ಉಪ ಚುನಾವಣೆ: ಮೂರು ಕ್ಷೇತ್ರಗಳಲ್ಲಿ ಮತದಾನ ಅಂತ್ಯ
ಬೆAಗಳೂರು, ನ. ೧೩: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಬುಧವಾರ ಉಪ ಚುನಾವಣೆ ನಡೆದಿದ್ದು, ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣದಲ್ಲಿ ಮತದಾನ ಪ್ರಕ್ರಿಯೆ ಅಂತ್ಯಗೊAಡಿದೆ. ಇದರೊಂದಿಗೆ ಅಭ್ಯರ್ಥಿಗಳ ಭವಿಷ್ಯ ಇವಿಎಂನಲ್ಲಿ ಭದ್ರವಾಗಿದೆ. ಇಂದು ಬೆಳಿಗ್ಗೆ ೭ ಗಂಟೆಯಿAದ ಆರಂಭವಾಗಿದ್ದ ಮತದಾನ ಸಂಜೆ ೬ ಗಂಟೆಗೆ ಮುಕ್ತಾಯಗೊಂಡಿದ್ದು, ಮೂರು ಕ್ಷೇತ್ರಗಳಲ್ಲಿ ಒಟ್ಟಾರೆ ಶೇ. ೭೬.೯ ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಜಿದ್ದಾ ಜಿದ್ದಿನ ಕಣವಾಗಿ ಮಾರ್ಪಟ್ಟಿರುವ ಬೊಂಬೆ ನಾಡು ಚನ್ನಪಟ್ಟಣದಲ್ಲಿ ದಾಖಲೆಯ ಶೇ. ೮೮.೮೦ ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಚನ್ನಪಟ್ಟಣದಲ್ಲಿ ಎನ್ಡಿಎ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್ನಿAದ ಸಿ.ಪಿ. ಯೋಗೇಶ್ವರ್ ಸೇರಿದಂತೆ ೩೧ ಮಂದಿ ಕಣದಲ್ಲಿದ್ದಾರೆ. ಇನ್ನೂ ಸಂಡೂರಿನಲ್ಲಿ ಶೇ.೭೬.೨೪ ರಷ್ಟು ಹಾಗೂ ಶಿಗ್ಗಾಂವಿಯಲ್ಲಿ ಶೇ. ೮೦.೪೮ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಸಂಡೂರಲ್ಲಿ ಕಾಂಗ್ರೆಸ್ನ ಇ. ಅನ್ನಪೂರ್ಣ, ಬಿಜೆಪಿಯಿಂದ ಬಂಗಾರು ಹನುಮಂತ ಸೇರಿ ೬ ಹುರಿಯಾಳುಗಳು ಕಣದಲ್ಲಿದ್ದಾರೆ. ಶಿಗ್ಗಾಂವಿಯಲ್ಲಿ ಬಿಜೆಪಿಯಿಂದ ಭರತ್ ಬೊಮ್ಮಾಯಿ, ಕಾಂಗ್ರೆಸ್ನಿAದ ಪಠಾಣ್ ಯಾಸೀರ್ ಅಹ್ಮದ್ಖಾನ್ ಸೇರಿದಂತೆ ೮ ಅಭ್ಯರ್ಥಿಗಳಿದ್ದಾರೆ. ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿರುವ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಹರಸಾಹಸ ಪಟ್ಟಿದ್ದಾರೆ. ಇದಕ್ಕಾಗಿ ಹಲವು ರೀತಿ ತಂತ್ರ, ಪ್ರತಿತಂತ್ರಗಳ ಮೂಲಕ ಪ್ರಚಾರ ನಡೆಸಿದ್ದರು.
