ಸುAಟಿಕೊಪ್ಪ, ನ. ೧೨: ಹೋಬಳಿ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಳೆದ ಒಂದು ವಾರಗಳಿಂದ ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ಏಳನೇ ಹೊಸಕೋಟೆಯ ಹೊಟೇಲ್, ಕಂಬಿಬಾಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಉಪ್ಪುತೋಡು ಕಾರ್ಮಿಕರ ಲೈನ್ ಮನೆಗಳು ಸೇರಿದಂತೆ ವಿವಿಧೆಡೆ ಕಳ್ಳತನ ಆರೋಪ ಸಂಬAಧ ಸಾರ್ವಜನಿಕರಿಗೆ ಮತ್ತು ಪೊಲೀಸರಿಗೆ ತಲೆನೋವಾಗಿದ್ದ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸುಂಟಿಕೊಪ್ಪ ಪೊಲೀಸರಿಗೆ ಖಚಿತ ಮಾಹಿತಿಯನ್ವಯ ಸಂಶಯಾಸ್ಪದ ವ್ಯಕ್ತಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಫೋಟೊ ಕಳುಹಿಸಿ ಮಾಹಿತಿ ನೀಡುವಂತೆ ಮನವಿ ಮಾಡಿಕೊಂಡಿದ್ದರು.
ಈ ಸಾಮಾಜಿಕ ಜಾಲತಾಣದಲ್ಲಿ ಕಂಡುಬAದ ವ್ಯಕ್ತಿಯು ವಿರಾಜಪೇಟೆಯಲ್ಲಿ ಕಾಣಿಸಿಕೊಂಡಿದ್ದು, ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಶ್ರೀಮಂಗಲ- ಕುಟ್ಟ ನಿವಾಸಿ ಮಣಿ ಯರವರ ಸುಬ್ರಮಣಿ ಬಂಧಿತ ಆರೋಪಿ. ವೀರಾಜಪೇಟೆಯಲ್ಲಿ ಸೆರೆಸಿಕ್ಕ ಆರೋಪಿ ಸುಬ್ರಮಣಿ ಈ ಹಿಂದೆ ಪೊನ್ನಂಪೇಟೆಯ ಸುಳುಗೋಡುವಿನಲ್ಲಿ ಕಳ್ಳತನದ ಆರೋಪವನ್ನು ಎದುರಿಸುತ್ತಿದ್ದು, ಆ ನಿಟ್ಟಿನಲ್ಲಿ ಪೊನ್ನಂಪೇಟೆ ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ನ್ಯಾಯಾಲಯದ ಅನುಮತಿ ಪಡೆದು ಈ ಪ್ರಕರಣ ಸಂಬAಧ ತಮ್ಮ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುವುದು ಎಂದು ಸುಂಟಿಕೊಪ್ಪ ಠಾಣಾಧಿಕಾರಿ ಚಂದ್ರಶೇಖರ್ ಮಾಹಿತಿ ನೀಡಿದರು.