ಮಡಿಕೇರಿ, ನ. ೧೩ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕನ್ನಡ ವಿಭಾಗ, ಮಡಿಕೇರಿ ಇವರ ಸಹಯೋಗದಲ್ಲಿ ೬೯ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ತಾ. ೧೬ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.

ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪಿ.ಕೆ. ವೆಂಕಟೇಶ್ವರ ಪ್ರಸನ್ನ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಮಡಿಕೇರಿ ತಾಲೂಕು ಕ.ಸಾ.ಪ ನಿಕಟಪೂರ್ವ ಅಧ್ಯಕ್ಷ ಅಂಬೆಕಲ್ಲು ನವೀನ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಕಾವೇರಿ ಪ್ರಕಾಶ್, ನಾಪೋಕ್ಲು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ನೆರವಂಡ ಉಮೇಶ್, ಭಾಗಮಂಡಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸುನಿಲ್ ಪತ್ರಾವೋ, ಸಂಪಾಜೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಗೋಪಾಲ್ ಪೆರಾಜೆ, ಮೂರ್ನಾಡು ಹೋಬಳಿ ಕ.ಸಾ.ಪ. ಅಧ್ಯಕ್ಷ್ಷೆ ಈರಮಂಡ ಹರಿಣಿ ವಿಜಯ್ ಇತರರು ಪಾಲ್ಗೊಳ್ಳಲಿದ್ದಾರೆ. ಸುಂಟಿಕೊಪ್ಪದ ಎ.ಎಸ್. ಶ್ರೀಶ ರಾಜ್ಯೋತ್ಸವ ಕುರಿತು ಭಾಷಣ ಮಾಡಲಿದ್ದಾರೆ. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.