ಗೋಣಿಕೊಪ್ಪಲು, ನ. ೮: ಕೇಂದ್ರ ಸರ್ಕಾರ ತರುತ್ತಿರುವ ವಕ್ಫ್ ತಿದ್ದುಪಡಿ ಕಾಯ್ದೆಗೆ ರಾಜ್ಯ ಸರ್ಕಾರವು ಮುಂದಿನ ಅದಿವೇಶನದಲ್ಲಿ ಒಮ್ಮತದಿಂದ ನಿರ್ಣಯವನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಬೇಕು. ಮುಂದೆ ಯಾವುದೇ ವಕ್ಫ್ ಅದಾಲತ್ ನಡೆಸದಂತೆ ಸರ್ಕಾರಿ ಆದೇಶವನ್ನು ಹೊರಡಿಸಬೇಕು ಹಾಗೂ ಇದಕ್ಕೆ ಸಂಬAಧಿಸಿದ ಗೆಜೆಟ್ ನೋಟಿಫಿ ಕೇಶನ್ ಹಿಂಪಡೆಯಬೇಕು. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆಯಾಚಿಸುವುದರೊಂದಿಗೆ ಸಚಿವ ಜಮೀರ್ ಅಹಮ್ಮದ್‌ರವರನ್ನು ಕೂಡಲೇ ಸಚಿವ ಸ್ಥಾನದಿಂದ ಉಚ್ಚಾಟಿಸಬೇಕೆಂದು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದರು.

ಪೊನ್ನಂಪೇಟೆಯ ಬಸ್ ನಿಲ್ದಾಣದಲ್ಲಿ ವೀರಾಜಪೇಟೆ ಬಿಜೆಪಿ ಮಂಡಲ ವತಿಯಿಂದ ಹಮ್ಮಿಕೊಳ್ಳ ಲಾಗಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ಶಾಂತಿ ಸಾಮರಸ್ಯದ ನಾಡಾಗಿದ್ದ ರಾಜ್ಯವನ್ನು ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ವಕ್ಫ್ ಮಂಡಳಿಯ ಮೂಲಕ ಅತ್ಯಂತ ಆತಂಕದ ಸ್ಥಿತಿಗೆ ತಳ್ಳುತ್ತಿದೆ. ದೇಶದ ಜನತೆಯ ಹಿತದೃಷ್ಠಿಯಿಂದ ವಕ್ಫ್ ಮಂಡಳಿಯಲ್ಲಿ ಆಗುತ್ತಿರುವ ಅಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಮುಂದಾಗಿದೆ.

ಈ ವಿಷಯವು ಜಂಟಿ ಪಾರ್ಲಿಮೆಂಟರಿ ಬೋರ್ಡ್ನ ಪರಿಶೀಲನೆಯಲ್ಲಿದೆ. ರಾಜ್ಯದಲ್ಲಿಯೂ ಇಂತಹ ಕುಕೃತ್ಯಗಳಿಗೆ ಕಾಂಗ್ರೆಸ್ ಸರ್ಕಾರ ಹಾಗೂ ಸಚಿವ ಜಮೀರ್ ಅಹಮ್ಮದ್ ನೇರವಾಗಿ ಕುಮ್ಮಕ್ಕು ಕೊಡುತ್ತಿರುವುದು ಇಡೀ ರಾಜ್ಯದ ಜನರ ಆತಂಕಕ್ಕೆ ಕಾರಣವಾಗಿದೆ. ರಾಜ್ಯದ ಹಲವು ದೇವಾಲಯ ಸೇರಿದಂತೆ ಇನ್ನಿತರ ರೈತರ ಜಮೀನುಗಳನ್ನು ವಕ್ಫ್ ಬೋರ್ಡ್ ಆಸ್ತಿಯೆಂದು ಬೆದರಿಕೆ ನೀಡುವ ನೋಟೀಸುಗಳನ್ನು ರೈತರಿಗೆ ನೀಡಲಾಗುತ್ತಿದೆ.

