ಕೂಡಿಗೆ, ನ. ೯: ಕೊಡಗು ವಿಶ್ವವಿದ್ಯಾಲಯದ ವಿವಿಧ ಸ್ನಾತಕೋತ್ತರ ಪದವಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎರಡನೇ ಸೆಮಿಸ್ಟರ್ನ ವಿದ್ಯಾರ್ಥಿಗಳ ಫಲಿತಾಂಶವನ್ನು ಕೊಡಗು ವಿಶ್ವವಿದ್ಯಾಲಯದ ಪ್ರೊ. ಅಶೋಕ ಸಂಗಪ್ಪ ಆಲೂರ ಮತ್ತು ಹಾಸನ ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಟಿ.ಸಿ. ತಾರಾನಾಥ್ ಅವರು ಪ್ರಕಟಿಸಿದರು.
ಕೊಡಗು ವಿಶ್ವವಿದ್ಯಾಲಯವು ಈ ಹಿಂದೆ ಕೂಡ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳ ಫಲಿತಾಂಶವನ್ನು ಹಾಗೂ ಬಿ.ಇಡಿ ಪ್ರಶಿಕ್ಷಣಾರ್ಥಿಗಳ ಪರೀಕ್ಷಾ ಫಲಿತಾಂಶವನ್ನು ಅತ್ಯಂತ ಕಡಿಮೆ ಅವಧಿಯಲ್ಲಿ ಯುಜಿಸಿ ನಿಯಮಾನುಸಾರ ಶೀಘ್ರವಾಗಿ ಪ್ರಕಟಿಸುವ ಮೂಲಕ ಪರೀಕ್ಷಾ ಮತ್ತು ಮೌಲ್ಯಮಾಪನ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸುತ್ತಾ ಬಂದಿದೆ.
ಅದರಂತೆಯೇ ೨೦೨೩-೨೪ನೇ ಶೈಕ್ಷಣಿಕ ಸಾಲಿನ ಎರಡನೇ ಸೆಮಿಸ್ಟರ್ ಪರೀಕ್ಷೆ ನಡೆದ ಕಡಿಮೆ ಅವಧಿಯಲ್ಲಿ ಫಲಿತಾಂಶವನ್ನು ಶೀಘ್ರವಾಗಿ ಪ್ರಕಟಿಸಲಾಗಿದೆ.
ಕೊಡಗು ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಆದ ಪ್ರೊ. ಸುರೇಶ್ ಎಂ. ಅವರು, ಮಡಿಕೇರಿ ಎಫ್ಎಂಕೆಎAಸಿ ಕಾಲೇಜಿನ ಪ್ರಾಂಶುಪಾಲ ಪ್ರೊ. ರಾಘವ್, ಸಿಂಡಿಕೇಟ್ ಸದಸ್ಯರುಗಳಾದ ಡಾ. ಸರಸ್ವತಿ, ಡಾ. ದಯಾನಂದ್, ಪ್ರಾಧ್ಯಾಪಕರುಗಳಾದ ಡಾ. ಕಾವೇರಿ, ಪ್ರೊ. ತಿಪ್ಪೇಸ್ವಾಮಿ, ಡಾ. ಪ್ರದೀಪ್ ಆರ್. ಭಂಡಾರಿ, ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳ ಸಂಯೋಜಕ ಪ್ರೊ. ರವಿಶಂಕರ್, ಯುಯುಸಿಎಂಎಸ್ ನೋಡೆಲ್ ಅಧಿಕಾರಿ ಗಗನ್ ಹೆಚ್.ಎಸ್. ಮೊದಲಾದವರು ಉಪಸ್ಥಿತರಿದ್ದರು.