ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆ: ತಾ. ೨೦ ರಂದು ಮದ್ಯ ಮಾರಾಟ ಬಂದ್

ಬೆAಗಳೂರು, ನ. ೧೪: ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿರುವ ವೈನ್ ಮರ್ಚೆಂಟ್ ಅಸೋಸಿಯೇಷನ್‌ಗಳ ಒಕ್ಕೂಟ ತಾ. ೨೦ ರಂದು ರಾಜ್ಯದಲ್ಲಿ ಮದ್ಯ ಮಾರಾಟ ಮಾಡುವುದಿಲ್ಲ ಎಂದು ಹೇಳಿದೆ. ಭ್ರಷ್ಟಾಚಾರ ಆರೋಪ ಹಾಗೂ ಸರ್ಕಾರದ ವಿರುದ್ಧ ಒಕ್ಕೂಟದ ಬೇಡಿಕೆಗಳ ನಿರ್ಲಕ್ಷö್ಯದ ಆರೋಪ ಹೊರಿಸಿರುವ ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದೆ. ಸರ್ಕಾರ ನಮ್ಮ ಬೇಡಿಕೆಗಳಿಗೆ ಕಿವಿಗೊಡದ ಕಾರಣ ತಾ. ೨೦ ರಂದು ಅಂಗಡಿ ಮುಂಗಟ್ಟು ಬಂದ್ ಮಾಡಲು ನಿರ್ಧರಿಸಿದ್ದು, ಇದರಿಂದ ರಾಜ್ಯದ ಬೊಕ್ಕಸಕ್ಕೆ ಸುಮಾರು ೧೨೦ ಕೋಟಿ ರೂಪಾಯಿ ನಷ್ಟವಾಗಲಿದೆ ಎಂದು ಪ್ರಧಾನ ಕಾರ್ಯದರ್ಶಿ ಬಿ. ಗೋವಿಂದರಾಜ ಹೆಗಡೆ ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಹೆಗ್ಡೆ, ಅಬಕಾರಿ ಇಲಾಖೆಯಲ್ಲಿನ ಮಿತಿಮೀರಿದ ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆ ನಡೆಸಲು ತಾ. ೨೦ ರಂದು ಕರ್ನಾಟಕದಲ್ಲಿ ಮದ್ಯ ಮಾರಾಟವನ್ನು ನಿಲ್ಲಿಸಲಾಗುತ್ತದೆ. ಅದೇ ದಿನ ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಅಬಕಾರಿ ಇಲಾಖೆಯನ್ನು ಹಣಕಾಸು ಇಲಾಖೆಯೊಂದಿಗೆ ವಿಲೀನಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಯಾವುದೇ ಸಂಘದ ಸದಸ್ಯರು ಭ್ರಷ್ಟಾಚಾರದ ಬಗ್ಗೆ ಕರ್ನಾಟಕ ರಾಜ್ಯಪಾಲರಿಗೆ ಪತ್ರ ಬರೆದಿಲ್ಲ ಎಂದು ಹೆಗ್ಡೆ ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ. ಈ ಪತ್ರವನ್ನು ಆರ್‌ಟಿಐ ಕಾರ್ಯಕರ್ತರೊಬ್ಬರು ಬರೆದಿದ್ದಾರೆ. ಅಬಕಾರಿ ಇಲಾಖೆಯಲ್ಲಿನ ೭೦೦ ಕೋಟಿ ರೂಪಾಯಿ ಭ್ರಷ್ಟಾಚಾರದ ಬಗ್ಗೆ ಸಂಘ ಉಲ್ಲೇಖಿಸಿಲ್ಲ, ಇದನ್ನು ಮಹಾರಾಷ್ಟç ಚುನಾವಣಾ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉಲ್ಲೇಖಿಸಿದ್ದಾರೆ ಮತ್ತು ಇದು ನಿಜವಲ್ಲ ಎಂದು ಅವರು ಹೇಳಿದರು.

