ಮಡಿಕೇರಿ, ನ. ೧೪: ವಕ್ಫ್ ವಿಚಾರವನ್ನು ಬಿಜೆಪಿ ರಾಜಕೀಯ ಅಸ್ತçವಾಗಿ ಬಳಸಿಕೊಳ್ಳುತ್ತಿಲ್ಲ; ಬಡ ಕೃಷಿಕರಿಗೆ ಜನತೆಗೆ ತೊಂದರೆಯಾಗಬಾರದು ಎಂಬ ಕಾರಣಕ್ಕಾಗಿ ಬಿಜೆಪಿ ಹೋರಾಟ ಮಾಡುತ್ತಿದ್ದು, ಈ ಹೋರಾಟ ಮುಂದುವರಿಯಲಿದೆ. ಬಿಜೆಪಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಅವರು ನೀಡಿರುವ ಹೇಳಿಕೆಯಲ್ಲಿ ಯಾವುದೇ ಹುರಳಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಹೇಳಿದ್ದಾರೆ.
ನಗರದ ಪತ್ರಿಕಾಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ವಕ್ಫ್ ವಿಚಾರ ಸಂಬAಧ ಮುಖ್ಯಮಂತ್ರಿಗಳ ನಿರ್ದೇಶನದಂತೆ ಸಭೆ ನಡೆಸಿರುವುದಾಗಿ ಸಚಿವ ಜಮೀರ್ ಅಹ್ಮದ್ ಅವರು ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿಯೂ ಹಲವರಿಗೆ ಈ ಸಂಬAಧ ನೋಟಿಸ್ ಜಾರಿಯಾಗಿದೆ. ಇದರ ವಿರುದ್ಧ ನಾವೂ ಹೋರಾಟ ಮಾಡಿದ್ದೇವೆ. ಇದಕ್ಕೆ ಜನ ಬೆಂಬಲವೂ ದೊರೆತಿದೆ. ಇದನ್ನು ಸಹಿಸಲಾಗದೆ ಕಾಂಗ್ರೆಸ್ ಅಧ್ಯಕ್ಷರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ವಕ್ಫ್ ಆಸ್ತಿ ಕಬಳಿಕೆಯಾಗಿರುವ ಬಗ್ಗೆ ಅನ್ವರ್ ಮಾನಿಪ್ಪಾಡಿ ಅವರು ನೀಡಿದ್ದ ಸರ್ವೆ ವರದಿ ಅನ್ವಯ ಒತ್ತುವರಿದಾರರಿಂದ ವಕ್ಫ್ ಆಸ್ತಿಯನ್ನು ಬಿಡಿಸಿಕೊಳ್ಳಲು ನೋಟಿಸ್ ನೀಡಲಾಗಿತ್ತೆ ಹೊರತು ರೈತರಿಗೆ, ಬಡವರಿಗೆ, ಮಠ ಮಂದಿರಗಳಿಗೆ ನೋಟಿಸ್ ನೀಡಿರಲಿಲ್ಲ.
ಆದರೆ ಈಗಿನ ಕಾಂಗ್ರೆಸ್ ಸರ್ಕಾರ ಒಂದು ವರ್ಗವನ್ನು ಓಲೈಸಿಕೊಳ್ಳುವುದಕ್ಕಾಗಿ ಈ ರೀತಿ ಮಾಡುತ್ತಿದೆ. ವಕ್ಫ್ ನೋಟಿಸ್ ವಿಚಾರದಲ್ಲಿ ಅಧಿಕಾರಿಗಳಿಂದ ತಪ್ಪಾಗಿದೆ. ಈ ವಿಚಾರ ಸರ್ಕಾರಕ್ಕೆ ಗೊತ್ತಿರಲಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷರೆ ಹೇಳಿಕೆ ನೀಡಿದ್ದು, ಅಧಿಕಾರಿಗಳನ್ನು ಹಿಡಿತದಲ್ಲಿಟ್ಟುಕೊಳ್ಳಲಾಗದ ಈ ಸರ್ಕಾರ ರಾಜ್ಯಕ್ಕೆ ಅವಶ್ಯಕತೆಯಿದೆಯೆ ಎಂದು ಪ್ರಶ್ನಿಸಿದ ರವಿ ಕಾಳಪ್ಪ ಸಮರ್ಥ ಆಡಳಿತ ನಡೆಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದರು.
