ಮಡಿಕೇರಿ, ನ. ೧೪: ಕಾನೂನು ಸೇವಾ ಪ್ರಾಧಿಕಾರ ಎಂದರೆ ಪ್ರತಿಯೊಬ್ಬರಿಗೂ ಎಲ್ಲಾ ರೀತಿಯ ಉಚಿತ ಕಾನೂನು ನೆರವು ಮತ್ತು ಅರಿವನ್ನು ನೀಡುವುದಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಹೇಳಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ರಾಷ್ಟಿçÃಯ ಕಾನೂನು ಸೇವಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಾನೂನಿನ ಜ್ಞಾನ ಎಲ್ಲರಿಗೂ ಅವಶ್ಯಕ. ಹೆಣ್ಣು ಮಕ್ಕಳು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಬೇಕು. ಶಿಕ್ಷಣದೊಂದಿಗೆ ಮಾನವೀಯ ಮೌಲ್ಯ ಮುಖ್ಯ ಎಂದು ಹೇಳಿದರು.
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಡಿ.ಕೆ. ಸರಸ್ವತಿ ಅಧ್ಯಕ್ಷತೆ ವಹಿಸಿ ಮಾತನಾಡಿ ನಾವುಗಳು ಶಿಸ್ತುಬದ್ಧ ಜೀವನ ನಡೆಸಿ, ಇನ್ನೊಬ್ಬರಿಗೆ ತೊಂದರೆಯಾಗದAತೆ ಬದುಕಬೇಕು ಎಂದರು.
ಭೂವಿಕ ಮತ್ತು ತಂಡದವರು ಪ್ರಾರ್ಥಿಸಿದರು, ಪ್ರಿಯಾ ಸ್ವಾಗತಿಸಿದರು. ನಿರ್ಮಲ ನಿರೂಪಿಸಿ, ವಂದಿಸಿದರು. ಉಪನ್ಯಾಸಕರಾದ ಸತೀಶ್, ನಮಿತ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಬಿ.ಎಸ್. ಜಯಪ್ಪ ಇದ್ದರು.