ಗ್ರಾಮೀಣ ಭಾಗದ ಮಹಿಳೆಯರು ಅಭಿವೃದ್ಧಿಗೆ ಕಾರಣ

ಧರ್ಮಸ್ಥಳ, ನ. ೧೪: ಗ್ರಾಮೀಣ ಭಾಗದ ಮಹಿಳೆಯರು ತಮ್ಮ ಗ್ರಾಮದ ಅಭಿವೃದ್ಧಿಗೆ ಕಾರಣರಾಗುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಕನಸು ಕೂಡ ಇದೇ ಆಗಿದೆ. ಹೆಣ್ಮಕ್ಕಳು ನಾಯಕತ್ವ ವಹಿಸಿದರೆ ಏನಾಗುತ್ತೆ ಅನ್ನುವುದಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉತ್ತಮ ಉದಾಹರಣೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಎಸ್‌ಕೆಡಿಆರ್‌ಡಿಪಿ) ಅಡಿಯಲ್ಲಿ ಸ್ವ-ಸಹಾಯ ಗುಂಪು (ಎಸ್‌ಹೆಚ್‌ಜಿ) ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಿರ್ಮಲಾ ಸೀತಾರಾಮನ್ ಅವರು, ಈ ಸಂಸ್ಥೆ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯಲ್ಲಿ ನಾಲ್ಕು ದಶಕಗಳಿಂದ ಸೇವೆ ಸಲ್ಲಿಸುತ್ತಿದೆ ಎಂದರು. ಇಂದು, ಕಲ್ಯಾಣ ಕಾರ್ಯಕ್ರಮಗಳು ನಡೆಯುತ್ತಿವೆ. ಈ ರೀತಿಯ ಕಾರ್ಯಕ್ರಮಗಳಿಂದ ಮಹಿಳೆಯರು ಸ್ವಯಂ ಗೌರವದಿಂದ ದುಡಿಯುತ್ತಿದ್ದಾರೆ. ನೀವು ಕೊಡುವ ಹಣ ಲಾಭದ ರೂಪದಲ್ಲಿ ಗೌರವಪೂರ್ವಕವಾಗಿ ನಿಮಗೆ ವಾಪಸ್ ಬಂದಿದೆ. ಗ್ರಾಮೀಣ ಅಭಿವೃದ್ಧಿಗೆ ಜನರ ಹಣ ಬಳಕೆಯಾಗುತ್ತಿದೆ. ಕೋವಿಡ್ ಸಮಯದಲ್ಲಿ ಆತ್ಮನಿರ್ಭರ್ ಭಾರತ್ ಘೋಷಣೆ ಮಾಡಿದ ಬಳಿಕ ೫ ಮಿನಿ ಬಜೆಟ್‌ಗಳನ್ನು ರಾಷ್ಟçಕ್ಕೆ ಅರ್ಪಿಸಿದ್ದೇವೆ. ಗ್ರಾಮೀಣ ಭಾಗದ ಮಹಿಳೆಯರು ತಮ್ಮ ಗ್ರಾಮದ ಅಭಿವೃದ್ಧಿಗೆ ಕಾರಣರಾಗುತ್ತಿದ್ದಾರೆ ಎಂದರು. ಹೆಣ್ಮಕ್ಕಳು ನಾಯಕತ್ವ ವಹಿಸಿದರೆ ಏನಾಗುತ್ತೆ ಅನ್ನುವುದಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉತ್ತಮ ಉದಾಹರಣೆಯಾಗಿದೆ. ಧರ್ಮಸ್ಥಳ ಇದು ಗ್ರಾಮೀಣ ಯೋಜನೆಯ ಪ್ರಯೋಗಾಲಯ ಎಂದರೆ ತಪ್ಪಾಗಲಾರದು ಎಂದು ಸಂಘವನ್ನು ಶ್ಲಾಘಿಸಿದರು.