ಚರ್ಚೆಗೆ ಸಿದ್ಧರಿದ್ದೇವೆ
ಈ ಹಿಂದೆ ಸಂಸದರಾಗಿದ್ದ ಪ್ರತಾಪ್ ಸಿಂಹ ಅವರು ಏನೂ ಕೆಲಸ ಮಾಡಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ ಕಳೆದ ೨೫ ವರ್ಷಗಳ ಅವಧಿಯಲ್ಲಿ ಜಿಲ್ಲಾಧಿಕಾರಿ ಕಚೇರಿ, ಎಸ್ಪಿ ಕಚೇರಿ, ಟರ್ಫ್, ಮೆಡಿಕಲ್ ಕಾಲೇಜು ಸೇರಿದಂತೆ ಹಲವಾರು ಅಭಿವೃದ್ಧಿ ಕೆಲಸಗಳು ಬಿಜೆಪಿ ಜನಪ್ರತಿನಿಧಿಗಳಿಂದ ನಡೆದಿದೆ. ಈ ಸಂಬAಧ ಚರ್ಚೆಗೂ ನಾವು ಸಿದ್ಧರಿದ್ದೇವೆ ಎಂದು ರವಿ ಕಾಳಪ್ಪ ನುಡಿದರು. ಬಿಜೆಪಿ ವಿರುದ್ಧ ವೃಥಾ ಆರೋಪ ಮಾಡುವ ಕಾಂಗ್ರೆಸ್ ಮೊದಲು ಕೊಡಗಿನ ರಸ್ತೆಗಳ ಗುಂಡಿಮುಚ್ಚುವ ಕೆಲಸ ಮಾಡಲಿ; ಕಾವೇರಿ ಜಾತ್ರೆ ಸಂದರ್ಭ ಕಾವೇರಿ ಕ್ಷೇತ್ರಕ್ಕೆ ತೆರಳುವ ರಸ್ತೆಯನ್ನು ಕೂಡ ಕಾಂಗ್ರೆಸ್ನವರಿAದ ಸರಿಪಡಿಸಲಾಗಲಿಲ್ಲ ಎಂದು ಬಿಜೆಪಿ ಅಧ್ಯಕ್ಷರು ಕುಟುಕಿದರು.
ಕುಶಾಲನಗರದ ಮಹಿಳೆಯೊಬ್ಬರ ಜಾಗವನ್ನು ವಕ್ಫ್ ಆಸ್ತಿ ಎಂದು ಬೆದರಿಕೆಯೊಡಿದ್ದ ಪ್ರಕರಣದಲ್ಲಿ ಬಿಜೆಪಿಯ ಯಾವುದೇ ಕೈವಾಡವಿಲ್ಲ. ಈ ಬಗ್ಗೆ ತನಿಖೆ ನಡೆಯಲಿ ಸತ್ಯ ಹೊರ ಬೀಳಲಿ ಎಂದು ರವಿ ಕಾಳಪ್ಪ ನುಡಿದರು.
ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಕೆ. ಲೋಕೇಶ್ ಮಾತನಾಡಿ, ರಾಜ್ಯ ಸರ್ಕಾರ ವಕ್ಫ್ ವಿಚಾರದಲ್ಲಿ ನೋಟಿಸ್ ನೀಡಿರುವುದನ್ನು ಹಿಂಪಡೆದರಷ್ಟೆ ಸಾಲದು, ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ಸಿಎಂ ಅವರ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಅವರ ಮೂಲಕ ಕೇಂದ್ರ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಪ್ರಧಾನಿ ಅವರು ಮಂಡಿಸಲಿರುವ ವಕ್ಫ್ ತಿದ್ದುಪಡಿ ಕಾಯ್ದೆಗೆ ಬೆಂಬಲ ನೀಡುವಂತೆ ಸಲಹೆ ಕೊಡಿಸಲಿ ಎಂದರು.
ಮತ್ತೋರ್ವ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ ಮಾತನಾಡಿ, ಬಿಜೆಪಿ ಕೋಮು ಗಲಭೆ ಸೃಷ್ಟಿಸಲು ಮುಂದಾಗಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. ಆದರೆ, ಜಿಲ್ಲೆಯ ಸೋಮವಾರಪೇಟೆಯಲ್ಲಿ ಪಾಕ್ ಧ್ವಜ ಹಾರಿದ ಪ್ರಕರಣ, ಟಿಪ್ಪು ಜಯಂತಿಗಲಾಟೆ, ಪಾಲೂರು ಗಲಭೆಗಳ ಹಿಂದೆ ಇದ್ದದ್ದು ಕಾಂಗ್ರೆಸ್ ಸರ್ಕಾರವೇ ಹೊರತು ಬಿಜೆಪಿ ಅಲ್ಲ ಎಂದು ಹೇಳಿದರು. ವಿನಾಕಾರಣ ಬಿಜೆಪಿ ಮೇಲೆ ಗೂಬೆ ಕೂರಿಸುವ ಯತ್ನವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದರು. ಪ್ರತಾಪ್ಸಿಂಹ ಅವರಿಗೆ ಸೂಕ್ತ ಸ್ಥಾನಮಾನ ನೀಡುವುದಾಗಿ ಬಿಜೆಪಿ ರಾಜ್ಯ ಅಧ್ಯಕ್ಷರೆ ಹೇಳಿಕೆ ನೀಡಿದ್ದಾರೆ. ಪ್ರತಾಪ್ ಸಿಂಹ ಅವರನ್ನು ಪಕ್ಷ ನಿರ್ಲಕ್ಷಿಸಿದೆ ಎಂಬ ರಾಜ್ಯ ಆರೋಪ ಸುಳ್ಳು ಎಂದು ಮಹೇಶ್ ಜೈನಿ ಹೇಳಿದರು.
ಗೋಷ್ಠಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ನೆಲ್ಲಿರ ಚಲನ್, ವೀರಾಜಪೇಟೆ ತಾಲೂಕು ಮಂಡಲ ಅಧ್ಯಕ್ಷ ಸುವಿನ್ ಗಣಪತಿ, ಮಡಿಕೇರಿ ನಗರ ಅಧ್ಯಕ್ಷ ಉಮೇಶ್ ಸುಬ್ರಮಣಿ ಉಪಸ್ಥಿತರಿದ್ದರು.