ಮಡಿಕೇರಿ, ನ. ೧೩: ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಜಿಲ್ಲಾ ಘಟಕ, ಮಡಿಕೇರಿ ತಾಲೂಕು, ಜಿಲ್ಲಾ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘ, ಗೋಣಿಕೊಪ್ಪ ಬ್ರಾಹ್ಮಣ ಸಮಾಜ, ಕುಶಾಲನಗರ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಬ್ರಾಹ್ಮಣ ಸಮುದಾಯದವರಿಗಾಗಿ ವಿಪ್ರ ಕ್ರೀಡೋತ್ಸವ ಹಾಗೂ ಶೈಕ್ಷಣಿಕ ಸಾಧಕರಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಆಯೋಜಕರು ಮಾಹಿತಿ ನೀಡಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕ್ರೀಡಾ ಸಂಚಾಲಕ ಗೋಪಾಲಕೃಷ್ಣ, ಡಿ. ೧ ರಂದು ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್ ಪಂದ್ಯಾಟ ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಬೆಳಿಗ್ಗೆ ೯.೩೦ಕ್ಕೆ ಆರಂಭಗೊಳ್ಳಲಿದೆ. ಪುರುಷರು ಹಾಗೂ ಮಹಿಳೆಯರಿಗಾಗಿ ಪ್ರತ್ಯೇಕವಾಗಿ ಸಿಂಗಲ್ಸ್, ಡಬಲ್ಸ್ ವಿಭಾಗದಲ್ಲಿ ಪಂದ್ಯಾಟ ನಡೆಯಲಿದೆ. ಕ್ರೀಡಾಕೂಟದಂದು ಸ್ಪರ್ಧಿಗಳು ಹೆಸರು ನೋಂದಾಯಿಸಿಕೊಳ್ಳಲು ಅವಕಾಶವಿದೆ ಎಂದರು.

ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಗೌರವ ಕಾರ್ಯದರ್ಶಿ ಬಿ.ಕೆ. ಜಗದೀಶ್ ಮಾತನಾಡಿ, ಡಿ. ೮ ರಂದು ನಗರದ ಜ. ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿ ಹಾಗೂ ಹಗ್ಗಜಗ್ಗಾಟ ಪಂದ್ಯ ಆಯೋಜಿಸಲಾಗಿದೆ. ಜಿಲ್ಲೆಯ ವಿವಿಧೆಡೆಗಳಿಂದ ಸುಮಾರು ೧೦ ರಿಂದ ೧೨ ಕ್ರಿಕೆಟ್ ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ. ಅಂದು ಮಧ್ಯಾಹ್ನ ೩.೩೦ಕ್ಕೆ ಪುರುಷ ಮತ್ತು ಮಹಿಳೆಯರ ವಿಭಾಗದಲ್ಲಿ ಹಗ್ಗಜಗ್ಗಾಟ ನಡೆಯಲಿದೆ. ತಾ. ೩೦ ರೊಳಗೆ ತಂಡಗಳು ನೋಂದಣಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ೯೪೪೮೨೦೬೬೮೮, ೯೪೪೮೧೧೯೯೯೩ ಸಂಖ್ಯೆಯನ್ನು ಸಂಪರ್ಕಿಸುವAತೆ ಮನವಿ ಮಾಡಿದರು.

ನಿಧಿಯ ನಿರ್ದೇಶಕ ಬಿ.ಕೆ. ಅರುಣ್ ಕುಮಾರ್ ಮಾತನಾಡಿ, ತಾ. ೨೪ಕ್ಕೆ ಮಡಿಕೇರಿ ತಾಲೂಕು ಮಟ್ಟದ ಕ್ರೀಡಾಕೂಟ, ವಿವಿಧ ದಿನಾಂಕದAದು ಇತರ ತಾಲೂಕು ಮಟ್ಟದ ಕ್ರೀಡಾಕೂಟ ನಡೆಯಲಿದೆ ಎಂದರು.

ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಅಧ್ಯಕ್ಷ ರಾಮಚಂದ್ರ ಮೂಗೂರು ಮಾತನಾಡಿ, ತಾಲೂಕು ಮಟ್ಟದಲ್ಲಿ ನಡೆಯಲಿರುವ ಚೆಸ್ ಹಾಗೂ ಕೇರಂ ಪಂದ್ಯಾಟದ ವಿಜೇತರು ಡಿ. ೨೯ ರಂದು ಮಡಿಕೇರಿಯ ಲಕ್ಷಿö್ಮÃನರಸಿಂಹ ಕಲ್ಯಾಣ ಮಂಟಪದಲ್ಲಿ ನಡೆಯುವ ಜಿಲ್ಲಾ ಮಟ್ಟದ ಪಂದ್ಯಾಟದಲ್ಲಿ ಆಟವಾಡಲಿದ್ದಾರೆ. ವಿವಿಧ ಕ್ರೀಡಾಕೂಟದ ವಿಜೇತರಿಗೂ ಬಹುಮಾನ ವಿತರಿಸಲಾಗುವುದು. ಇದೇ ಸಂದರ್ಭ ಸಾಧಕರಿಗೆ ಸನ್ಮಾನ ಹಾಗೂ ಎಸ್.ಎಸ್.ಎಲ್.ಸಿ., ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಹಾಗೂ ಇಂಜಿನಿಯರಿAಗ್ ಶಿಕ್ಷಣದಲ್ಲಿ ಅತೀ ಹೆಚ್ಚು ಅಂಕಗಳಿಸಿದವರಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ವಿವರಿಸಿದರು.

ಗೋಷ್ಠಿಯಲ್ಲಿ ಕುಶಾಲನಗರ ತಾಲೂಕು ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಜಶೇಖರ್, ಕ್ರೀಡಾ ಸಂಚಾಲಕಿ ಲಲಿತಾ ರಾಘವನ್ ಹಾಜರಿದ್ದರು.