ಕುಶಾಲನಗರ, ನ. ೮: ಕುಶಾಲನಗರದ ಸಮೀಪ ಮುಳ್ಳುಸೋಗೆ ಬಳಿ ಮಹಿಳೆಯೊಂದಿಗೆ ವಕ್ಫ್ ಆಸ್ತಿ ಎಂದು ಹೇಳಿ ಇಬ್ಬರು ವ್ಯಕ್ತಿಗಳು ಮನೆಗೆ ಅತಿಕ್ರಮಣ ಪ್ರವೇಶ ಮಾಡಿ ಬೆದರಿಕೆ ಒಡ್ಡಿರುವ ಪ್ರಕರಣ ಸಂಬAಧ ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.

ಮುಳ್ಳುಸೋಗೆಯ ನಿವಾಸಿ ಪುಚ್ಚಿಮಂಡ ರೇಣುಕಾ ಉತ್ತಪ್ಪ ಈ ಸಂಬAಧ ಶರ್ಪುದ್ದೀನ್ ಎಂಬಾತ ಸೇರಿದಂತೆ ಇಬ್ಬರ ಮೇಲೆ ದೂರು ದಾಖಲಿಸಿದ್ದು, ಅಕ್ಟೋಬರ್ ೨೫ರಂದು ಈ ಇಬ್ಬರು ತನ್ನ ಮನೆಯ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ ಈ ಆಸ್ತಿ ವಕ್ಫ್ ಮಂಡಳಿಗೆ ಸೇರಿದ್ದು ತಕ್ಷಣ ಖಾಲಿ ಮಾಡುವಂತೆ ತಗಾದೆ ತೆಗೆದಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಆ ಸಂದರ್ಭ ತಾನು ಅವರೊಂದಿಗೆ ಸ್ಪಷ್ಟೀಕರಣ ನೀಡಿದ್ದು, ಈ ವೇಳೆ ತನಗೆ ಬೆದರಿಕೆಯೊಡ್ಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ನಂತರ ತನಗೆ ಮೊಬೈಲ್ ಮೂಲಕ ಮೂರು ಬಾರಿ ಸಂಪರ್ಕ ಮಾಡಿರುವುದಾಗಿಯೂ ಹೇಳಿದ್ದಾರೆ.

ಬೆದರಿಕೆ ಕರೆ ಬಂದಿಲ್ಲ - ಎಸ್.ಪಿ. ರಾಮರಾಜನ್ ಸ್ಪಷ್ಟನೆ

ಪ್ರಕರಣದ ಕುರಿತು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಪ್ರಕಟಣೆ ಮೂಲಕ ಕೆಲವೊಂದು ಅಂಶಗಳನ್ನು ಸ್ಪಷ್ಟಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪೋಸ್ಟ್ ಕುರಿತು ಸ್ವಯಂ ಪ್ರೇರಿತವಾಗಿ ತಾ. ೭ ರಂದು ಕುಶಾಲನಗರ ಟೌನ್ ಪೊಲೀಸ್ ಠಾಣೆ ಪಿಎಸ್‌ಐ ಹೆಚ್.ಟಿ. ಗೀತಾ ಹಾಗೂ ಸಿಬ್ಬಂದಿ ಬೆಂಗಳೂರಿನಲ್ಲಿರುವ ಪುಚ್ಚಿಮಂಡ ರೇಣುಕಾ ಉತ್ತಪ್ಪ ಅವರ ಮನೆಗೆ ಕಳುಹಿಸಿ ಘಟನೆ ಕುರಿತು ಮಾಹಿತಿ ಪಡೆದು ವಿಚಾರಣೆಯನ್ನು ನಡೆಸಿ ಕುಶಾಲನಗರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿರುವ ರಾಮರಾಜನ್, ವಿಚಾರಣೆಯಲ್ಲಿ ಇದು ಖಾಸಗಿ ಆಸ್ತಿ ಆಗಿದ್ದು, ವಕ್ಫ್ ಬೋರ್ಡ್ ಆಸ್ತಿಯಾಗಿರುವುದಿಲ್ಲ. ವಕ್ಫ್ ಬೋರ್ಡ್ ಕಚೇರಿಯಿಂದ ಯಾವುದೇ ವ್ಯಕ್ತಿಗಳು ಬಂದಿರುವುದಿಲ್ಲ ಹಾಗೂ ಜಾಗ ಖಾಲಿ ಮಾಡುವ ಸಂಬAಧ ವಕ್ಫ್ ಬೋರ್ಡ್ನಿಂದ ಯಾವುದೇ ನೋಟಿಸ್ ನೀಡಿರುವುದು ಕಂಡುಬAದಿರುವುದಿಲ್ಲ. ಘಟನೆ ಕುರಿತು ಅವರ ಮನೆಯ ಸುತ್ತ-ಮುತ್ತಲಿನ ಜನರಲ್ಲಿ ವಿಚಾರಣೆ ನಡೆಸಿದ್ದು, ೧೫ ಜನರು ಬಂದಿರುವ ಬಗ್ಗೆ ವಿಚಾರಣೆಯಲ್ಲಿ ಕಂಡುಬAದಿರುವುದಿಲ್ಲ. ಪುಚ್ಚಿಮಂಡ ರೇಣುಕಾ ಉತ್ತಪ್ಪ ಅವರಿಗೆ ತಾ. ೨೯ ಹಾಗೂ ೩೦ರಂದು ಕರೆ ಮಾಡಿ ಬೆದರಿಕೆ ಹಾಕಿರುವ ಬಗ್ಗೆ ತಿಳಿಸಿದ್ದು, ಈ ಸಂಬAಧ ಮೊಬೈಲ್ ಕರೆಗಳನ್ನು ಪರಿಶೀಲಿಸಲಾಗಿದ್ದು, ಆ ದಿನಾಂಕದAದು ಬೆದರಿಕೆ ಕರೆ ಬಂದಿರುವ ಕುರಿತು ಮಾಹಿತಿ ಇರುವುದಿಲ್ಲ

