ಪೊನ್ನಂಪೇಟೆ, ನ. ೧೨: ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ, ಕರ್ನಾಟಕ ಬ್ಯಾರಿ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿಯ ೨೦೨೨ನೇ ಸಾಲಿನ ಗೌರವ ಪ್ರಶಸ್ತಿ ಪಡೆದಿರುವ ಕುವೇಂಡ ವೈ. ಹಂಝತುಲ್ಲಾ ಅವರನ್ನು ಕೆ.ಎಂ.ಎ. ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ವೀರಾಜಪೇಟೆಯ ಸೇಂಟ್ ಆ್ಯನ್ಸ್ ಪ್ಯಾರಿಸ್ ಸಭಾಂಗಣದಲ್ಲಿ ನಡೆದ ಕೆ.ಎಂ.ಎ. ಪ್ರತಿಭಾ ಪುರಸ್ಕಾರ-೨೦೨೪ ವಿತರಣೆ ಮತ್ತು ಸನ್ಮಾನ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಕೆ.ಎಂ.ಎ. ಅಧ್ಯಕ್ಷ ದುದ್ದಿಯಂಡ ಹೆಚ್. ಸೂಫಿ ಹಾಜಿ, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್, ನಿವೃತ್ತ ಎಡಿಜಿಪಿ ಜಿ.ಎಂ. ಹಯಾತ್, ಕೊಡಗು ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘದ ಅಧ್ಯಕ್ಷ ಚಪ್ಪಂಡ ಹರೀಶ್ ಉತ್ತಯ್ಯ, ಕೆ.ಎಂ.ಎ. ಉಪಾಧ್ಯಕ್ಷರಾದ ಅಕ್ಕಳತಂಡ ಎಸ್. ಮೊಯ್ದು, ಕೋಶಾಧಿಕಾರಿ ಹರಿಶ್ಚಂದ್ರ ಎ. ಹಂಸ, ನಿರ್ದೇಶಕರಾದ ಚಿಮ್ಮಿಚ್ಚಿರ ಕೆ. ಇಬ್ರಾಹಿಂ ಹಾಜಿ ಮೊದಲಾದವರು ಉಪಸ್ಥಿತರಿದ್ದರು.