ಮುಡಾ ಮಾಜಿ ಅಧ್ಯಕ್ಷ ಮರಿಗೌಡ ಇಡಿ ವಿಚಾರಣೆಗೆ ಹಾಜರು

ಬೆಂಗಳೂರು, ನ. ೧೪: ಮುಡಾ ನಿವೇಶನ ಹಂಚಿಕೆ ಹಗರಣಕ್ಕೆ ಸಂಬAಧಿಸಿದAತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೆ. ಮರಿಗೌಡ ಇಂದು ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ವಿಚಾರಣೆಗೆ ಹಾಜರಾದರು. ಶಾಂತಿನಗರದಲ್ಲಿರುವ ಕೇಂದ್ರೀಯ ಸಂಸ್ಥೆಯ ಕಚೇರಿಗೆ ಆಗಮಿಸಿದ ಮರಿಗೌಡ ವಿಚಾರಣೆ ಎದುರಿಸಿದರು. ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ಐಎಎಸ್ ಅಧಿಕಾರಿ, ರಾಯಚೂರು ಕಾಂಗ್ರೆಸ್ ಸಂಸದ ಜಿ. ಕುಮಾರ್ ನಾಯ್ಕ್ ಮತ್ತು ಸಿದ್ದರಾಮಯ್ಯ ಅವರ ಆಪ್ತ ಸಹಾಯಕ ಸಿ.ಟಿ. ಕುಮಾರ್ ಅವರನ್ನು ಇಡಿ ಅಧಿಕಾರಿಗಳು ಹಲವು ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು. ಮರೀಗೌಡ ವೈಯಕ್ತಿಕ ಕಾರಣ ನೀಡಿ ಮುಡಾ ಅಧ್ಯಕ್ಷ ಸ್ಥಾನಕ್ಕೆ ಕಳೆದ ತಿಂಗಳು ರಾಜೀನಾಮೆ ನೀಡಿದ್ದರು. ಕೆಸರೆ ಗ್ರಾಮದಲ್ಲಿ ಪಾರ್ವತಿ ಅವರ ಕೃಷಿ ಭೂಮಿ ೩ ಎಕರೆ ೧೬ ಗುಂಟೆ ಸ್ವಾಧೀನಪಡಿಸಿಕೊಂಡು ಅದಕ್ಕೆ ಪ್ರತಿಯಾಗಿ ೧೪ ಸೈಟುಗಳನ್ನು ಹಂಚಿಕೆ ಮಾಡಿರುವ ಪ್ರಕರಣ ಸಂಬAಧ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಬಿಎಂ, ಅವರ ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಮತ್ತು ಇತರರ ವಿಚಾರಣೆ ನಡೆಸಿತ್ತು. ಈ ಹಿಂದೆ, ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ದೂರಿನ ಮೇರೆಗೆ ಮುಡಾ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆಯ ಕುರಿತ ತನಿಖೆ ವೇಳೆ ಇಡಿ ಮೈಸೂರಿನ ಹಲವು ಸ್ಥಳಗಳಲ್ಲಿ ದಾಳಿ ನಡೆಸಿತ್ತು.

ಕೋವಿಡ್ ಹಗರಣದ ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು, ನ. ೧೪: ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದಿದೆ ಎನ್ನಲಾದ ಸಾವಿರಾರು ಕೋಟಿ ರೂಪಾಯಿ ಕೋವಿಡ್ ಹಗರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಲು ರಾಜ್ಯ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಅವರು, ಕೋವಿಡ್ ಹಗರಣ ಸಂಬAಧ ರಾಜ್ಯ ಸರ್ಕಾರ ನೇಮಿಸಿದ್ದ ನ್ಯಾ. ಮೈಕಲ್ ಡಿಕುನ್ಹಾ ಆಯೋಗವು ತನ್ನ ಮಧ್ಯಂತರ ವರದಿ ನೀಡಿದ್ದು, ಈ ಕುರಿತು ತನಿಖೆಗೆ ಎಸ್‌ಐಟಿ ರಚನೆ ಮಾಡಲಾಗುವುದು. ವರದಿ ಆಧರಿಸಿ ಎಸ್‌ಐಟಿ ತನಿಖೆ ಆಗಲಿದೆ ಎಂದರು. ಕೋವಿಡ್ ವೇಳೆ ಕಿಟ್, ಔಷಧಿ ಖರೀದಿ ವೇಳೆ ಅಕ್ರಮ ನಡೆದಿದೆ. ಕೋವಿಡ್ ಹಗರಣ ಸಂಬAಧ ಹಲವು ದೂರುಗಳು ದಾಖಲಾಗಿದ್ದವು. ಈ ಕುರಿತು ಸಮಗ್ರ ತನಿಖೆಗೆ ಎಸ್‌ಐಟಿ ರಚನೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಅಗತ್ಯ ಬಿದ್ದರೆ ಎಫ್‌ಐಆರ್ ದಾಖಲಾಗುತ್ತೆ, ಚಾರ್ಜ್ಶೀಟ್ ಕೂಡ ಹಾಕುತ್ತೇವೆ. ಯಾರ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ಎಸ್‌ಐಟಿ ನಿರ್ಧರಿಸುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದರು. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕೊವಿಡ್ ಹಗರಣದ ವಿಷಯ ಪ್ರಸ್ತಾಪವಾಗುತ್ತಿದ್ದಂತೆಯೇ ಯಡಿಯೂರಪ್ಪ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಸಚಿವರು ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.

