ಮಡಿಕೇರಿ, ನ. ೧೪: ನ್ಯಾಷನಲ್ ಮೆಡಿಕೋಸ್ ಆರ್ಗನೈಸೇಶನ್ ದಕ್ಷಿಣ ಪ್ರಾಂತ, ಮಡಿಕೇರಿ ವಿಭಾಗ ಮತ್ತು ಮಡಿಕೇರಿ ಸೇವಾ ಭಾರತಿ ಸಂಯುಕ್ತಾಶ್ರಯದಲ್ಲಿ ಶ್ರೀ ಆದಿಶಕ್ತಿ ವಿನಾಯಕ ಸೇವಾ ಸಮಿತಿಯ ಸಹಕಾರದೊಂದಿಗೆ ತಾ.೧೭ರಂದು ಉಡೋತ್ಮೊಟ್ಟೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಅಂದು ಬೆಳಿಗ್ಗೆ ೯.೩೦ ಗಂಟೆಯಿAದ ಮಧ್ಯಾಹ್ನ ೧ ಗಂಟೆಯವರೆಗೆ ಉಡೋತ್ ಮೊಟ್ಟೆ ಆಟದ ಮೈದಾನದಲ್ಲಿ ನಡೆಯಲಿದೆ. ಅವಶ್ಯಕತೆ ಇದ್ದವರಿಗೆ ಉಚಿತ ಔಷಧಿಯನ್ನು ವಿತರಿಸಲಾಗುತ್ತದೆ. ಆಯುಷ್ಮಾನ್ ಕಾರ್ಡ್ ಮಾಡಿಕೊಡಲಾಗುವುದು. ಆಯುಷ್ಮಾನ್ ಕಾರ್ಡ್ ಅಗತ್ಯ ಇರುವವರು ಬಿಪಿಎಲ್ ಮತ್ತು ಆಧಾರ್ ಕಾರ್ಡ್ ತರಬೇಕೆಂದು ಪ್ರಕಟಣೆ ಕೋರಿದೆ.