್ಷ ರಮೇಶ್ ಗೌಡ ವಿರುದ್ಧ ಯಾವುದೇ ಬಲವಂತ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಈಗಾಗಲೇ ಆದೇಶಿಸಿದೆ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ಪ್ರಕರಣದ ಮತ್ತೊಬ್ಬ ಆರೋಪಿಯಾಗಿರುವ ಕುಮಾರಸ್ವಾಮಿ ಅವರಿಗೂ ಈ ಹಿಂದಿನ ಆದೇಶ ಅನ್ವಯವಾಗುತ್ತದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿ ವಿಚಾರಣೆಯನ್ನು ತಾ. ೨೯ಕ್ಕೆ ಮುಂದೂಡಿತು. ವಿಜಯ್ ತಾತಾ ನೀಡಿದ್ದ ದೂರು ಆಧರಿಸಿ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಅಕ್ಟೋಬರ್ ೩ ರಂದು ರಮೇಶ್ ಗೌಡ ಮತ್ತು ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ-೨೦೨೩ರ ಕಲಂ ೩೦೮(೨), ೩೫೧(೨), ೩(೫) ಅಡಿ ಎಫ್‌ಐಆರ್ ದಾಖಲಿಸಲಾಗಿದೆ.