ಕೊರೊನಾ ವೇಳೆ ಭಾರತದ ನೆರವು: ಪ್ರಧಾನಿ ಮೋದಿಗೆ ರಾಷ್ಟಿçÃಯ ಪ್ರಶಸ್ತಿ ಘೋಷಣೆ!

ನವದೆಹಲಿ, ನ. ೧೩: ಕೋವಿಡ್-೧೯ ಸಾಂಕ್ರಾಮಿಕ ಸಮಯದಲ್ಲಿ ತಮ್ಮ ದೇಶಕ್ಕೆ ಸಹಾಯ ಮಾಡಿದ್ದಕ್ಕಾಗಿ ಮತ್ತು ಉಭಯ ದೇಶಗಳ ನಡುವಿನ ಸಂಬAಧವನ್ನು ಬಲಪಡಿಸಲು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗೌರವಿಸಲು ಡೊಮಿನಿಕಾ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಡೊಮಿನಿಕಾದ ಅತ್ಯುನ್ನತ ರಾಷ್ಟಿçÃಯ ಪ್ರಶಸ್ತಿಯಾದ ‘ಡೊಮಿನಿಕಾ ಅವಾರ್ಡ್ ಆಫ್ ಆನರ್' ಅನ್ನು ಪ್ರಧಾನಿ ಮೋದಿಯವರಿಗೆ ನೀಡಲಿದೆ. ೨೦೨೧ರ ಫೆಬ್ರವರಿಯಲ್ಲಿ ಕೋವಿಡ್-೧೯ ಉತ್ತುಂಗದಲ್ಲಿದ್ದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತ ಸರ್ಕಾರ ಡೊಮಿನಿಕಾಗೆ ೭೦,೦೦೦ ಡೋಸ್ ಅಸ್ಟಾçಜೆನೆಕಾ ಲಸಿಕೆಯನ್ನು ಕಳುಹಿಸಿತ್ತು. ಈ ಲಸಿಕೆ ಪೂರೈಕೆಯನ್ನು ಭಾರತದ ‘ಲಸಿಕೆ ಮೈತ್ರಿ' ನೀತಿಯ ಅಡಿಯಲ್ಲಿ ಮಾಡಿತ್ತು. ಈ ಮೂಲಕ ಅಭಿವೃದ್ಧಿಶೀಲ ರಾಷ್ಟçಗಳಿಗೆ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಸಹಾಯ ಮಾಡುವ ಗುರಿ ಭಾರತ ಹೊಂದಿತ್ತು. ಮುಂಬರುವ ಭಾರತ-ಅಂಖIಅಔಒ (ಕೆರಿಬಿಯನ್ ಸಮುದಾಯ) ಶೃಂಗಸಭೆಯಲ್ಲಿ ಡೊಮಿನಿಕನ್ ಅಧ್ಯಕ್ಷ ಸಿಲ್ವಾನಿ ಬರ್ಟನ್ ಪ್ರಧಾನಿ ಮೋದಿಯವರಿಗೆ ಗೌರವವನ್ನು ನೀಡಲಿದ್ದಾರೆ. ಈ ಶೃಂಗಸಭೆಯು ಗಯಾನಾದ ಜಾರ್ಜ್ಟೌನ್‌ನಲ್ಲಿ ನವೆಂಬರ್ ೧೯ ಮತ್ತು ೨೧ರ ನಡುವೆ ನಡೆಯಲಿದೆ. ಈ ಸಂದರ್ಭದಲ್ಲಿ, ಭಾರತ ಮತ್ತು ಕೆರಿಬಿಯನ್ ದೇಶಗಳ ನಡುವಿನ ಸಂಬAಧವನ್ನು ಮತ್ತಷ್ಟು ಬಲಪಡಿಸುವ ಬಗ್ಗೆ ಪರಿಗಣಿಸಲಾಗುವುದು.