ಶನಿವಾರಸಂತೆ, ನ. ೧೩: ಅಖಿಲ ಭಾರತ ೮೭ನೇ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಯುಕ್ತ ಜಿಲ್ಲೆಯಾದ್ಯಂತ ಸಂಚರಿಸಿದ ಕನ್ನಡ ಜ್ಯೋತಿ ರಥ ಶನಿವಾರಸಂತೆ ಪಟ್ಟಣಕ್ಕೆ ಆಗಮಿಸಿದಾಗ ತಾಲೂಕು ಆಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಗ್ರಾಮ ಪಂಚಾಯಿತಿ, ಕಂದಾಯ ಇಲಾಖೆ, ಮತ್ತಿತರ ಸಂಘಟನೆಗಳ ಸಹಭಾಗಿತ್ವದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಹರೀಶ್ ಮತ್ತು ಸಾಹಿತಿ ಶ.ಗ. ನಯನತಾರಾ ಭುವನೇಶ್ವರಿ ತಾಯಿಗೆ ಮಾಲಾರ್ಪಣೆ ಮಾಡಿದರು. ಸ್ವಸಹಾಯ ಸಂಘದ ಸದಸ್ಯೆಯರಾದ ಕೆ.ಎಸ್. ಮಂಜುಳಾ, ಆರತಿ, ಅರ್ಪಿತಾ, ವೇದಾವತಿ ಆರತಿ ಬೆಳಗಿದರು. ತಾಲೂಕು ತಹಶೀಲ್ದಾರ್ ಶ್ರೀಧರ್ ಕಂಕನವಾಡಿ, ಕಂದಾಯ ಇಲಾಖೆ ಉಪತಹಶೀಲ್ದಾರ್ ಮಧುಸೂದನ್, ಗ್ರಾಮ ಲೆಕ್ಕಾಧಿಕಾರಿ ಚಂದನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಾದ ಕುಮಾರ್, ಮಣಜೂರ್ ಮಂಜುನಾಥ್, ತಾಲೂಕು ಕಸಾಪ ಅಧ್ಯಕ್ಷ ಎಸ್.ಡಿ. ವಿಜೇತ್, ಮಾಜಿ ಅಧ್ಯಕ್ಷ ಜೆ.ಸಿ. ಶೇಖರ್, ಹೋಬಳಿ ಕಸಾಪ ಅಧ್ಯಕ್ಷ ಬಿ.ಬಿ. ನಾಗರಾಜ್, ಕಾರ್ಯದರ್ಶಿ ಮೋಹನ್ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಕಸಾಪ ಹೋಬಳಿ ಘಟಕದ ನಿರ್ದೇಶಕರಾದ ಪ್ರಕಾಶ್ಚಂದ್ರ, ಶಿವಪ್ಪ, ಗ್ರಾಮ ಪಂಚಾಯಿತಿ ಸದಸ್ಯರಾದ ಎಸ್.ಎನ್. ರಘು, ಸರ್ದಾರ್ ಅಹಮ್ಮದ್, ಫರ್ಜಾನಾ, ಆಟೋ ಮಾಲೀಕರ ಮತ್ತು ಚಾಲಕರ ಸಂಘದ ಅಧ್ಯಕ್ಷ ರವಿ, ಉಪಾಧ್ಯಕ್ಷ ಮಹಮ್ಮದ್, ಕಾರ್ಯದರ್ಶಿ ಇನ್ನಾ, ಸದಸ್ಯರು, ಮುಖಂಡ ಕೆ.ಟಿ. ಹರೀಶ್ ಮತ್ತಿತರರು ಹಾಜರಿದ್ದರು.