ಈ ಹಿನ್ನಲೆಯಲ್ಲಿ ಬಿಜೆಪಿಯು ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಕೊಡಗು ಜಿಲ್ಲೆಯಲ್ಲಿ ಕೆಲವು ಮಂದಿಗೆ ಈ ಬಗ್ಗೆ ನೋಟೀಸು ಜಾರಿಗೊಳಿಸಿದೆ. ಇದನ್ನು ಭಾರತೀಯ ಜನತಾ ಪಾರ್ಟಿ ತೀವ್ರವಾಗಿ ಖಂಡಿಸುತ್ತದೆ. ಯಾವುದೇ ಕಾರಣಕ್ಕೂ ಹಿಂದೂಗಳ ಹಾಗೂ ರೈತರ ಭೂಮಿಯನ್ನು ವಕ್ಫ್ ಆಸ್ತಿಯೆಂದು ಬಿಂಬಿಸಲು ಹೊರಟಿರು ವುದನ್ನು ನಾವು ಸಹಿಸುವುದಿಲ್ಲ. ಹಿಂದೂಗಳೆಲ್ಲರೂ ಒಂದಾಗುವ ಮೂಲಕ ಇದರ ವಿರುದ್ದ ಹೋರಾಟಕ್ಕೆ ಭಾಗಿಯಾಗಬೇಕು. ಈ ಹೋರಾಟ ವನ್ನು ನ್ಯಾಯ ಸಿಗುವವರೆಗೂ ಮುಂದುವರೆಸಲಾಗುವುದು. ಮಠ ಮಾನ್ಯಗಳು, ಕನ್ನಡಪರ ಚಳವಳಿಗಳು, ರೈತಪರ ಚಳವಳಿಗಳು ಈ ಹೋರಾಟದಲ್ಲಿ

(ಮೊದಲ ಪುಟದಿಂದ) ಭಾಗಿಯಾಗಬೇಕು ಎಂದು ಅವರು ಹೇಳಿದರು. ಜಿಲ್ಲೆಯಲ್ಲಿ ಎರಡು ಶಾಸಕರುಗಳಿಂದ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಕೇಂದ್ರ ಸರ್ಕಾರ ಮಂಜೂರು ಮಾಡಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಸದ್ಯದಲ್ಲಿಯೇ ಚಾಲನೆ ದೊರೆಯಲಿದೆ ಅಧಿಕಾರವಿಲ್ಲದಿದ್ದರೂ ಕೊಡಗಿನ ಮೇಲೆ ವಿಶೇಷ ಕಾಳಜಿ ಹೊಂದಿದ್ದೇನೆ ಎಂದರು. ಕೊಡಗಿನಲ್ಲಿರುವ ಆಸ್ತಿಗಳನ್ನು ಜಾಗೃತೆಯಿಂದ ನೋಡಿಕೊಳ್ಳಿ ಅನ್ಯರಿಗೆ ಭೂಮಿಯನ್ನು ಕೊಡುವಾಗ ಎಚ್ಚರ ವಹಿಸಿ ಮುಂದೆ ತಮ್ಮ ಭೂಮಿಯೂ ಕೂಡ ವಕ್ಫ್ ಬೋರ್ಡ್ ಆಸ್ತಿಯಾದರೂ ಅಚ್ಚರಿ ಇಲ್ಲ. ಎಂದು ಮಾಜಿ ಶಾಸಕ ಕೆ.ಜಿ. ಬೋಪಯ್ಯ ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದರು. ರಾಜ್ಯ ಸರ್ಕಾರ ಒಂದು ಸಮುದಾಯವನ್ನು ಓಲೈಸುವ ಸಲುವಾಗಿ ಇಂತಹ ಚಾಳಿಯನ್ನು ಮುಂದುವರೆಸುತ್ತಿದೆ. ರಾಜ್ಯದಲ್ಲಿ ಅನಾಹುತಗಳು ನಡೆದಲ್ಲಿ ಕಾಂಗ್ರೆಸ್ ಸರ್ಕಾರವೇ ಇದಕ್ಕೆ ನೇರ ಹೊಣೆ. ಹಿಂದೂ ವಿರೋಧಿ ನಿರ್ಧಾರಗಳನ್ನು ಕೈಗೊಳ್ಳುವ ತನ್ನ ಚಾಳಿಯನ್ನು ಕೈ ಬಿಡಬೇಕೆಂದು ಬೋಪಯ್ಯ ಆಗ್ರಹಿಸಿದರು.

ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ ಮಾತನಾಡಿ ಕೊಡಗಿನಲ್ಲಿ ಸಿದ್ದರಾಮಯ್ಯ ಸರ್ಕಾರ ವಕ್ಫ್ ಆಸ್ತಿ ವಿಚಾರದಲ್ಲಿ ಹಲವರಿಗೆ ನೋಟಿಸು ನೀಡಿ ಇಲ್ಲಿಯ ಸಾಮರಸ್ಯವನ್ನು ಹಾಳು ಮಾಡುತ್ತಿದೆ. ಇದನ್ನು ಭಾರತೀಯ ಜನತಾ ಪಾರ್ಟಿ ತೀವ್ರವಾಗಿ ಖಂಡಿಸುತ್ತದೆ. ಇದೇ ರೀತಿ ಮುಂದುವರೆದಲ್ಲಿ ರಾಜ್ಯದಲ್ಲಿ ಜನತೆಯನ್ನು ಒಗ್ಗೂಡಿಸಿ ಪ್ರತಿಭಟನೆ ನಡೆಸಲಾಗುವುದೆಂದು ಎಚ್ಚರಿಸಿದರು.

ವೀರಾಜಪೇಟೆ ಬಿಜೆಪಿ ಮಂಡಲದ ಅಧ್ಯಕ್ಷ ಸುವೀನ್ ಗಣಪತಿ ಮುಂದಾಳತ್ವದಲ್ಲಿ ಜರುಗಿದ ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಮಾಜಿ ಅಧ್ಯಕ್ಷ ರಾಬಿನ್ ದೇವಯ್ಯ, ಮನು ಮತ್ತಪ್ಪ ಮಾತನಾಡಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನೆಲ್ಲಿರ ಚಲನ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಗುಮ್ಮಟ್ಟಿರ ಕಿಲನ್ ಗಣಪತಿ, ಕುಂಞAಗಡ ಅರುಣ್ ಭೀಮಯ್ಯ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಅನಿತಾ ಪೂವಯ್ಯ, ಪಕ್ಷದ ಪ್ರಮುಖರಾದ ಮಾಚಿಮಾಡ ರವೀಂದ್ರ, ವಾಟೇರಿರ ಬೋಪಣ್ಣ, ವಿವಿಧ ಶಕ್ತಿ ಕೇಂದ್ರದ ಪ್ರಮುಖ್, ಸಹಪ್ರಮುಖ್, ವಿವಿಧ ಮೋರ್ಚಾದ ಪದಾಧಿಕಾರಿಗಳು, ಬೂತ್ ಮಟ್ಟದ ಅಧ್ಯಕ್ಷರು ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಪಕ್ಷದ ಸದಸ್ಯರು ಪಾಲ್ಗೊಂಡಿದ್ದರು.

ಪೊನ್ನAಪೇಟೆ ತಾಲೂಕು ತಹಶೀಲ್ದಾರ್ ಮೋಹನ್ ಕುಮಾರ್ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ವೀರಾಜಪೇಟೆ ಮಂಡಲದ ಪ್ರದಾನ ಕಾರ್ಯದರ್ಶಿ ಕುಟ್ಟಂಡ ಅಜಿತ್ ಕರುಂಬಯ್ಯ ಸ್ವಾಗತಿಸಿ, ಕಾರ್ಯದರ್ಶಿ ಮಂಜು ಗಣಪತಿ ವಂದಿಸಿದರು.

ಗೋಣಿಕೊಪ್ಪ ವೃತ್ತ ನಿರೀಕ್ಷಕ ಶಿವರಾಜ್ ಮುದೋಳ್ ಸಮ್ಮುಖದಲ್ಲಿ ಸೂಕ್ತ ಬಂದೋಬಸ್ತ್ ಒದಗಿಸಲಾಗಿತ್ತು. ಬಸ್ ನಿಲ್ದಾಣದಲ್ಲಿ ನೂರಾರು ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.