ಕುಶಾಲನಗರ: ಮಂಡ್ಯ ನಗರದಲ್ಲಿ ಡಿಸೆಂಬರ್ ೨೦ ರಿಂದ ಮೂರು ದಿನಗಳ ಕಾಲ ನಡೆಯಲಿರುವ ೮೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಕ್ಕೆ ಕುಶಾಲನಗರದಲ್ಲಿ ಸ್ವಾಗತ ನೀಡಲಾಯಿತು.
ಕುಶಾಲನಗರ ತಾಲೂಕು ಆಡಳಿತ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ವಿವಿಧ ಸಂಘ-ಸAಸ್ಥೆಗಳು, ಕನ್ನಡಾಭಿಮಾನಿಗಳು, ಶಾಲಾ-ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಸೇರಿದಂತೆ ನಾಗರಿಕರ ಸಮ್ಮುಖದಲ್ಲಿ ಕನ್ನಡ ರಥವನ್ನು ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಮತ್ತಿತರರು ಕುಶಾಲನಗರ ಬೈಚನಹಳ್ಳಿ ಮಾರಿಯಮ್ಮ ದೇವಸ್ಥಾನ ಬಳಿ ಅದ್ದೂರಿಯಾಗಿ ಬರಮಾಡಿಕೊಂಡರು.
ಶಾಸಕ ಡಾ. ಮಂತರ್ ಗೌಡ ರಥದಲ್ಲಿನ ಕನ್ನಡ ಭುವನೇಶ್ವರಿ ಪುತ್ಥಳಿಗೆ ಪುಷ್ಪ ಅರ್ಪಿಸುವ ಮೂಲಕ ಕನ್ನಡ ಜ್ಯೋತಿ ರಥವನ್ನು ಸ್ವಾಗತಿಸಿದರು. ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಸಂಘ-ಸAಸ್ಥೆಗಳು, ಮಹಿಳಾ ಸಂಘಟನೆಗಳು, ಕನ್ನಡಾಭಿಮಾನಿಗಳು ಹಾಗೂ ನಾಗರಿಕರು ರಥವನ್ನು ಬರಮಾಡಿಕೊಂಡು ಪಟ್ಟಣದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಮೂಲಕ ಸಾಗಿದರು.
ರಥದೊಂದಿಗೆ ಸಾಗಿದ ವಿದ್ಯಾರ್ಥಿಗಳು, ವಿವಿಧ ಸಮಾಜಗಳು ಹಾಗೂ ಸಂಘ-ಸAಸ್ಥೆಗಳು ರಥಕ್ಕೆ ಸ್ವಾಗತ ಕೋರುವ ಬ್ಯಾನರ್ ಹಿಡಿದು ಕನ್ನಡ ನಾಡು-ನುಡಿ, ಸಂಸ್ಕೃತಿ ಕುರಿತ ಘೋಷಣೆಗಳನ್ನು ಮೊಳಗಿಸಿದರು.
ಪುರಸಭೆಯ ಅಧ್ಯಕ್ಷೆ ಜಯಲಕ್ಷಿö್ಮ, ತಾಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ, ಮುಖ್ಯ ಅಧಿಕಾರಿ ಕೃಷ್ಣಪ್ರಸಾದ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಪರಮೇಶ್ವರ್ ಕುಮಾರ್, ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಎಂ.ಪಿ. ಕೇಶವಕಾಮತ್, ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಜಿಲ್ಲಾ ಕಸಾಪ ಪ್ರಧಾನ ಕಾರ್ಯದರ್ಶಿಗಳಾದ ಎಸ್.ಐ. ಮುನೀರ್ ಅಹ್ಮದ್, ರೇವತಿ ರಮೇಶ್, ಡಿಡಿಪಿಐ ಸಿ. ರಂಗಧಾಮಪ್ಪ, ಡಿವೈಎಸ್ಪಿ ಗಂಗಾಧರಪ್ಪ, ಪ್ರಬಾರ ಬಿಇಓ ಜಿ.ಎಂ. ಹೇಮಂತ್, ಕುಶಾಲನಗರ ತಾಲೂಕು ಕ.ಸಾ.ಪ. ಅಧ್ಯಕ್ಷ ಕೆ.ಎಸ್. ನಾಗೇಶ್, ಕಾರ್ಯದರ್ಶಿಗಳಾದ ಎಸ್. ನಾಗರಾಜ್, ಟಿ.ವಿ. ಶೈಲಾ, ಕೋಶಾಧಿಕಾರಿ ಕೆ.ವಿ. ಉಮೇಶ್, ಪುರಸಭೆಯ ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ವಿವಿಧ ಸಂಘಟನೆಗಳ ಪ್ರಮುಖರು ಮತ್ತು ಶಾಲಾ ಶಿಕ್ಷಕರ ವೃಂದ, ಉಪನ್ಯಾಸಕ ವೃಂದ, ವಿದ್ಯಾರ್ಥಿಗಳು ಇದ್ದರು.ಮಡಿಕೇರಿ: ಕನ್ನಡ ಜ್ಯೋತಿ ರಥಕ್ಕೆ ಮೂರ್ನಾಡಿನಲ್ಲಿ ಸ್ವಾಗತ ದೊರೆಯಿತು. ಮೂರ್ನಾಡು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು, ಮೂರ್ನಾಡು ಗ್ರಾಮ ಪಂಚಾಯಿತಿ, ಕಂದಾಯ ಇಲಾಖೆ, ಟೈಲರ್ ಅಸೋಸಿಯೇಷನ್ ಸದಸ್ಯರು, ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಕನ್ನಡ ರಥವನ್ನು ಕೊಂಡAಗೇರಿ ರಸ್ತೆಯಿಂದ ಬಸ್ ನಿಲ್ದಾಣದವರೆಗೆ ಪೂರ್ಣಕುಂಭ ಕಲಶ ಮತ್ತು ವಾದ್ಯಗೋಷ್ಠಿಗಳೊಂದಿಗೆ ಅದ್ದೂರಿಯಾಗಿ ಬರಮಾಡಿಕೊಂಡು ಗೌರವ ಅರ್ಪಿಸಿದರು.
