ಮಡಿಕೇರಿ, ನ. ೮: ಅಖಿಲ ಭಾರತ ೮೭ ನೇ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಯುಕ್ತ ಕನ್ನಡ ಜ್ಯೋತಿ ಹೊತ್ತ ರಥ ಯಾತ್ರೆಯು ತಾ. ೧೦ ಮತ್ತು ೧೧ ರಂದು ಕೊಡಗು ಜಿಲ್ಲೆಯಾದ್ಯಂತ ಸಂಚರಿಸಲಿದ್ದು, ಜಿಲ್ಲೆಯಲ್ಲಿ ಸಂಚರಿಸುವ ವೇಳಾಪಟ್ಟಿ ವಿವರ ಇಂತಿದೆ.

ತಾ. ೧೦ ರಂದು ಬೆಳಿಗ್ಗೆ ೯.೩೦ ಗಂಟೆಗೆ ಸಂಪಾಜೆಯಲ್ಲಿ ಗೌರವಪೂರ್ವಕವಾಗಿ ಸ್ವಾಗತಿಸಲಾಗುತ್ತದೆ. ಬಳಿಕ ಬೆಳಿಗ್ಗೆ ೧೧ ಗಂಟೆಗೆ ಮಡಿಕೇರಿಗೆ ಆಗಮಿಸಲಿದೆ. ನಂತರ ಮಧ್ಯಾಹ್ನ ೧೨ ಗಂಟೆಗೆ ಮೂರ್ನಾಡಿಗೆ ತೆರಳಲಿದೆ. ಮಧ್ಯಾಹ್ನ ೨.೩೦ ಗಂಟೆಗೆ ವೀರಾಜಪೇಟೆಯಲ್ಲಿ ಸ್ವಾಗತಿಸಲಾಗುತ್ತದೆ. ಮಧ್ಯಾಹ್ನ ೪ ಗಂಟೆಗೆ ಗೋಣಿಕೊಪ್ಪದಲ್ಲಿ ಸ್ವಾಗತಿಸಲಾಗುತ್ತದೆ. ಸಂಜೆ ೫.೩೦ ಗಂಟೆಗೆ ಪೊನ್ನಂಪೇಟೆಯಲ್ಲಿ ಸ್ವಾಗತ ಕಾರ್ಯಕ್ರಮ ನಡೆಯಲಿದೆ.

ತಾ. ೧೧ ರಂದು ಬೆಳಿಗ್ಗೆ ೧೦ ಗಂಟೆಗೆ ಕುಶಾಲನಗರದಲ್ಲಿ ಸ್ವಾಗತ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ ೩.೩೦ ಗಂಟೆಗೆ ಸೋಮವಾರಪೇಟೆಯಲ್ಲಿ ಬರಮಾಡಿಕೊಳ್ಳಲಾಗುತ್ತದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ತಿಳಿಸಿದ್ದಾರೆ.