ಮಡಿಕೇರಿ, ನ. ೧೩: ಬಿರ್ಸಾ ಮುಂಡಾ ಅವರ ೧೫೦ನೇ ಜಯಂತಿಯ ಪ್ರಯುಕ್ತ ಜನಜಾತಿಯ ಗೌರವ ದಿವಸ ಕಾರ್ಯಕ್ರಮ ತಾ. ೧೫ ರಂದು ಜಮುಯಿ, ಬಿಹಾರ್‌ನಲ್ಲಿ ಆಯೋಜಿಸಿದ್ದು, ಈ ದಿನದಂದು ಕೊಡಗು ಜಿಲ್ಲೆಯ ತಿತಿಮತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಮರೂರು ತಿತಿಮತಿ ಇಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿತ್ತು. ಆದರೆ ಈ ಗ್ರಾ.ಪಂ. ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜನಜಾತಿಯ ಗೌರವ ದಿವಸ ಕಾರ್ಯಕ್ರಮ ತಾ. ೧೫ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಿಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಟ್ಟೂರು ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ ನಡೆಯಲಿದೆ ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಎಸ್. ಹೊನ್ನೇಗೌಡ ಅವರು ತಿಳಿಸಿದ್ದಾರೆ.