ಜಾರ್ಖಂಡ್ ಅಸೆಂಬ್ಲಿ ಚುನಾವಣೆ: ಶೇ. ೬೪.೮೬ ರಷ್ಟು ಮತದಾನ
ರಾಂಚಿ, ನ. ೧೩: ಜಾರ್ಖಂಡ್ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಬುಧವಾರ ಮುಕ್ತಾಯಗೊಂಡಿದ್ದು, ಸಂಜೆ ೫ ಗಂಟೆಯವರೆಗೆ ಶೇ. ೬೪.೮೬ ರಷ್ಟು ಮತದಾನವಾಗಿದೆ. ಇಂದು ೪೩ ಕ್ಷೇತ್ರಗಳಲ್ಲಿ ಮತದಾನ ನಡೆದಿದ್ದು, ಲೋಹರ್ಡಗಾದಲ್ಲಿ ಅತಿ ಹೆಚ್ಚು ಅಂದರೆ ಶೇ. ೭೩.೨೧ರಷ್ಟು ಮತದಾನವಾಗಿದ್ದರೆ, ಹಜಾರಿಬಾಗ್ನಲ್ಲಿ ಅತಿ ಕಡಿಮೆ ಅಂದರೆ ಶೇ. ೫೯.೧೩ ರಷ್ಟು ಮತದಾನವಾಗಿದೆ. ಪ್ರಮುಖ ರಾಜಕೀಯ ನಾಯಕರಾದ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್, ಮಾಜಿ ಸಂಸದೆ ಗೀತಾ ಕೋರಾ ಸೇರಿದಂತೆ ಒಟ್ಟು ೬೮೩ ಅಭ್ಯರ್ಥಿಗಳು ಭವಿಷ್ಯ ಇವಿಎಂನಲ್ಲಿ ಭದ್ರವಾಗಿದೆ. ಬಿಜೆಪಿ ಮತ್ತು ಇಂಡಿಯಾ ಬ್ಲಾಕ್ ಎರಡೂ ಹೈ-ಪ್ರೊಫೈಲ್ ಅಬ್ಬರದ ಪ್ರಚಾರ ನಡೆಸಿದವು. ಬಿಜೆಪಿ ತನ್ನ 'ರೋಟಿ, ಬೇಟಿ, ಮಾಟಿ' ಅಜೆಂಡಾವನ್ನು ಒತ್ತಿಹೇಳಿತ್ತು ಮತ್ತು ಇಂಡಿಯಾ ಬ್ಲಾಕ್ ಕಲ್ಯಾಣ ಸಾಧನೆಗಳನ್ನು ಎತ್ತಿ ತೋರಿಸುತ್ತ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಬಿಜೆಪಿ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಟೀಕಿಸಿತ್ತು. ಜಾರ್ಖಂಡ್ನಲ್ಲಿ ಎರಡನೇ ಹಂತದ ಮತದಾನವು ನವೆಂಬರ್ ೨೦ ರಂದು ನಡೆಯಲಿದ್ದು, ನವೆಂಬರ್ ೨೩ ರಂದು ಫಲಿತಾಂಶ ಪ್ರಕಟವಾಗುತ್ತದೆ. ಪ್ರಸ್ತುತ ಬಹುಮತ ಹೊಂದಿರುವ ಜೆಎಂಎA ನೇತೃತ್ವದ ಸರ್ಕಾರವು ಅಧಿಕಾರವನ್ನು ಉಳಿಸಿಕೊಳ್ಳುತ್ತದೆಯೇ ಅಥವಾ ಬಿಜೆಪಿ ಅಧಿಕಾರಕ್ಕೇರುತ್ತದೆಯೇ ಎಂಬುದನ್ನು ಚುನಾವಣಾ ಫಲಿತಾಂಶ ನಿರ್ಧರಿಸುತ್ತದೆ.
ಜಾತಿ ಸಂಘರ್ಷ ಪ್ರಕರಣ; ೯೭ ಮಂದಿಗೆ ಜಾಮೀನು
ಧಾರವಾಡ, ನ. ೧೩: ದೇಶಾದ್ಯಂತ ಸುದ್ದಿಯಾಗಿದ್ದ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿನ ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದ್ದ ೯೭ ಮಂದಿಗೆ ಹೈಕೋರ್ಟ್ ಧಾರವಾಡ ಪೀಠ ಬುಧವಾರ ಜಾಮೀನು ನೀಡಿದೆ. ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠ ಎ-೧ ಆರೋಪಿಯನ್ನು ಹೊರತುಪಡಿಸಿ ಉಳಿದ ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿತು. ಎ-೧ ಆರೋಪಿ ಜಾಮೀನು ಕೋರಿ ಅರ್ಜಿ ಸಲ್ಲಿಸಿಲ್ಲ. ಮತ್ತೊಬ್ಬ ಆರೋಪಿ ಆದೇಶ ಪ್ರಕಟವಾದ ನಂತರ ಮೃತಪಟ್ಟಿದ್ದರು. ಜಾಮೀನಿಗೆ ಒಬ್ಬರ ಭದ್ರತೆ ಮತ್ತು ರೂ. ೫೦ ಸಾವಿರ ಬಾಂಡ್ ನೀಡಬೇಕು ಎಂದು ಷರತ್ತು ವಿಧಿಸಲಾಗಿದೆ. ೨೦೧೪ರ ಆಗಸ್ಟ್ ೨೮ ರಂದು ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದ ಮಂಜುನಾಥ ಮತ್ತು ಸ್ನೇಹಿತರು ಎಂಬುವರು ಪವರ್ ಸಿನಿಮಾ ನೋಡಲು ಗಂಗಾವತಿ ನಗರದಲ್ಲಿರುವ ಶಿವ ಚಿತ್ರಮಂದಿರಕ್ಕೆ ಹೋಗಿದ್ದರು. ಈ ಸಮಯದಲ್ಲಿ ಟಿಕೆಟ್ ತೆಗೆದುಕೊಳ್ಳುವ ವಿಚಾರಕ್ಕೆ ಜಗಳ ಆರಂಭವಾಗಿತ್ತು. ಬಳಿಕ, ಮಂಜುನಾಥ್ ಮತ್ತು ಆತನ ಸ್ನೇಹಿತರು, “ನಮ್ಮೂರಿನ ದಲಿತರು ನಮ್ಮ ಮೇಲೆ ಹಲ್ಲೆ ಮಾಡಿಸಿದ್ದಾರೆ” ಎಂದು ಗ್ರಾಮದಲ್ಲಿ ಹೇಳಿದ್ದರು. ಇದು ಸವರ್ಣೀಯ ಕುಟುಂಬಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಅಂದು ಸಂಜೆ ಗ್ರಾಮದ ಸವರ್ಣೀಯರು, ದಲಿತರ ಕೇರಿ ಮೇಲೆ ದಾಳಿ ಮಾಡಿದ್ದರು. ದಲಿತರಿಗೆ ಸೇರಿದ್ದ ನಾಲ್ಕು ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದರು. ಅನೇಕರ ಮೇಲೆ ಸಿಕ್ಕಸಿಕ್ಕ ವಸ್ತುಗಳಿಂದ ಹಲ್ಲೆ ಮಾಡಿದ್ದರು. ಕೇವಲ ಬೆಂಕಿ ಹಚ್ಚಿದ್ದು ಮಾತ್ರವಲ್ಲ, ಅಂದು ೨೭ ದಲಿತರ ಮೇಲೆ ಹಲ್ಲೆಯಾಗಿತ್ತು. ಈ ಬಗ್ಗೆ ಅಂದು ಘಟನೆಯಲ್ಲಿ ಗಾಯಗೊಂಡವರು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸವರ್ಣೀಯರ ವಿರುದ್ದ ಅಟ್ರಾಸಿಟಿ, ಕೊಲೆಗೆ ಯತ್ನ, ದೊಂಬಿ, ಜೀವ ಬೆದರಿಕೆ ಸೇರಿದಂತೆ ಅನೇಕ ಸೆಕ್ಷನ್ ಅಡಿಯಲ್ಲಿ ಪ್ರಕರಣಗಳು ದಾಖಲಿಸಿದ್ದರು. ಘಟನೆ ಬಳಿಕ ೧೧೭ ಸವರ್ಣೀಯರ ಮೇಲೆ ಕೇಸ್ ದಾಖಲಾಗಿತ್ತು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣದ ೯೮ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಎಸ್ಸಿ ಮತ್ತು ಎಸ್ಟಿ ಸಮುದಾಯಕ್ಕೆ ಸೇರಿದ ಮೂವರು ಆರೋಪಿಗಳಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.
ಸುಳ್ಳು ಮಾಹಿತಿ ಆರೋಪ: ಕೃಷ್ಣ ವಿರುದ್ಧ ಎಫ್.ಐ.ಆರ್.
