ಮಡಿಕೇರಿ, ನ. ೧೪: ಕಾವೇರಿ ನದಿ ನೀರು ಹಂಚಿಕೆ ಪರಿಹಾರ ಕಂಡುಕೊಳ್ಳುವುದು. ರಾಷ್ಟçದ ಗಡಿ ಪ್ರದೇಶದಲ್ಲಿ ಹೆಚ್ಚಿನ ರಕ್ಷಣಾ ಕಾರ್ಯಕೈಗೊಂಡು ರಾಷ್ಟçಕ್ಕೆ ನುಸುಳಿ ಬರುವವರನ್ನು ತಡೆಯುವುದು, ಅಂತರರಾಷ್ಟಿçÃಯ ಸಂಬAಧವನ್ನು ಮತ್ತಷ್ಟು ಬಲಪಡಿಸುವುದು...

ಹೀಗೆ ಹಲವು ವಿಚಾರಗಳ ಕುರಿತು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆ ಕಾರ್ಯಕ್ರಮದಲ್ಲಿ ವಿರೋಧ ಪಕ್ಷದಿಂದ ಪ್ರಶ್ನೆಗಳ ಸುರಿಮಳೆ ಕೇಳಿಬಂತು.

ಇದಕ್ಕೆ ಆಡಳಿತ ಪಕ್ಷದಿಂದ ಸಮರ್ಪಕ ಉತ್ತರವೂ ದೊರೆಯಿತು. ಭಾರತ ‘ಅಲಿಪ್ತ ನೀತಿ’ ಹೊಂದಿದ್ದು, ಸದಾ ಶಾಂತಿಯನ್ನು ಬಯಸುತ್ತದೆ. ಆ ನಿಟ್ಟಿನಲ್ಲಿ ಅಂತರರಾಷ್ಟಿçÃಯ ಸಂಬAಧವನ್ನು ಬಲಪಡಿಸಲು ಸದಾ ಸನ್ನದ್ಧವಾಗಿದೆ ಎಂಬ ಉತ್ತರ ದೊರೆಯಿತು.

ಇಸ್ರೇಲ್ ಮತ್ತು ಹಮಾಸ್, ರಷ್ಯಾ ಮತ್ತು ಉಕ್ರೇನ್ ಯುದ್ಧವನ್ನು ಕೊನೆಗೊಳಿಸಲು ಆ ರಾಷ್ಟçದ ಮುಖ್ಯಸ್ಥರ ಜೊತೆ ಚರ್ಚಿಸಲಾಗಿದೆ. ಆ ನಿಟ್ಟಿನಲ್ಲಿ ಭಾರತ ಸದಾ ಶಾಂತಿಯನ್ನು ಬಯಸುತ್ತದೆ ಎಂದು ಆಡಳಿತ ಪಕ್ಷದಿಂದ ಉತ್ತರ ದೊರೆಯಿತು.

ನೋಟು ಅಮಾನ್ಯಕರಣ ಮಾಡಿದರೂ ಕಪ್ಪುಹಣ ಸಂಗ್ರಹ ಕಡಿಮೆಯಾಗಿಲ್ಲ. ಕಪ್ಪುಹಣ ಸಂಗ್ರಹ ನಿಯಂತ್ರಣಕ್ಕೆ ಇನ್ನಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬ ಒತ್ತಾಯ ವಿರೋಧ ಪಕ್ಷದಿಂದ ಕೇಳಿ ಬಂದಿತ್ತು.

ಏಕರೂಪ ನಾಗರಿಕ ಸಂಹಿತೆ ರಾಷ್ಟçದ ಅಭಿವೃದ್ಧಿಗೆ ಪೂರಕವೇ ಎಂಬ ಬಗ್ಗೆ ಸದನದಲ್ಲಿ ಚರ್ಚೆಯಾಗಬೇಕು ಎಂದು ವಿರೋಧ ಪಕ್ಷದವರು ಆಗ್ರಹಿಸಿದರು.

