ಮಡಿಕೇರಿ, ನ. ೮: ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಿಗೆ ತೆರವಾದ ಸ್ಥಾನಗಳಿಗೆ ಉಪಚುನಾವಣೆ ನಡೆಯುವ ಹಿನ್ನೆಲೆ ತಾ. ೧೧ ರ ಸಂಜೆ ೫ ಗಂಟೆಯೊಳಗೆ ಶಸ್ತಾçಸ್ತç ಠೇವಣಾತಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.

ಮಡಿಕೇರಿ ತಾಲೂಕಿನ ಎಮ್ಮೆಮಾಡು, ಸೋಮವಾರಪೇಟೆ ತಾಲೂಕಿನ ನಿಡ್ತ, ಕುಶಾಲನಗರ ತಾಲೂಕಿನ ಕೂಡುಮಂಗಳೂರು ಮತ್ತು ಚೆಟ್ಟಳ್ಳಿ, ಪೊನ್ನಂಪೇಟೆ ತಾಲೂಕಿನ ತಿತಿಮತಿ, ಟಿ.ಶೆಟ್ಟಿಗೇರಿ, ಕುಟ್ಟ ಮತ್ತು ಕೆ.ಬಾಡಗ ಗ್ರಾಮ ಪಂಚಾಯಿತಿಗಳ ತೆರವಾದ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ. ಆದ್ದರಿಂದ ಈ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಗಳಲ್ಲಿ ಅವ್ಯಹಾರಗಳಿಗೆ ಆಸ್ಪದವಿಲ್ಲದಂತೆ ಹಾಗೂ ನೀತಿ ಸಂಹಿತೆ ಉಲ್ಲಂಘನೆ ಯಾಗದಂತೆ ಮತ್ತು ಶಾಂತಿಯುತ ಮತದಾನ ನಡೆಸುವ ಸಂಬAಧ ಮುನ್ನೆಚ್ಚರಿಕಾ ಕ್ರಮವಾಗಿ, ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ ೨೦೨೩ರ ಕಲಂ ೧೬೩ ಅಡಿಯಲ್ಲಿ ಪ್ರತ್ಯಾಯೋಜಿತ ವಾಗಿರುವ ಅಧಿಕಾರ ಚಲಾಯಿಸಿ ಈ ಆದೇಶ ಹೊರಡಿಸಿದ್ದಾರೆ.

ನೀತಿಸಂಹಿತೆ ಜಾರಿಯಲ್ಲಿರುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಶಸ್ತಾçಸ್ತç ಪರವಾನಗಿಯನ್ನು ಹೊಂದಿರುವವರು ಕಡ್ಡಾಯವಾಗಿ ಠೇವಣಿ ಇರಿಸುವುದು ಮತ್ತು ವಿನಾಯಿತಿ ಪತ್ರ ಹೊಂದಿರುವವರ ಪೈಕಿ ಕ್ರಿಮಿನಲ್ ಹಿನ್ನೆಲೆಯುಳ್ಳ, ನ್ಯಾಯಾಲಯದಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮತ್ತು ಈ ಹಿಂದಿನ ಚುನಾವಣಾ ಸಂದರ್ಭದಲ್ಲಿ ಶಸ್ತಾçಸ್ತçಗಳನ್ನು ದುರ್ಬಳಕೆ ಮಾಡಿದ ಹಿನ್ನೆಲೆಯುಳ್ಳ ವ್ಯಕ್ತಿಗಳು ಹೊಂದಿರುವ ಶಸ್ತಾçಸ್ತçಗಳನ್ನು ಸಮೀಪದ ಪೊಲೀಸ್ ಠಾಣೆಯಲ್ಲಿ ಅಥವಾ ಶಸ್ತಾçಸ್ತç, ಮದ್ದುಗುಂಡು ವ್ಯಾಪಾರಿಗಳಲ್ಲಿ ತಾ. ೧೧ ರ ಸಂಜೆ ೫ ಗಂಟೆಯ ಒಳಗಾಗಿ ಠೇವಣಿ ಮಾಡಲು ಆದೇಶಿಸಿದ್ದಾರೆ.

ಈ ಅವಧಿಯಲ್ಲಿ ಶಸ್ತಾçಸ್ತçಗಳನ್ನು ಒಯ್ಯುವುದು ಮತ್ತು ಹಿಡಿದು ಓಡಾಡುವುದನ್ನು ನಿಷೇಧಿಸಲಾಗಿದೆ/ ಈ ಆದೇಶ ಬ್ಯಾಂಕ್/ಸರ್ಕಾರಿ ಕರ್ತವ್ಯದ ನಿಮಿತ್ತ ಶಸ್ತಾçಸ್ತç ಹೊಂದಿರುವವರಿಗೆ ಅನ್ವಯಿಸುವುದಿಲ್ಲ ಮತ್ತು ವಿವಿಧ ಕಾರಣಗಳಿಂದ ಚುನಾವಣೆ ನಡೆಯದಿದ್ದಲ್ಲಿ ಅಥವಾ ನೀತಿ ಸಂಹಿತೆ ಇಲ್ಲದಿರುವ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಅನ್ವಯಿಸುವುದಿಲ್ಲ. ಚುನಾವಣಾ ನೀತಿ ಸಂಹಿತೆ ಮುಕ್ತಾಯಗೊಂಡ ಒಂದು ವಾರದ ಒಳಗಾಗಿ ಠೇವಣಿ ಇರಿಸಿದ್ದ ಶಸ್ತಾçಸ್ತçಗಳನ್ನು ನಿಯಮಾನುಸಾರ ಬಿಡುಗಡೆಗೊಳಿಸಿ ಹಿಂತಿರುಗಿಸಲಾಗುವುದು ಎಂದು ತಿಳಿಸಿದ್ದಾರೆ.