ಕೂಡಿಗೆ, ನ. ೧೪: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ೨೦೨೩-೨೪ನೇ ಸಾಲಿನ ಮುಂದುವರಿದ ಮೊದಲ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾ ಪ್ರಕಾಶ್ ಅಧ್ಯಕ್ಷತೆಯಲ್ಲಿ ಸಿದ್ದಲಿಂಗಪುರದ ಸಮುದಾಯ ಭವನ ಸಭಾಂಗಣದಲ್ಲಿ ನಡೆಯಿತು.
ಕಳೆದ ಸಾಲಿನ ಗ್ರಾಮ ಸಭೆಯ ವರದಿಯನ್ನು ವಾಚಿಸಿದ ನಂತರ, ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅನೇಕ ಗ್ರಾಮಗಳಲ್ಲಿ ಜಲಜೀವನ್ ಕುಡಿಯುವ ನೀರಿನ ಸರಬರಾಜು ಯೋಜನೆಯ ಕಾಮಗಾರಿಯು ಸಮರ್ಪಕವಾಗಿ ನಡೆದಿಲ್ಲ.
ಅಲ್ಲದೇ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ ಇದರಿಂದಾಗಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ ಇದರ ಬಗ್ಗೆ ಸವಿಸ್ತಾರವಾದ ವರದಿಯನ್ನು ನೀಡುವಂತೆ ಗ್ರಾಮಸ್ಥರಾದ ಟಿ.ಕೆ. ಪಾಂಡುರAಗ, ಪಿ.ಡಿ. ರವಿ ಮೂರ್ತಿ ಒತ್ತಾಯ ಮಾಡಿದರು.
ಇದಕ್ಕೆ ಗ್ರಾಮಾಂತರ ಕುಡಿಯುವ ನೀರು ಸರಬರಾಜು ಇಲಾಖೆಯ ಇಂಜಿನಿಯರ್ ವೀರೇಂದ್ರ ಕುಮಾರ್ ಅವರು ಯೋಜನೆಯ ಬಗ್ಗೆ, ಮತ್ತು ಮುಂದಿನ ದಿನಗಳಲ್ಲಿ ಆಗಬೇಕಾಗಿರುವ ವಿಷಯಗಳ ಬಗ್ಗೆ ಸಮರ್ಪಕವಾಗಿ ಸಭೆಗೆ ತಿಳಿಸಿದರು.
ಸಭೆಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ, ಆನೆ ಕಂದಕಗಳು ಸಮರ್ಪಕವಾಗಿ ಇಲ್ಲದ ಕಾರಣದಿಂದಾಗಿ ಕಾಡಾನೆಗಳು ಹಾವಳಿ ಬಗ್ಗೆ, ಕಳೆದ ಅನೇಕ ಗ್ರಾಮ ಸಭೆಗಳಲ್ಲಿ ವಸತಿ ರಹಿತರಿಗೆ ಕಾಯ್ದಿರಿಸಿದ ಜಾಗದಲ್ಲಿ ವಸತಿ ಸೌಕರ್ಯ ವ್ಯವಸ್ಥೆಗೆ ಅನುಕೂಲ ಕಲ್ಪಿಸುವಂತೆ ಮನವಿ, ಸಭೆಯಲ್ಲಿ ಹಾಜರಿದ್ದ ಗ್ರಾಮಸ್ಥರಾದ ಪಿ.ಡಿ. ರವಿ, ಜಗದೀಶ್, ಕೃಷ್ಣ ಗೌಡ, ರಾಮಕೃಷ್ಣ, ಮಹದೇವ, ಸುದೇಶ್, ಮೂರ್ತಿ, ಸೇರಿದಂತೆ ಹಲವಾರು ಮಂದಿ ಸಭೆಯಲ್ಲಿ ಹಾಜರಿದ್ದು ಸಮಗ್ರ ಚರ್ಚೆಗಳನ್ನು ನಡೆಸಿದರು. ಸಭೆಯಲ್ಲಿ ಹಾಜರಿದ್ದ ಹಲವು ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಸವಲತ್ತುಗಳ ಬಗ್ಗೆ, ಸದುಪಯೋಗ ಪಡಿಸಿಕೊಳ್ಳಲು ಅನುಸರಿಸಬೇಕಾದ ಮಾಹಿತಿಯನ್ನು ಒದಗಿಸಿದರು.
ನೋಡಲ್ ಅಧಿಕಾರಿಯಾಗಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಪಿ.ವಿ. ಶ್ರೀನಿವಾಸ್ ವಹಿಸಿದರು. ಸಭೆಯಲ್ಲಿ ಪಂಚಾಯಿತಿ ಸದಸ್ಯರಾದ ಶಿವಕುಮಾರ್, ದೇವರಾಜ್, ಪ್ರಕಾಶ್, ಯಶೋದ್ ಸಾವಿತ್ರಿ, ನಿಂಗಜಮ್ಮ, ಮಹದೇವ್, ಕೆ.ಡಿ.ಪಿ. ಸದಸ್ಯ ಜಗದೀಶ್, ಅಕ್ರಮ ಸಕ್ರಮ ಸಮಿತಿ ಸದಸ್ಯ ಸಂಜೀವಯ್ಯ, ಸೇರಿದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೂರಾರು ಗ್ರಾಮಸ್ಥರು, ಅಭಿವೃದ್ಧಿ ಅಧಿಕಾರಿ ಶ್ಯಾಮ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ವರ್ಗದವರು ಹಾಜರಿದ್ದರು.