ಕುಶಾಲನಗರ, ನ.೧೧: ಕನ್ನಡ ಭಾಷೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರೂ ನಾಡು- ನುಡಿ, ಕಲೆ, ಸಂಸ್ಕೃತಿ, ಪರಂಪರೆಯನ್ನು ಸಂರಕ್ಷಿಸಿ ಒಗ್ಗಟ್ಟಿನಿಂದ ಪ್ರೋತ್ಸಾಹ ನೀಡುವ ಮೂಲಕ ಭಾಷಾ ಬೆಳವಣಿಗೆಗೆ ಶ್ರಮಿಸಬೇಕು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಮನವಿ ಮಾಡಿದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ವಿವಿಧ ಸಂಘ- ಸಂಸ್ಥೆಗಳು, ಕನ್ನಡಾಭಿಮಾನಿಗಳು ಹಾಗೂ ನಾಗರಿಕರು ವಿದ್ಯಾರ್ಥಿಗಳ ಸಮ್ಮುಖದಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ೫೦ ಹಾಗೂ ೬೯ನೇ ಕನ್ನಡ ರಾಜ್ಯೋತ್ಸವ ೨೦೨೪ದ ಅಂಗವಾಗಿ ಕುಶಾಲನಗರ ಪಟ್ಟಣದ ಗಣಪತಿ ದೇವಸ್ಥಾನದ ಬಳಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿ ಸಹಸ್ರಾರು ಮಂದಿಯಿAದ ಏಕಕಾಲದಲ್ಲಿ ಏರ್ಪಡಿಸಿದ್ದ ಕನ್ನಡ ಕಂಠ ಗಾಯನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಡಿಕೇರಿಯಲ್ಲಿನ ಜಿಲ್ಲಾ ಕನ್ನಡ ಭವನ ನಿರ್ಮಾಣ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುವುದು. ಹಾಗೂ ಕುಶಾಲನಗರದ ಕಲಾಭವನದ ಕಾಮಗಾರಿಗೆ ಹೆಚ್ಚುವರಿ ರೂ.೧ ಕೋಟಿ ಹಣ ಮಂಜೂರಾಗಿದೆ ಎಂದರು. ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳಿಗೆ ತಾವು ಸದಾ ಪ್ರೋತ್ಸಾಹ ನೀಡಲಾಗುವುದು. ಸಹಸ್ರ ಮಂದಿಯಿAದ ನಡೆದ ಕನ್ನಡ ಕಂಠ ಗಾಯನ ಕಾರ್ಯಕ್ರಮ ಯಶಸ್ವಿಗೊಳಿಸಲು ಕಾರಣರಾದವರಿಗೆಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದರು. ಪ್ರತಿಯೊಬ್ಬರೂ ಕನ್ನಡದ ಕೆಲಸ ಮತ್ತು ಅಭಿವೃದ್ಧಿಗೆ ಸಹಕರಿಸಬೇಕು ಎಂದು ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವಕಾಮತ್ ಮಾತನಾಡಿ, ಕರ್ನಾಟಕ ಸುವರ್ಣ ಮಹೋತ್ಸವ ೫೦ ಹಾಗೂ ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕುಶಾಲನಗರದಲ್ಲಿ ನಡೆಯುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆ ಹಾಗೂ ಕನ್ನಡ ಕಂಠ ಗಾಯನ ಕಾರ್ಯಕ್ರಮವು ಅಭೂತಪೂರ್ವವಾಗಿ ನಡೆಯುತ್ತಿದ್ದು, ಇಂತಹ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುತ್ತಿರುವ ಕನ್ನಡಾಭಿಮಾನಿಗಳಿಗೆ ಕೃತಜ್ಞತೆಗಳನ್ನು ಸಲ್ಲಿಸಲಾಗುತ್ತಿದೆ. ಕನ್ನಡ ಕಂಠ ಗಾಯನವನ್ನು ಅತ್ಯಂತ ಯಶಸ್ವಿಯಾಗಿ ಸಂಘಟಿಸಿರುವ ಕುಶಾಲನಗರ ಕನ್ನಡ ಸಾಹಿತ್ಯ ಪರಿಷತ್ತಿನ ಘಟಕ ಹಾಗೂ ನಾಗರಿಕರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
ಜಿಲ್ಲಾ ಕ.ಸಾ.ಪ.ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಕನ್ನಡ ನಾಡು- ನುಡಿ, ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕನ್ನಡ ಜ್ಯೋತಿ ರಥಯಾತ್ರೆಯು ಜಿಲ್ಲೆಯಲ್ಲಿ ಸಂಚರಿಸುವ ವೇಳೆಯಲ್ಲಿಯೇ ಅಭೂತಪೂರ್ವ ಕನ್ನಡ ಕಂಠ ಗಾಯನ ಕಾರ್ಯಕ್ರಮ ಏರ್ಪಡಿಸುವ ಮೂಲಕ ಕನ್ನಡ ತೇರನ್ನು ಎಲ್ಲರೂ ಜತೆಗೂಡಿ ಎಳೆಯುವ ಮೂಲಕ ನಾಡಿನ ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಎತ್ತಿ ಹಿಡಿಯಬೇಕು. ಈ ದಿನ ಕುಶಾಲನಗರದಲ್ಲಿ ಸಹಸ್ರಾರು ಮಂದಿಯಿAದ ಏಕಕಾಲದಲ್ಲಿ ನಡೆದಿರುವ ಕನ್ನಡ ಕಂಠ ಗಾಯನ ಕಾರ್ಯಕ್ರಮವು ಕನ್ನಡ ನಾಡಿನ ಗತ ವೈಭವವನ್ನು ಪ್ರತಿಬಿಂಬಿಸುತ್ತಿದೆ ಎಂದರು. ಕನ್ನಡ ಸಾಹಿತ್ಯ ಪರಿಷತ್ತು ಜನರ ಸಹಭಾಗಿತ್ವದಲ್ಲಿ ಯಶಸ್ವಿಯಾಗಿ ಸಂಘಟಿಸಿರುವ ಕನ್ನಡ ಕಂಠ ಗಾಯನವು ಕನ್ನಡ ಸಂಸ್ಕೃತಿಯ ಪ್ರತೀಕವಾಗಿದೆ.
ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ.ಶಶಿಧರ್ ಪ್ರಾಸ್ತಾವಿಕವಾಗಿ ಮಾತನಾಡಿ, ತಾಲೂಕು ರಚನೆಯಾದ ನಂತರ ಕುಶಾಲನಗರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ವೈಶಿಷ್ಟö್ಯಪೂರ್ಣ ಹಲವು ವೈವಿಧ್ಯಮಯ ಕಾರ್ಯಕ್ರಮಗಳನ್ನು ಸಂಘಟಿಸುವ ನಾಡು- ನುಡಿ, ಸಂಸ್ಕೃತಿ- ಪರಂಪರೆಯ ಬೆಳವಣಿಗೆಗೆ ಶ್ರಮಿಸುತ್ತಿರುವುದು ಶ್ಲಾಘನೀಯವಾದುದು ಎಂದರು. ಇಂತಹ ವೈವಿಧ್ಯಮಯ ಕನ್ನಡ ಕಾರ್ಯಕ್ರಮಗಳಿಗೆ ನಾಗರಿಕರ ಸಹಕಾರ ಅಗತ್ಯ ಎಂದರು. ಅಧ್ಯಕ್ಷತೆ ವಹಿಸಿದ್ದ ತಾಲೂಕು ಕ.ಸಾ.ಪ.ಅಧ್ಯಕ್ಷ ಕೆ.ಎಸ್.ನಾಗೇಶ್ ಮಾತನಾಡಿ, ಎಲ್ಲರ ಸಹಕಾರ ಹಾಗೂ ಪರಿಶ್ರಮದಿಂದ ಕನ್ನಡ ಕಂಠ ಗಾಯನ ಕಾರ್ಯಕ್ರಮವು ಯಶಸ್ವಿಯಾಗಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು.