ಇದಕ್ಕೆ ಆಡಳಿತ ಪಕ್ಷದವರು ಸಮರ್ಪಕ ಉತ್ತರ ನೀಡಿದರು. ರಾಷ್ಟçದ ಅಭಿವೃದ್ಧಿಯಲ್ಲಿ ಎಲ್ಲರೂ ಕೈಜೋಡಿಸಬೇಕು. ಜೊತೆಗೆ ಸಮಾನವಾಗಿ ಬದುಕಬೇಕು. ಆ ನಿಟ್ಟಿನಲ್ಲಿ ಏಕರೂಪ ಕಾನೂನುಗಳು ಜಾರಿಯಾಗಬೇಕು, ಸಮಾಜ ನಿಂತ ನೀರಾಗದೆ ಹರಿಯುವ ನೀರಾಗಬೇಕು. ಆ ದಿಸೆಯಲ್ಲಿ ಬದಲಾವಣೆಯತ್ತ ಮುನ್ನೆಡೆಯಬೇಕು ಎಂಬ ಅಭಿಪಾಯ ಆಡಳಿತ ಪಕ್ಷದವರಿಂದ ಕೇಳಿಬಂತು.

ರಕ್ಷಣೆ, ಗೃಹ, ವಿದೇಶಾಂಗ ವ್ಯವಹಾರ, ವ್ಯಾಪಾರ ಮತ್ತು ವಾಣಿಜ್ಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಾಕಷ್ಟು ಸುಧಾರಣೆ ಮತ್ತು ಬದಲಾವಣೆಗೆ ಕ್ರಮವಹಿಸಲಾಗಿದೆ ಎಂಬ ಉತ್ತರ ಆಡಳಿತ ಪಕ್ಷದಿಂದ ದೊರೆಯಿತು. ಹಾಗೆಯೇ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಯೋಜನ ಬಗ್ಗೆಯೂ ಸಹ ಚರ್ಚೆಗಳು ನಡೆದವು.

ಮಡಿಕೇರಿಯ ಸರ್ಕಾರಿ ಪಿಯು ಕಾಲೇಜಿನ ಶಕುಂತಲಾ ಅವರು ಸಭಾಧ್ಯಕ್ಷತೆ ವಹಿಸಿದ್ದರು. ತಿತಿಮತಿ ಸರ್ಕಾರಿ ಪಿಯು ಕಾಲೇಜಿನ ವಿನಯ ಕುಮಾರ, ವೀರಾಜಪೇಟೆ ಸರ್ಕಾರಿ ಪಿಯು ಕಾಲೇಜಿನ ಅನ್ಸಿಕಾ, ಸೋಮವಾರಪೇಟೆಯ ಪಿಯು ಕಾಲೇಜಿನ ಅಮೃತ್, ಕುಶಾಲನಗರದ ಸರ್ಕಾರಿ ಪಿಯು ಕಾಲೇಜಿನ ಪ್ರೀತಂ, ಮೂರ್ನಾಡು ಪಿಯು ಕಾಲೇಜಿನ ಅನನ್ಯ ದೇವೇಂದ್ರ ನಾಯಕ್, ನಾಪೋಕ್ಲು ಸರ್ಕಾರಿ ಪಿಯು ಕಾಲೇಜಿನ ರಾಣಿ, ಕೂಡಿಗೆ ಸರ್ಕಾರಿ ಪಿಯು ಕಾಲೇಜಿನ ಡಿಂಪಲ್, ಸೋಮವಾರಪೇಟೆ ಪಿಯು ಕಾಲೇಜಿನ ಇಮ್ರಾನ್, ಮಡಿಕೇರಿ ಸರ್ಕಾರಿ ಪಿಯು ಕಾಲೇಜಿನ ಶ್ರೀನಿವಾಸ ಇತರರು ಆಡಳಿತ ಮತ್ತು ವಿರೋಧ ಪಕ್ಷದಲ್ಲಿ ಪಾಲ್ಗೊಂಡು ಗಮನ ಸೆಳೆದರು. ಸುಮಾರು ೯೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಯುವ ಸಂಸತ್‌ನಲ್ಲಿ ಪಾಲ್ಗೊಂಡಿದ್ದರು.

ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ, ಭಾರತವು ವಿಶ್ವದಲ್ಲಿ ಬಲಿಷ್ಠ ಪ್ರಜಾಪ್ರಭುತ್ವ ಹೊಂದಿದ್ದು, ಕೇಂದ್ರದಲ್ಲಿ ಲೋಕಸಭೆ ಮತ್ತು ರಾಜ್ಯಸಭೆ, ಹಾಗೆಯೇ ರಾಜ್ಯದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ತು ಒಳಗೊಂಡಿದ್ದು, ಪ್ರಜಾಪ್ರಭುತ್ವ ಮಹತ್ವವನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳುವಂತಾಗಬೇಕು ಎಂದರು.

ಮೂರ್ನಾಡು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಹಾಗೂ ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರ ಸಂಘದ ಅಧ್ಯಕ್ಷರಾದ ಪಿ.ಎಂ. ದೇವಕಿ ಮಾತನಾಡಿ, ರಾಷ್ಟçದ ಅಭಿವೃದ್ಧಿಯಲ್ಲಿ ಪ್ರಜಾಪ್ರಭುತ್ವದ ಪಾತ್ರ ಹೆಚ್ಚಿನದ್ದಾಗಿದೆ. ಆ ನಿಟ್ಟಿನಲ್ಲಿ ರಾಜಕೀಯ ವಿಜ್ಞಾನವನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಜೊತೆಗೆ ಉತ್ತಮ ನಾಯಕತ್ವö ಬೆಳೆಸಿಕೊಳ್ಳುವಂತಾಗಬೇಕು ಎಂದು ಹೇಳಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಕೆ. ಮಂಜುಳಾ ಮಾತನಾಡಿ, ವಿದ್ಯಾರ್ಥಿಗಳಲ್ಲಿ ರಾಜ್ಯ ಮತ್ತು ರಾಷ್ಟçದ ಬಗ್ಗೆ ಅರಿವು ಇರಬೇಕು. ಕೃಷಿ, ಆರೋಗ್ಯ, ಶಿಕ್ಷಣ, ರಕ್ಷಣೆ, ವಿದೇಶಾಂಗ ವ್ಯವಹಾರ ಹೀಗೆ ಪ್ರತಿಯೊಂದರ ಬಗ್ಗೆಯೂ ಅರಿವು ಇರಬೇಕು ಎಂದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಆರ್. ವಿಜಯ್ ಮಾತನಾಡಿ, ಇಡೀ ವಿಶ್ವದಲ್ಲಿ ಮಾದರಿ ಪ್ರಜಾಪ್ರಭುತ್ವವನ್ನು ಈ ರಾಷ್ಟç ಹೊಂದಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಮಹತ್ವವನ್ನು ತಿಳಿದುಕೊಳ್ಳುವಂತಾಗಬೇಕು ಎಂದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತç ವಿಭಾಗದ ಉಪನ್ಯಾಸಕ ಚಿದಾನಂದ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಸಂಸತ್ತಿನ ಕಾರ್ಯ ಕಲಾಪಗಳ ಬಗ್ಗೆ ಮಾಹಿತಿ ನೀಡಿ, ಸಭಾಧ್ಯಕ್ಷರ ಕಾರ್ಯ ನಿರ್ವಹಣೆ, ಪ್ರಶ್ನೋತ್ತರ ವೇಳೆ, ಶೂನ್ಯ ವೇಳೆ, ಗಮನ ಸೆಳೆಯುವ ಸೂಚನೆಗಳು, ಶಾಸನ ರಚನೆ ಹಾಗೂ ವಿಧೇಯಕಗಳ ಮಂಡನೆ ಮತ್ತಿತರ ವಿಚಾರಗಳ ಕುರಿತು ವಿವರಿಸಿದರು.

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರಾ ಮೈನಾ, ಸಂತ ಮೈಕಲರ ಶಾಲೆಯ ಪ್ರಾಂಶುಪಾಲ ಸುಮಂತ್ ಕೆ.ಎಸ್., ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಉದಯ್ ಕುಮಾರ್ ಇತರರು ಇದ್ದರು.