ಮೈಸೂರು, ನ. ೧೩: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿರುವ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧವೇ ಎಫ್.ಐ.ಆರ್. ದಾಖಲಾಗಿದ್ದು, ಸುಳ್ಳು ಮಾಹಿತಿ ನೀಡಿದ ಆರೋಪದ ಮೇರೆಗೆ ಪ್ರಕರಣ ದಾಖಲಾಗಿದೆ. ಜನರಲ್ಲಿ ಭಯ ಮೂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಮಾಹಿತಿ ಹಬ್ಬಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮುಡಾ ಹಗರಣಕ್ಕೆ ಸಂಬAಧಿಸಿದAತೆ ಮುಖ್ಯಮಂತ್ರಿ ಅವರ ಫೇಸ್ಬುಕ್ ಪೋಸ್ಟ್ನಲ್ಲಿ ಮಾನಹಾನಿ ಮಾಡುವ ಉದ್ದೇಶದಿಂದ ಸ್ನೇಹಮಯಿ ಕೃಷ್ಣ ಅವರು ಸುಳ್ಳು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕರ್ನಾಟಕ ಘಟಕದ ವಕ್ತಾರ ಲಕ್ಷ್ಮಣ್ ಎಂ. ನೀಡಿದ ದೂರಿನ ಮೇರೆಗೆ ಮಂಗಳವಾರ ರಾತ್ರಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಸ್ರೇಲ್ ವಾಯುದಾಳಿ; ಮೂವರು ಹೆಜ್ಬುಲ್ಲಾ ಕಮಾಂಡರ್ಗಳ ಹತ್ಯೆ
ಲೆಬನಾನ್, ನ. ೧೩: ದಕ್ಷಿಣ ಲೆಬನಾನ್ನಲ್ಲಿ ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಮೂವರು ಹೆಜ್ಬುಲ್ಲಾ ಕಮಾಂಡರ್ ಗಳನ್ನು ಹತ್ಯೆಮಾಡಲಾಗಿದೆ ಎಂದು ಇಸ್ರೇಲ್ ರಕ್ಷಣಾ ಪಡೆ ಬುಧವಾರ ಖಚಿತಪಡಿಸಿದೆ. ಬೈರುತ್ನ ದಹೀಹ್ ಜಿಲ್ಲೆಯಲ್ಲಿ ಉಗ್ರರ ಗುಂಪಿನ ಬಹುತೇಕ ಶಸ್ತಾçಸ್ತç ಸಂಗ್ರಹಣೆ ಮತ್ತು ತಯಾರಿಕೆ ಸೌಲಭ್ಯಗಳನ್ನು ನಾಶಪಡಿಸಲಾಗಿದೆ ಎಂದು ಸೇನೆ ಮಂಗಳವಾರ ರಾತ್ರಿ ಬಹಿರಂಗಪಡಿಸಿದ ಬೆನ್ನಲ್ಲೇ ಈ ಸುದ್ದಿ ಹೊರಬಿದ್ದಿದೆ. ಉದ್ದೇಶಿತ ದಾಳಿ ಉತ್ತರ ಗಡಿಯಲ್ಲಿ ಇಸ್ರೇಲಿ ನಾಗರಿಕರ ವಿರುದ್ಧ ದಕ್ಷಿಣ ಲೆಬನಾನ್ನಿಂದ ದಾಳಿ ನಡೆಸುವ ಹೆಜ್ಬುಲ್ಲಾದ ಸಾಮರ್ಥ್ಯವನ್ನು ಮತ್ತಷ್ಟು ಕುಗ್ಗಿಸುತ್ತದೆ ಎಂದು ಸೇನೆ ಹೇಳಿದೆ. ದಕ್ಷಿಣ ಲೆಬನಾನ್ನ ಹಾಜಿರ್ ಪ್ರದೇಶದಲ್ಲಿ ಹೆಜ್ಬೊಲ್ಲಾದ ಕ್ಷಿಪಣಿ ವಿರೋಧಿ ಘಟಕ ‘ನಾಸರ್' ಕಮಾಂಡರ್ ಅಯ್ಮನ್ ಮುಹಮ್ಮದ್ ನಬುಲ್ಸಿಯನ್ನು ಭಾನುವಾರ ಹತ್ಯೆ ಮಾಡಲಾಗಿದೆ. ಘಜರ್ ಪ್ರದೇಶದ ಮತ್ತೊಬ್ಬ ಕಮಾಂಡರ್ ಜೊತೆಗೆ ಟೆಬ್ನಿಟ್ ಪ್ರದೇಶದ ಹೆಜ್ಬೂಲ್ಲಾದ ಕಮಾಂಡರ್ ಆಗಿ ಸೇವೆ ಸಲ್ಲಿಸುತ್ತಿದ್ದ ಹಜ್ ಅಲಿ ಯುಸೆಫ್ ಸಲಾಹ್ ಅವರನ್ನು ಇತ್ತೀಚಿನ ವಾಯುದಾಳಿಯಲ್ಲಿ ಕೊಲ್ಲಲಾಗಿದೆ ಎಂದು ಹೇಳಿದೆ.