ಮಡಿಕೇರಿ, ನ. ೧೫ : ಮಕ್ಕಳ ದಿನಾಚರಣೆಯ ಪ್ರಯುಕ್ತ ಮಡಿಕೇರಿ ನಗರದ ಮಹದೇವಪೇಟೆಯ ಎಸ್‌ಎಸ್ ಆಸ್ಪತ್ರೆ ವತಿಯಿಂದ ತಾ.೧೭ ರಂದು ಎಲ್‌ಕೆಜಿಯಿಂದ ೧೦ನೇ ತರಗತಿವರೆಗಿನ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಕ್ರೆಸೆಂಟ್ ಸ್ಕೂಲ್ ಆವರಣದಲ್ಲಿ ಬೆಳಿಗ್ಗೆ ೯ ಗಂಟೆಯಿAದ ಸ್ಪರ್ಧೆ ಆರಂಭಗೊಳ್ಳಲಿದ್ದು, ಮಧ್ಯಾಹ್ನ ೧೨ ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮ ಹಾಗೂ ಬಹುಮಾನ ವಿತರಣಾ ಸಮಾರಂಭದÀ ದಿವ್ಯ ಸಾನಿಧ್ಯವನ್ನು ಮುದ್ದಿನಕಟ್ಟೆ ಮಠದ ಶ್ರೀಅಭಿನವ ಶಿವಾನಂದ ಶಿವಾಚಾರ್ಯ ಸ್ವಾಮಿಗಳು ವಹಿಸಿಕೊಳ್ಳಲಿದ್ದಾರೆ.

ಎಸ್‌ಎಸ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕಿ ಡಾ.ಶಿಲ್ಪಾ ಸತೀಶ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾಸ್ಪತ್ರೆಯ ಉಪ ಮುಖ್ಯ ವೈದ್ಯಾಧಿಕಾರಿ ಡಾ.ದೇವದಾಸ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಗರಸಭೆಯ ಮಾಜಿ ಅಧ್ಯಕ್ಷ ಹೆಚ್.ಎಂ.ನAದಕುಮಾರ್, ನಗರಸಭಾ ಸದಸ್ಯರಾದ ಸವಿತಾ ರಾಕೇಶ್, ಕಲಾವತಿ, ತೀರ್ಪುಗಾರರಾಗಿ ಮಿÈಣಾಲಿನಿ ಚಿಣ್ಣಪ್ಪ ಪಾಲ್ಗೊಳ್ಳಲಿದ್ದಾರೆ.

ಚಿತ್ರಕಲಾ ಸ್ಪರ್ಧೆ ಮೂರು ವಿಭಾಗಗಳಲ್ಲಿ ನಡೆಯಲಿದ್ದು, ಮೂರೂ ವಿಭಾಗಗಳಲ್ಲಿಯೂ ಪ್ರಥಮ, ದ್ವಿತೀಯ, ತೃತೀಯ ವಿಜೇತರಿಗೆ ಆಕರ್ಷಕ ನಗದು ಬಹುಮಾನ, ಪದಕ, ಪ್ರಶಸ್ತಿ ಪತ್ರ ಮತ್ತು ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಂಸನಾ ಪತ್ರ ನೀಡಲಾಗುವುದು. ಮೊದಲನೇ ವಿಭಾಗದ (ಎಲ್‌ಕೆಜಿಯಿಂದ ೧ನೇ ತರಗತಿ)ವಿದ್ಯಾರ್ಥಿಗಳು “ವರ್ಣರಂಜಿತ ಉದ್ಯಾನವನ”, ಎರಡನೇ ವಿಭಾಗದ (೨ ರಿಂದ ೬ನೇ ತರಗತಿ) ವಿದ್ಯಾರ್ಥಿಗಳು “ಗ್ರಾಮ ಜೀವನ, ಹಳ್ಳಿಯ ಸೊಬಗು” ಹಾಗೂ ಮೂರನೇ ವಿಭಾಗದ (೭ ರಿಂದ ೧೦ನೇ ತರಗತಿ) ವಿದ್ಯಾರ್ಥಿಗಳು ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯಕ್ಕೆ ಸಂಬAಧಿಸಿದAತೆ ಚಿತ್ರ ಬಿಡಿಸಬೇಕು ಎಂದು ಎಸ್‌ಎಸ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕಿ ಡಾ.ಶಿಲ್ಪಾ ಸತೀಶ್ ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಹೆಸರು ನೋಂದಾಯಿಸಿಕೊಳ್ಳುವವರು ೮೪೩೧೨೮೫೫೦೦, ೮೮೬೧೯೬೫೨೪೨ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.