(ಮೊದಲ ಪುಟದಿಂದ) ಈ ಹಿನ್ನೆಲೆಯಲ್ಲಿ ಈಗಾಗಲೇ ಮಹಿಳೆ ರಾಜ್ಯದ ಮುಖ್ಯಮಂತ್ರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಲಿಖಿತ ದೂರು ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಕುಶಾಲನಗರ ತಾಲೂಕು ತಹಶೀಲ್ದಾರ್ ಕಿರಣ್ ಜಿ. ಗೌರಯ್ಯ ಮತ್ತು ಸಿಬ್ಬಂದಿಗಳು ಮಹಿಳೆಯ ಮನೆಗೆ ಭೇಟಿ ನೀಡಿ ಸಂಪೂರ್ಣ ಮಾಹಿತಿ ಕಲೆ ಹಾಕಿ ದಾಖಲೆಗಳ ಪರಿಶೀಲನೆ ನಡೆಸಿದ್ದು, ಈ ಆಸ್ತಿ ೭೯/೨ ರಲ್ಲಿ ಒಟ್ಟು ೨೧ ಸೆಂಟ್ ಹೊಂದಿದ್ದು ಪ್ರಸಕ್ತ ರೇಣುಕಾ ಉತ್ತಪ್ಪ ಅವರು ಜಾಗದ ಮಾಲೀಕರಾಗಿದ್ದಾರೆ ಎಂದು ‘ಶಕ್ತಿ’ಗೆ ತಹಶೀಲ್ದಾರ್ ಕಿರಣ್ ತಿಳಿಸಿದ್ದಾರೆ.

೧೯೮೫ ರಲ್ಲಿ ಆಸ್ತಿ ಖರೀದಿ ಯಾಗಿದ್ದು, ಇದರಲ್ಲಿ ಇತ್ತೀಚೆಗೆ ೫ ಸೆಂಟ್ ಜಾಗವನ್ನು ಸ್ವಾಮಿಗೌಡ ಎಂಬವರಿಗೆ ಮಾರಾಟ ಮಾಡಿರುವ ದಾಖಲೆಯೂ ಲಭಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಕುಶಾಲನಗರ ಪೊಲೀಸ್ ಇನ್ಸ್ಪೆಕ್ಟರ್ ಪ್ರಕಾಶ್, ಠಾಣಾಧಿಕಾರಿ ಗೀತಾ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಸಂಪೂರ್ಣ ಸ್ಥಳ ಮಹಜರು ನಡೆಸಿದ್ದಾರೆ.

