ಮಡಿಕೇರಿ, ನ. ೧೫: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ ‘ಯುವನಿಧಿ’ ಯೋಜನೆಯನ್ನು ೨೦೨೩ರ ಡಿಸೆಂಬರ್ ೨೬ ರಂದು ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ.

ಕರ್ನಾಟಕ ರಾಜ್ಯ ಸರ್ಕಾರವು ಪದವಿ ಹಾಗೂ ಡಿಪ್ಲೋಮಾ ಕೋರ್ಸ್ಗಳನ್ನು ೨೦೨೨-೨೩ ಹಾಗೂ ೨೦೨೩-೨೪ನೇ ಸಾಲಿನಲ್ಲಿ ತೇರ್ಗಡೆ ಯಾದ ಕರ್ನಾಟಕ ರಹವಾಸಿಗಳಿಗೆ ನಿರುದ್ಯೊಗಿ ಭತ್ಯೆಯನ್ನು ನೀಡುವ ಖಾತರಿ ಯೋಜನೆಯಾಗಿದೆ.

ಯಾವುದೇ ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ ಉತ್ತೀರ್ಣರಾಗಿ ಸರ್ಕಾರಿ, ಖಾಸಗಿ, ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ hಣಣಠಿ://sevಚಿsiಟಿಜhugs. ಞಚಿಡಿಟಿಚಿಣಚಿಞಚಿ.gov.iಟಿ ಪೋರ್ಟಲ್ ಮೂಲಕ ಉಚಿತವಾಗಿ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಎಲ್ಲಾ ಪದವೀಧರರಿಗೆ, ಸ್ನಾತಕೋತ್ತರ ಪದವಿ, ಬಿಎಡ್ ಪದವೀಧರರಿಗೆ ಪ್ರತಿ ತಿಂಗಳು ರೂ. ೩ ಸಾವಿರ ಗಳು ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ ರೂ. ೧೫೦೦ ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ೨ ವರ್ಷಗಳವರೆಗೆ ನೀಡಲಾಗುತ್ತದೆ.

ಹಾಗೆಯೇ ಈಗಾಗಲೇ ಯುವನಿಧಿ ಯೋಜನೆಗೆ ಅರ್ಹರಾದ ಎಲ್ಲಾ ಫಲಾನುಭವಿಗಳು ಪ್ರತಿ ಮಾಹೆಯ ೨೫ನೇ ತಾರೀಖಿನ ಒಳಗೆ ಉನ್ನತ ವ್ಯಾಸಂಗ ಮುಂದುವರೆಸದಿರುವ ಕುರಿತು ಹಾಗೂ ಯಾವುದೇ ಉದ್ಯೋಗ ಹೊಂದಿಲ್ಲದಿರುವ ಕುರಿತು ‘ಸೇವಾಸಿಂಧು’ ಪೋರ್ಟಲ್ hಣಣಠಿ://sevಚಿsiಟಿಜhugs. ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಕಡ್ಡಾಯವಾಗಿ ಸ್ವಯಂ ಘೋಷಣೆ ನೀಡಿದರೆ ಮಾತ್ರ ಮುಂದಿನ ತಿಂಗಳ ನಿರುದ್ಯೋಗ ಭತ್ಯೆ ನೀಡಲಾಗುವುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ರೇಖಾ ಗಣಪತಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ ೧೮೦೦೫೯೯೯೯೧೮ಗೆ ಕರೆ ಮಾಡುವ ಮೂಲಕ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ (೮೧೨೩೩೧೨೩೧೯) (೮೨೯೬೦೨೦೮೨೬) ನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.