ವಿವಾದಾತ್ಮಕ ಹೇಳಿಕೆ ನೀಡಿದ್ದ ಈಶ್ವರಪ್ಪ ವಿರುದ್ಧ ಎಫ್.ಐ.ಆರ್.
ಶಿವಮೊಗ್ಗ, ನ. ೧೫: ಕಾಂಗ್ರೆಸ್ ವಿರುದ್ಧ ಇಸ್ಲಾಮೀಕರಣ ಆರೋಪ ಮತ್ತು ವಕ್ಫ್ ಆಸ್ತಿ ವಿವಾದಕ್ಕೆ ಸಂಬAಧಿಸಿದAತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದೆ. ಶಿವಮೊಗ್ಗದಲ್ಲಿ ನಡೆಸಿದ್ದ ಪತ್ರಿಕಾಗೋಷ್ಠಿಯಲ್ಲಿ ವಕ್ಫ್ ವಿಚಾರವಾಗಿ ಮುಸ್ಲಿಮರ ವಿರುದ್ಧ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಸಮಾಜದಲ್ಲಿ ಅಶಾಂತಿ ಸೃಷ್ಟಿಗೆ ಯತ್ನಿಸಿದ್ದಾರೆ ಎಂಬ ಆರೋಪದಡಿಯಲ್ಲಿ ಪೊಲೀಸರು ಸುಮೋಟೋ ಕೇಸ್ ದಾಖಲಿಸಿದ್ದಾರೆ. ಈಶ್ವರಪ್ಪ ಹೇಳಿಕೆಗಳು ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದು ಈಶ್ವರಪ್ಪ ಅವರು ಒಂದು ಸಮುದಾಯ ಮತ್ತು ರಾಜಕೀಯ ಪಕ್ಷದ ವಿರುದ್ಧ ದ್ವೇಷವನ್ನು ಹುಟ್ಟುಹಾಕುವ ಈ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದು, ಆ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಗೆ ಯತ್ನಿಸಿದ್ದಾರೆ ಎಂದು ಆರೋಪ ಕೇಳಿಬಂದಿತ್ತು. ಇದೇ ವೇಳೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ವರಿಷ್ಠಾಧಿಕಾರಿಗೆ ಒತ್ತಾಯಿಸಿದರು.
ನಟ ದರ್ಶನ್ ಜಾಮೀನು ರದ್ದಿಗೆ ಮೇಲ್ಮನವಿ
ಬೆಂಗಳೂರು, ನ. ೧೫: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ಆದೇಶ ರದ್ದು ಕೋರಿ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ಸರ್ಕಾರ ಸಮ್ಮತಿ ನೀಡಿದೆ. ಕೊಲೆ ಪ್ರಕರಣದಲ್ಲಿ ದರ್ಶನ್ ಅವರು ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಇದ್ದರು. ಆಗ ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿತ್ತು. ಚಿಕಿತ್ಸೆಗೆ ಜಾಮೀನು ನೀಡುವಂತೆ ಹೈಕೋರ್ಟ್ನಲ್ಲಿ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಅರ್ಜಿ ಪುರಸ್ಕರಿಸಿದ್ದ ಹೈಕೋರ್ಟ್ ಷರತ್ತುಬದ್ಧವಾಗಿ ಆರು ವಾರಗಳ ಜಾಮೀನು ಮಂಜೂರು ಮಾಡಿತ್ತು. ಅದಾದ ಮೇಲೆ ದರ್ಶನ್ ಅವರು ಜೈಲಿನಿಂದ ಬಿಡುಗಡೆ ಆಗಿದ್ದರು. ಸದ್ಯ ಬಿಜಿಎಸ್ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಈ ಮಧ್ಯೆ ಪ್ರಕರಣದ ತನಿಖಾಧಿಕಾರಿಗಳು ಜಾಮೀನು ರದ್ದತಿಗೆ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಲು ಅನುಮತಿ ನೀಡುವಂತೆ ಗೃಹ ಇಲಾಖೆಗೆ ಮನವಿ ಸಲ್ಲಿಸಿದ್ದರು. ಗೃಹ ಇಲಾಖೆ ಇದೀಗ ಸಮ್ಮತಿ ನೀಡಿದೆ. ಗೃಹ ಇಲಾಖೆ ಅನುಮತಿ ನೀಡಿರುವ ವಿಚಾರವನ್ನು ನಗರದ ಪೊಲೀಸ್ ಕಮಿಷನರ್ ಬಿ. ದಯಾನಂದ ಅವರು ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಖಚಿತಪಡಿಸಿದರು. ಶೀಘ್ರದಲ್ಲೇ ಮೇಲ್ಮನವಿ ಸಲ್ಲಿಸಲಾಗುವುದು. ಸಿದ್ದತೆ ನಡೆದಿದೆ ಎಂದು ದಯಾನಂದ ಹೇಳಿದರು.