-ಚಂದ್ರಮೋಹನ್

ಬೆದರಿಕೆ ಕರೆ ಬಂದಿಲ್ಲ - ಎಸ್.ಪಿ. ರಾಮರಾಜನ್ ಸ್ಪಷ್ಟನೆ

ಪ್ರಕರಣದ ಕುರಿತು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಪ್ರಕಟಣೆ ಮೂಲಕ ಕೆಲವೊಂದು ಅಂಶಗಳನ್ನು ಸ್ಪಷ್ಟಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪೋಸ್ಟ್ ಕುರಿತು ಸ್ವಯಂ ಪ್ರೇರಿತವಾಗಿ ತಾ. ೭ ರಂದು ಕುಶಾಲನಗರ ಟೌನ್ ಪೊಲೀಸ್ ಠಾಣೆ ಪಿಎಸ್‌ಐ ಹೆಚ್.ಟಿ. ಗೀತಾ ಹಾಗೂ ಸಿಬ್ಬಂದಿ ಬೆಂಗಳೂರಿನಲ್ಲಿರುವ ಪುಚ್ಚಿಮಂಡ ರೇಣುಕಾ ಉತ್ತಪ್ಪ ಅವರ ಮನೆಗೆ ಕಳುಹಿಸಿ ಘಟನೆ ಕುರಿತು ಮಾಹಿತಿ ಪಡೆದು ವಿಚಾರಣೆಯನ್ನು ನಡೆಸಿ ಕುಶಾಲನಗರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿರುವ ರಾಮರಾಜನ್, ವಿಚಾರಣೆಯಲ್ಲಿ ಇದು ಖಾಸಗಿ ಆಸ್ತಿ ಆಗಿದ್ದು, ವಕ್ಫ್ ಬೋರ್ಡ್ ಆಸ್ತಿಯಾಗಿರುವುದಿಲ್ಲ. ವಕ್ಫ್ ಬೋರ್ಡ್ ಕಚೇರಿಯಿಂದ ಯಾವುದೇ ವ್ಯಕ್ತಿಗಳು ಬಂದಿರುವುದಿಲ್ಲ ಹಾಗೂ ಜಾಗ ಖಾಲಿ ಮಾಡುವ ಸಂಬAಧ ವಕ್ಫ್ ಬೋರ್ಡ್ನಿಂದ ಯಾವುದೇ ನೋಟಿಸ್ ನೀಡಿರುವುದು ಕಂಡುಬAದಿರುವುದಿಲ್ಲ. ಘಟನೆ ಕುರಿತು ಅವರ ಮನೆಯ ಸುತ್ತ-ಮುತ್ತಲಿನ ಜನರಲ್ಲಿ ವಿಚಾರಣೆ ನಡೆಸಿದ್ದು, ೧೫ ಜನರು ಬಂದಿರುವ ಬಗ್ಗೆ ವಿಚಾರಣೆಯಲ್ಲಿ ಕಂಡುಬAದಿರುವುದಿಲ್ಲ. ಪುಚ್ಚಿಮಂಡ ರೇಣುಕಾ ಉತ್ತಪ್ಪ ಅವರಿಗೆ ತಾ. ೨೯ ಹಾಗೂ ೩೦ರಂದು ಕರೆ ಮಾಡಿ ಬೆದರಿಕೆ ಹಾಕಿರುವ ಬಗ್ಗೆ ತಿಳಿಸಿದ್ದು, ಈ ಸಂಬAಧ ಮೊಬೈಲ್ ಕರೆಗಳನ್ನು ಪರಿಶೀಲಿಸಲಾಗಿದ್ದು, ಆ ದಿನಾಂಕದAದು ಬೆದರಿಕೆ ಕರೆ ಬಂದಿರುವ ಕುರಿತು ಮಾಹಿತಿ ಇರುವುದಿಲ್ಲ

(ಮೊದಲ ಪುಟದಿಂದ) ಹಾಗೂ ಅವರ ಫೋನ್ ಅನ್ನು ಪರಿಶೀಲಿಸಲಾಗಿದ್ದು, ಅಂತಹ ಯಾವುದೇ ಕರೆ ಸ್ವೀಕರಿಸಿರುವ ಬಗ್ಗೆ ಮಾಹಿತಿ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ದೂರುದಾರರ ಹೇಳಿಕೆಯಂತೆ, ೨ ಜನರು ಬಂದಿದ್ದಾರೆಯೇ ಅಥವಾ ಇಲ್ಲವೇ? ಒಂದು ವೇಳೆ ಬಂದಿದ್ದರೆ ವೈಯಕ್ತಿಕ ವಿಚಾರಕ್ಕಾಗಿ ಅಥವಾ ಬೇರೆ ಯಾವ ಕಾರಣಗಳಿಗಾಗಿ ಬಂದಿರುವ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ರಾಮರಾಜನ್ ವಿವರಿಸಿದ್ದಾರೆ.

ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಸುಳ್ಳು ಸುದ್ದಿಯನ್ನು ಹಂಚಿಕೊಳ್ಳುವುದನ್ನು ನಿಲ್ಲಿಸಬೇಕು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡಿಸಿ ಸಮಾಜದ ಸಾಮರಸ್ಯವನ್ನು ಕದಡುವ ಪ್ರಯತ್ನ ನಡೆದಲ್ಲಿ ಹಾಗೂ ಕೋಮು ಸೌಹಾರ್ದತೆಯನ್ನು ಕದಡುವ ದುರುದ್ದೇಶದಿಂದ ಮತ್ತು ಸಮುದಾಯವನ್ನು ಒಡೆದು ಕಾನೂನು, ಸುವ್ಯವಸ್ಥೆಗೆ ಧಕ್ಕೆ ತರುವಂತಹ ಸುದ್ದಿಯನ್ನು ಪೋಸ್ಟ್ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಯಾವುದೇ ಅಪರಿಚಿತ ವ್ಯಕ್ತಿಗಳು ಯಾವುದೇ ಸರ್ಕಾರಿ ಇಲಾಖೆ ಅಥವಾ ಸರ್ಕಾರದ ವತಿಯಿಂದ ಬಂದಿರುವುದಾಗಿ ತಿಳಿಸಿ ಬೆದರಿಕೆ ಹಾಕುವುದು ಕಂಡುಬAದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ ೧೧೨ಗೆ ಕರೆ ಮಾಡಿ ಮಾಹಿತಿ ನೀಡಿ ಸಹಕರಿಸುವಂತೆ ಕೆ. ರಾಮರಾಜನ್ ತಿಳಿಸಿದ್ದಾರೆ.