ಪುರಸಭೆಯ ಅಧ್ಯಕ್ಷೆ ಜಯಲಕ್ಷಿö್ಮ, ತಾಲೂಕು ತಹಶೀಲ್ದಾರ್ ಕಿರಣ್ ಜಿ. ಗೌರಯ್ಯ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಪರಮೇಶ್ವರ್ ಕುಮಾರ್, ಜನಪದ ಸಿರಿ ಕನ್ನಡ ಸಂಸ್ಥೆಯ ಜರಗನಹಳ್ಳಿ ೩ಐದನೇ ಪುಟಕ್ಕೆ
(ಮೊದಲ ಪುಟದಿಂದ) ಕಾಂತರಾಜು, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಜಯವರ್ಧನ್, ಮಾಜಿ ಉಪಾಧ್ಯಕ್ಷೆ ಸುರಯ್ಯಬಾನು, ತಾ.ಪಂ. ಮಾಜಿ ಅಧ್ಯಕ್ಷೆ ಗೀತಾ ಬಸಪ್ಪ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿಗಳಾದ ಎಸ್.ಐ.ಮುನೀರ್ ಅಹ್ಮದ್, ರೇವತಿ ರಮೇಶ್, ನಿರ್ದೇಶಕಿ ಫ್ಯಾನ್ಸಿ ಮುತ್ತಣ್ಣ, ಡಿಡಿಪಿಐ ಸಿ.ರಂಗಧಾಮಪ್ಪ, ಡಿವೈಎಸ್ಪಿ ಗಂಗಾಧರಪ್ಪ, ಪ್ರಬಾರ ಬಿಇಓ ಜಿ.ಎಂ.ಹೇಮAತ್, ಕುಶಾಲನಗರ ತಾಲೂಕು ಕಸಾಪ ಕಾರ್ಯದರ್ಶಿಗಳಾದ ಎಸ್.ನಾಗರಾಜ್, ಟಿ.ವಿ.ಶೈಲಾ, ಕೋಶಾಧಿಕಾರಿ ಕೆ.ವಿ.ಉಮೇಶ್, ಪುರಸಭೆಯ ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ವಕೀಲರ ಸಂಘದ ಅಧ್ಯಕ್ಷ ಆರ್.ಕೆ.ನಾಗೇಂದ್ರಬಾಬು, ರಾಜಸ್ಥಾನ ಸಮಾಜದ ಅಧ್ಯಕ್ಷ ಮಹೇಂದ್ರಕುಮಾರ್ ಶರ್ಮ, ಕಸಾಪ ಪ್ರಮುಖರಾದ ಬಿ.ಸಿ.ದಿನೇಶ್, ಬಿ.ಎಸ್.ಪರಮೇಶ್, ಡಿ.ಆರ್ ಸೋಮಶೇಖರ್, ಬಿ.ಬಿ. ಹೇಮಲತಾ, ಡಿ.ವಿ. ರಾಜೇಶ್, ಕೆ.ಎನ್. ದೇವರಾಜ್, ಜಿ.ಬಿ. ಹರೀಶ್, ದೇವಿಪ್ರಸಾದ್, ಟಿ.ಬಿ.ಮಂಜುನಾಥ್, ಉ.ರಾ. ನಾಗೇಶ್ ಕಾರ್ಯಕ್ರಮ ನಿರ್ವಹಿಸಿದರು. ಎಸ್.ನಾಗರಾಜ್ ಸ್ವಾಗತಿಸಿ, ಟಿ.ಬಿ.ಮಂಜುನಾಥ್ ವಂದಿಸಿದರು.
ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಿದ ಶಾಸಕ ಡಾ ಮಂತರ್ ಗೌಡ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ನಾಗರಿಕರ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು. ಕುಶಾಲನಗರ ಮತ್ತು ಸುತ್ತಮುತ್ತ ವ್ಯಾಪ್ತಿಯ ಶಾಲಾ ಕಾಲೇಜು ವಿದ್ಯಾರ್ಥಿಗಳು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.