ವಕ್ಫ್ ವಿವಾದ-ಮಾಹಿತಿ ಸಂಗ್ರಹಕ್ಕೆ ಬಿಜೆಪಿ ತಂಡ
ಬೆAಗಳೂರು, ನ. ೧೫: ಇತ್ತೀಚಿಗೆ ರಾಜ್ಯಾದ್ಯಂತ ರೈತರು ಹಾಗೂ ಮಠಗಳ ಪಹಣಿಯಲ್ಲಿ ಸರ್ಕಾರದಿಂದ ವಕ್ಫ್ ಆಸ್ತಿ ಎಂದು ನಮೂದಿಸಿರುವುದರ ನೈಜ ವರದಿಯನ್ನು ಸಂಗ್ರಹಿಸಲು ಪ್ರತಿಪಕ್ಷ ಬಿಜೆಪಿ ನಮ್ಮ ಭೂಮಿ- ನಮ್ಮ ಹಕ್ಕು ಘೋಷವಾಕ್ಯದಡಿ ಮೂರು ತಂಡಗಳನ್ನು ರಚಿಸಿದೆ. ಈ ತಂಡಗಳು ಆಯಾಯ ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡಿ ವಿಸ್ತೃತ ವರದಿ ಸಂಗ್ರಹಿಸಲಿವೆ. ಬಿ.ವೈ. ವಿಜಯೇಂದ್ರ, ಆರ್. ಅಶೋಕ್, ಛಲವಾದಿ ನಾರಾಯಣ ಸ್ವಾಮಿ ನೇತೃತ್ವದಲ್ಲಿ ತಂಡಗಳು ರಾಜ್ಯದ ವಿವಿಧೆಡೆ ಪ್ರವಾಸ ಕೈಗೊಂಡು ವರದಿ ಸಂಗ್ರಹಿಸಲಿದೆ.
ಮಣಿಪುರದಲ್ಲಿ ೬ ಮಂದಿ ಕಣ್ಮರೆ : ಶೋಧಕಾರ್ಯ ಮುಂದುವರಿಕೆ
ಇAಫಾಲ್, ನ. ೧೫: ಶಸ್ತçಸಜ್ಜಿತ ಬುಡಕಟ್ಟು ಉಗ್ರರು ಜಿರೀಬಾಮ್ ಜಿಲ್ಲೆಯಲ್ಲಿ ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳನ್ನು ಅಪಹರಿಸಿದ ಪ್ರಕರಣಕ್ಕೆ ಸಂಬAಧಿಸಿದAತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಶೋಧಕಾರ್ಯದ ನಿಗಾ ವಹಿಸಿದ್ದಾರೆ. ಬೊರೊಬೆಕ್ರಾದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದ ಬಳಿಕ ಪೊಲೀಸ್ ಠಾಣೆಯ ಆವರಣದಲ್ಲಿದ್ದ ನಿರಾಶ್ರಿತ ಶಿಬಿರದ ಆರು ಮಂದಿಯನ್ನು ಅಪಹರಿಸಲಾಗಿತ್ತು. ಭದ್ರತಾ ಪಡೆಗಳು ಈಗಾಗಲೇ ಶೋಧಕಾರ್ಯ ಆರಂಭಿಸಿದ್ದು, ಐಜಿ ಹಾಗೂ ಡಿಐಜಿ ಮೇಲುಸ್ತುವಾರಿ ವಹಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಪಹರಣಕ್ಕೆ ಒಳಗಾದವರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿ ಇಂಫಾಲ್ ಹಾಗೂ ಜಿರೀಬಾಮ್ನಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನೂರಾರು ಮಂದಿ ಮೇಣದಬತ್ತಿ ಉರಿಸಿ ಪ್ರತಿಭಟಿಸಿದರು.
ಗುರುನಾನಕ್ ಜಯಂತಿಗೆ ಹೊರಟಿದ್ದ ಹಿಂದೂ ಯಾತ್ರಿಕ ಸಾವು
ಲಾಹೋರ್, ನ. ೧೫: ಗುರುನಾನಕ್ ಅವರ ೫೫೫ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನದಲ್ಲಿರುವ ನಾನ್ನನಾ ಸಾಹಿಬ್ ನಗರಕ್ಕೆ ತೆರಳುತ್ತಿದ್ದ ಹಿಂದೂ ಯಾತ್ರಿಕರೊಬ್ಬರನ್ನು ದರೋಡೆಕೋರರ ಗುಂಪೊAದು ಗುಂಡಿಟ್ಟು ಹತ್ಯೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜೇಶ್ ಕುಮಾರ್ ಮೃತ ಯಾತ್ರಿಕ. ಸಿಂದ್ ಪ್ರಾಂತ್ಯದ ಲಾರ್ಕನಾ ನಗರದ ನಿವಾಸಿ ರಾಜೇಶ್ ಅವರು ಕಾರಿನಲ್ಲಿ ತಮ್ಮ ಸ್ನೇಹಿತರೊಂದಿಗೆ ತೆರಳುತ್ತಿದ್ದ ವೇಳೆ ಮೂವರು ದರೋಡೆಕೋರರು ಕಾರನ್ನು ಅಡ್ಡಗಟ್ಟಿದ್ದಾರೆ. ಬಂದೂಕುದಾರಿಯೊಬ್ಬ ಮೂವರಿಂದ ೪,೫೦,೦೦೦ ಪಾಕಿಸ್ತಾನ ರೂಪಾಯಿಯನ್ನು ದೋಚಿದ್ದು ಚಾಲಕನಿಂದಲೂ ಹಣವನ್ನು ದೋಚಿದ್ದಾರೆ. ಬಳಿಕ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ರಾಜೇಶ್ ತೀವ್ರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ದಾಖಲಿಸಿದರೂ ಬದುಕುಳಿಯಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.