ಮಡಿಕೇರಿ, ನ. ೧೧: ಮಾಯಮುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ವ ಸಮಾರಂಭ ತಾ. ೧೬ ಮತ್ತು ೧೭ರಂದು ನಡೆಯಲಿದೆ ಎಂದು ಪತ್ರಿಕಾಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಯಮುಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಾಟು ಮೊಣ್ಣಪ್ಪ ಮಾಹಿತಿ ನೀಡಿದರು.

ಶತಮಾನೋತ್ಸವ ಪ್ರಯುಕ್ತ ತಾ. ೧೬ರಂದು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ಅಂದು ಬೆಳಿಗ್ಗೆ ೧೦ ಗಂಟೆಗೆ ವಿಧಾನಪರಿಷತ್ ಮಾಜಿ ಸದಸ್ಯ ಚೆಪ್ಪುಡಿರ ಅರುಣ್ ಮಾಚಯ್ಯ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ ೨ ಗಂಟೆಗೆ ಶತಮಾನೋತ್ಸವ ಸಮಾರಂಭವನ್ನು ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಉದ್ಘಾಟಿಸಲಿದ್ದು, ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಶತಮಾನೋತ್ಸವ ಪ್ರಯುಕ್ತ ರೂ. ೧೫ರಿಂದ ೨೦ ಲಕ್ಷ ವೆಚ್ಚದಲ್ಲಿ ನೂತನ ಸಭಾಂಗಣ ನಿರ್ಮಿಸಲಾಗುತ್ತಿದ್ದು, ಇದಕ್ಕೆ ಧನಸಹಾಯ ಮಾಡಿದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ನೂತನ ಸಭಾಂಗಣವನ್ನು ಉದ್ಘಾಟಿಸಲಿದ್ದಾರೆ. ಸ್ಮರಣ ಸಂಚಿಕೆಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಬಿಡುಗಡೆ ಮಾಡಲಿದ್ದಾರೆ. ಸಂಸದ ಯದುವೀರ್ ಒಡೆಯರ್, ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ವಿಧಾನಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ, ಮತ್ತಿತರರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಟಾಟು ಮೊಣ್ಣಪ್ಪ ಹೇಳಿದರು. ಇದೇ ಸಂದರ್ಭ ಈ ಶಾಲೆಯಲ್ಲಿ ಓದಿ ಸಾಧನೆ ಮಾಡಿದ ಸಚಿವ ಕೆ.ಜೆ. ಜಾರ್ಜ್, ಮಾಜಿ ಎಂ.ಎಲ್.ಸಿ. ಅರುಣ್ ಮಾಚಯ್ಯ, ವಿಜ್ಞಾನಿ ಕಾಳಪಂಡ ಕಾಶಿ ಅಪ್ಪಯ್ಯ, ಕ್ರೀಡಾಪಟು ಕಳ್ಳಿಚಂಡ ಪ್ರಸಾದ್, ಬಿ.ಎಸ್.ಎಫ್. ಡಿಐಜಿ ಆಗಿದ್ದ ಐಚೆಟ್ಟಿರ ದಿ. ಪೊನ್ನಪ್ಪ ಅವರ ಮನೆಯವರನ್ನು, ಅರಣ್ಯ ಮಹಾವಿದ್ಯಾಲಯದ ನಿವೃತ್ತ ಡೀನ್ ಡಾ. ಸಿ.ಜಿ. ಕುಶಾಲಪ್ಪ, ಬ್ಯಾಂಕಿAಗ್ ಕ್ಷೇತ್ರದಲ್ಲಿ ಕಂಜಿತAಡ ಸ್ವಾತಿ, ಸಮಾಜ ಸೇವಕರಾದ ಕೊಂಗAಡ ಎಂ. ಗಣಪತಿ, ಚೆಪ್ಪುಡಿರ ರಾಧಾ ಅಚ್ಚಯ್ಯ ಇವರುಗಳನ್ನು ಸನ್ಮಾನಿಸಲಾಗುತ್ತದೆ. ತಾ. ೧೭ರಂದು ಬೆಳಿಗ್ಗೆ ೧೦ ಗಂಟೆಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿವೆ. ಮಧ್ಯಾಹ್ನ ೩ ಗಂಟೆಗೆ ತನ್ನ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಎ.ಎಸ್. ಪೊನ್ನಣ್ಣ, ಮಾಜಿ ಎಂ.ಎಲ್.ಸಿ. ಅರುಣ್ ಮಾಚಯ್ಯ, ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಕಾಳಚಂಡ ಟಿ. ಬಿದ್ದಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ. ಸಿ.ಇ.ಓ. ಆನಂದ ಪ್ರಕಾಶ್ ಮೀನ, ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಶಕ್ತಿ ದಿನಪತ್ರಿಕೆ ಪ್ರಧಾನ ಸಂಪಾದಕ ಜಿ. ರಾಜೇಂದ್ರ, ಮತ್ತಿತರರು ಭಾಗವಹಿಸಲಿ ದ್ದಾರೆ ಎಂದು ಟಾಟು ಮೊಣ್ಣಪ್ಪ ಮಾಹಿತಿಯಿತ್ತರು.ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಕಾಳಚಂಡ ಟಿ. ಬಿದ್ದಪ್ಪ ಮಾತನಾಡಿ, ಶತಮಾನೋತ್ಸವ ಆಚರಣೆ ಸಂಬAಧ ಹಲವು ಬಾರಿ ಪೂರ್ವಭಾವಿ ಸಭೆಗಳನ್ನು ನಡೆಸಿ ಸಿದ್ಧತೆ ಕೈಗೊಳ್ಳಲಾಗಿದೆ. ೩ಐದನೇ ಪುಟಕ್ಕೆ

(ಮೊದಲ ಪುಟದಿಂದ) ಶಾಲೆಗಾಗಿ ದುಡಿದವರನ್ನು ಸ್ಮರಿಸಿಕೊಳ್ಳುತ್ತೇವೆ ಎಂದರು.

ಶತಮಾನೋತ್ಸವ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಬಿ.ಎನ್. ಪ್ರಥ್ಯು ಮಾತನಾಡಿ, ತಾ. ೧೬ ಮತ್ತು ೧೭ರಂದು ಶಾಲಾ ವಿದ್ಯಾರ್ಥಿಗಳು ಹಾಗೂ ವಿವಿಧ ಸಾಂಸ್ಕೃತಿಕ ಕಲಾ ತಂಡಗಳಿAದ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿಬರಲಿವೆ. ತಾ. ೧೭ರ ಸಂಜೆ ೭ ಗಂಟೆಗೆ ಶಿವಧೂತ ಗುಳಿಗ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ ಎಂದರು. ಗೋಷ್ಠಿಯಲ್ಲಿ ಶತಮಾನೋತ್ಸವ ಸಮಿತಿ ಖಜಾಂಚಿ ಎಸ್.ಎಸ್. ಸುರೇಶ್ ಉಪಸ್ಥಿತರಿದ್ದರು.