ಕುಶಾಲನಗರ, ನ. ೧೪: ಕುಶಾಲನಗರ ಸಮೀಪದ ಕೊಪ್ಪ ಗ್ರಾಮದಲ್ಲಿ ದಂಪತಿ ಆತ್ಮಹತ್ಯೆಗೆ ಶರಣಾದ ಪ್ರಕರಣದ ಹಿನ್ನೆಲೆಯಲ್ಲಿ ಕುಶಾಲನಗರ ವ್ಯಾಪ್ತಿಯ ೧೨ ಮಂದಿ ರಿಯಲ್ ಎಸ್ಟೇಟ್ ಉದ್ಯಮಿಗಳ ಮೇಲೆ ಮೊಕದ್ದಮೆ ದಾಖಲಾಗಿದೆ.
ಬುಧವಾರ ರಾತ್ರಿ ಸುರೇಶ್ ಮತ್ತು ಆತನ ಪತ್ನಿ ಪಲ್ಲವಿ ಬೈಲುಕುಪ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೇಣಿಗೆ ಶರಣಾಗಿದ್ದರು.
ತಮ್ಮ ಸಾವಿಗೆ ಕಾರಣಕರ್ತರಾದ ೧೨ ಮಂದಿ ಉದ್ಯಮಿಗಳ ಹೆಸರನ್ನು ಡೆತ್ ನೋಟ್‌ನಲ್ಲಿ ಬರೆದಿಟ್ಟು ಇವರೇ ತಮ್ಮ ಸಾವಿಗೆ ಕಾರಣಕರ್ತರಾಗಿದ್ದಾರೆ. ಇವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಬರೆಯಲಾಗಿತ್ತು. ಈ ಸಂಬAಧ ಬೈಲುಕುಪ್ಪೆ ಪೊಲೀಸ್ ಠಾಣೆಯಲ್ಲಿ ೧೨ ಮಂದಿ ಮೇಲೆ ದೂರು ದಾಖಲಾಗಿದೆ.
ಮೃತ ದಂಪತಿ ಮರಣೋತ್ತರ ಪರೀಕ್ಷೆ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದ್ದು, ಈ ಸಂದರ್ಭ ಮೃತರ ಸಂಬAಧಿಕರು, ಸ್ನೇಹಿತರು ಹಾಗೂ ಗ್ರಾಮದ ಜನರು ಕುಶಾಲನಗರ ಆರೋಗ್ಯ ಕೇಂದ್ರದ ಎದುರುಗಡೆ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು.
ದಂಪತಿ ಆತ್ಮಹತ್ಯೆಗೆ ಕಾರಣಕರ್ತರಾದ ೧೨ ಮಂದಿಯನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮೃತ ಸುರೇಶ್ ಕುಶಾಲನಗರ ಹಾರಂಗಿ ರಸ್ತೆಯ ಕಾಲೇಜು ಬಳಿ ಬಡಾವಣೆ ಒಂದನ್ನು ಅಭಿವೃದ್ಧಿಗೊಳಿಸಿ ಮಾರಾಟ ಮಾಡಲು ಸಿದ್ಧಗೊಂಡಿದ್ದ ಸಂದರ್ಭ ಕೆಲವು ಉದ್ಯಮಿಗಳು ತನ್ನ ವ್ಯವಹಾರಕ್ಕೆ ಅಡ್ಡಿ ಉಂಟು ಮಾಡಿ ತನಗೆ ಲಕ್ಷಾಂತರ ರೂಪಾಯಿಗಳ ನಷ್ಟಕ್ಕೆ ಕಾರಣರಾಗಿದ್ದಾರೆ ಎಂದು ಡೆತ್ ನೋಟ್‌ನಲ್ಲಿ ಬರೆಯಲಾಗಿದೆ. ಜಾಗದ ಮಾಲೀಕ ಮತ್ತು ಇತರ ೧೧ ಜನ ರಿಯಲ್ ಎಸ್ಟೇಟ್ ಉದ್ಯಮಿಗಳು ತನ್ನ ಸಾವಿಗೆ ಕಾರಣಕರ್ತರಾಗಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಬೈಲುಕುಪ್ಪೆ ಪೊಲೀಸರು ಪ್ರಕರಣಕ್ಕೆ ಸಂಬAಧಿಸಿದAತೆ ಮುಂದಿನ ಕ್ರಮ ಕೈಗೊಂಡಿದ್ದಾರೆ.