ಮಡಿಕೇರಿ, ನ. ೮: ಸರ್ವೋಚ್ಚ ನ್ಯಾಯಾಲಯವು ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ (ಬಿಪಿಎಲ್) ನೀಡಲು ಆದೇಶಿಸಿದ್ದು, ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರಾರಂಭವಾಗಿದೆ.
ಆದ್ದರಿAದ ಆದ್ಯತಾ ಪಡಿತರ ಚೀಟಿ ಹೊಂದಿಲ್ಲದ ಇ-ಶ್ರಮ್ ನೋಂದಾಯಿತ ಎಲ್ಲಾ ಅರ್ಹ ಕಾರ್ಮಿಕರು ನಿಮ್ಮ ಹತ್ತಿರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸುವುದು.
ಹೆಚ್ಚಿನ ಮಾಹಿತಿಗೆ ಟೋಲ್ ಫ್ರೀ ದೂರವಾಣಿ ಸಂಖ್ಯೆ: ೧೮೦೦-೪೨೫-೯೩೩೯ ಅಥವಾ ಸಹಾಯವಾಣಿ ೧೯೬೭ಕ್ಕೆ ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೫.೩೦ ಗಂಟೆ ವರೆಗೂ ಸಂಪರ್ಕಿಸುವAತೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.