ಚೆಟ್ಟಳ್ಳಿ, ನ. ೧೩: ಕರ್ನಾಟಕ ರಾಜ್ಯ ಸಹಕಾರಿ ಮಹಾಮಂಡಲ ನಿಯಮಿತ ಬೆಂಗಳೂರು, ಕೊಡಗು ಜಿಲ್ಲಾ ಸಹಕಾರಿ ಯೂನಿಯನ್ ನಿಯಮಿತ ಮಡಿಕೇರಿ ಸಹಕಾರ ಇಲಾಖೆ ಕೊಡಗು ಜಿಲ್ಲೆ ಹಾಗೂ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ತಾ. ೧೪ರÀಂದು (ಇಂದು) ೭೧ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನೆ ಹಾಗೂ ಸಹಕಾರ ಸಚಿವಾಲಯದ ನೂತನ ಪ್ರಯತ್ನಗಳ ಮೂಲಕ ಸಹಕಾರ ಚಳುವಳಿಯನ್ನು ಬಲಪಡಿಸುವ ದಿನಾಚರಣೆ ಚೆಟ್ಟಳ್ಳಿಯ ಶ್ರೀ ನರೇಂದ್ರ ಮೋದಿ ಸಹಕಾರ ಭವನದಲ್ಲಿ ನಡೆಯಲಿದೆ.
ಪೂರ್ವಾಹ್ನ ೧೦.೩೦ ಗÀಂಟೆಗೆ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎ.ಕೆ. ಮನು ಮುತ್ತಪ್ಪ ಉದ್ಘಾಟಿಸಲಿದ್ದಾರೆ.
ಚೆಟ್ಟಳ್ಳಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಬಿದ್ದಂಡ ಎ. ಅಚ್ಚಯ್ಯ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಎಂ.ಎನ್. ಉಮೇಶ್ ಉತ್ತಪ್ಪ, ಹಿರಿಯ ಸಹಕಾರಿಗಳಿಗೆ ಸನ್ಮಾನ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಹಕರ ಯೂನಿಯನ್ ಉಪಾಧ್ಯಕ್ಷ ಪಿ.ಸಿ. ಮನು ರಾಮಚಂದ್ರ, ನಿರ್ದೇಶಕ ಬಿ.ಎ. ರಮೇಶ್ ಚಂಗಪ್ಪ, ರವಿ ಬಸಪ್ಪ, ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
ಕೆ.ಐ.ಸಿ.ಎಂ. ಮಡಿಕೇರಿಯ ಪಾಂಶುಪಾಲೆ ಡಾ.ಆರ್.ಎಸ್. ರೇಣುಕಾ ದಿನದ ಮಹತ್ವದ ಕುರಿತು ಮಾತನಾಡಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ಚೆಟ್ಟಳ್ಳಿ ಸಹಕಾರ ಸಂಘದಲ್ಲಿ ಸೇವೆ ಸಲ್ಲಿಸಿದ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ನಿರ್ದೇಶಕರುಗಳನ್ನು ಸನ್ಮಾನಿಸಲಾಗುತ್ತದೆ.