ಶನಿವಾರಸಂತೆ, ನ. ೧೪: ಸಮೀಪದ ಕೊಡ್ಲಿಪೇಟೆಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.

ದಿನಾಚರಣೆ ಅಂಗವಾಗಿ ಪೋಷಕರಿಗೆ ಆಟೋಟ ಹಾಗೂ ಕ್ವಿಜ್ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ನಂತರ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗೂ ಎಲ್.ಕೆ.ಜಿ. ಮತ್ತು ಯು.ಕೆ.ಜಿ. ಉಸ್ತುವಾರಿ ಸಮಿತಿ ಕಾರ್ಯದರ್ಶಿ ಡಿ.ಎನ್. ವಸಂತ್ ಮಾತನಾಡಿ, ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಒತ್ತಡ ಹಾಕದೇ ಹೊರಹೊಮ್ಮಿಸಬೇಕು. ಪ್ರೋತ್ಸಾಹ ನೀಡುವ ಮೂಲಕ ಸಮಾಜಕ್ಕೆ ಉತ್ತಮ ಪ್ರಜೆಗಳ ಕೊಡುಗೆ ನೀಡಬೇಕೆಂದರು.

ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದ ಆರ್‌ಸಿಎಚ್‌ಓ ಅನಿತಾ ಮಾತನಾಡಿ, ಮಕ್ಕಳ ಆರೋಗ್ಯ ರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು.

ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದ ಪೋಷಕರಿಗೆ ಬಹುಮಾನ ವಿತರಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಮಮತಾ ರಮೇಶ್, ನೂರ್‌ಜಹಾನ್, ಶ್ವೇತಾ, ಸೋನಾಕ್ಷಿ, ಮಲ್ಲಿಗೆ, ಯಶೋಧ, ಎಲ್‌ಕೆಜಿ/ಯುಕೆಜಿ ಸಮಿತಿ ನಿರ್ದೇಶಕಿ ಕವಿತಾ, ಸಿಬ್ಬಂದಿ ಶೋಭಾ, ಸಹಶಿಕ್ಷಕರು, ಪೋಷಕರು ಹಾಜರಿದ್ದರು. ಮುಖ್ಯಶಿಕ್ಷಕಿ ಆಶಾ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿಯರಾದ ಶ್ವೇತಾ ಸ್ವಾಗತಿಸಿ, ಬಲ್ಕಿಸ್ ವಂದಿಸಿದರು.