ಪಂಚಾಯಿತಿ ಸದಸ್ಯರಾದ ಮುಂಡAಡ ವಿಜಯಲಕ್ಷಿö್ಮ ಅವರ ನೇತೃತ್ವದಲ್ಲಿ ತಾಯಿ ಭುವನೇಶ್ವರಿಗೆ ಪೂಜೆಯನ್ನು ನೆರವೇರಿಸಲಾಯಿತು. ಮೂರ್ನಾಡು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್, ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಶನ್ ರೈ, ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ಜಾಶಿರ್ ಮತ್ತಿತರರು ಭುವನೇಶ್ವರಿಗೆ ಮಾಲಾರ್ಪಣೆ ಮಾಡಿದರು. ನಂತರ ಮೂರ್ನಾಡು ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಕನ್ನಡನಾಡು ನುಡಿಯ ಕುರಿತು ನೃತ್ಯ ಪ್ರದರ್ಶಿಸಿದರು.
ಪರಿಷತ್ತಿನ ಅಧ್ಯಕ್ಷೆ ಹರಿಣಿ ವಿಜಯ್ ಮಾತನಾಡಿ, ಶ್ರೀಮಂತ ಭಾಷೆ ಕನ್ನಡದ ಬಗ್ಗೆ ಪ್ರತಿಯೊಬ್ಬರಲ್ಲೂ ಅಭಿಮಾನ ಮೂಡಬೇಕು. ಮಕ್ಕಳಲ್ಲಿ ಕನ್ನಡ ಪ್ರೇಮವನ್ನು ಬೆಳೆಸಬೇಕು, ಕರ್ನಾಟಕ ಮಾತ್ರವಲ್ಲದೆ ದೇಶ ವಿದೇಶಗಳಲ್ಲೂ ಕನ್ನಡದ ಕೀರ್ತಿ ಪತಾಕೆ ಹಾರಾಡುವಂತೆ ಮಾಡಬೇಕು ಎಂದು ಕರೆ ನೀಡಿದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೇಶವ ಕಾಮತ್, ಮಡಿಕೇರಿ ತಾಲೂಕು ಅಧ್ಯಕ್ಷೆ ಕಡ್ಲೆರ ತುಳಸಿ ಮೋಹನ್, ನಾಪೋಕ್ಲು ಹೋಬಳಿ ಅಧ್ಯಕ್ಷ ನೆರವಂಡ ಉಮೇಶ್, ಪದಾಧಿಕಾರಿಗಳಾದ ಮುನೀರ್, ಪುಷ್ಪ, ವಿಂದ್ಯ ದೇವಯ್ಯ, ಸದಸ್ಯ ಈರಮಂಡ ವಿಜಯ್ ಉತ್ತಯ್ಯ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರೇಖಾ ಬಿ.ಎಸ್., ಸದಸ್ಯರಾದ ಈರ ಸುಬ್ಬಯ್ಯ, ಸುಂದರಿ ಬಿ.ಎಸ್., ರೀಟಾ ಪಿ.ಎಸ್, ಪುಷ್ಪ ಎಂ.ಎA., ಮೀನಾಕ್ಷಿ ದೇವಯ್ಯ, ಅಭಿವೃದ್ಧಿ ಅಧಿಕಾರಿ ಚಂದ್ರಮೌಳಿ, ಮಡಿಕೇರಿಯ ಕಂದಾಯ ಪರಿವೀಕ್ಷಕ ಚಂದ್ರಪ್ರಸಾದ್, ಗ್ರಾಮಾಧಿಕಾರಿ ಅಕ್ಷತಾ ಬಿ. ಶೆಟ್ಟಿ, ಮೂರ್ನಾಡು ಪೊಲೀಸ್ ಉಪಠಾಣೆಯ ಸಹಾಯಕ ಉಪನಿರೀಕ್ಷಕ ಶ್ರೀನಿವಾಸ್, ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಪುಷ್ಪಾವತಿ, ಪ್ರೌಢಶಾಲೆಯ ಶಿಕ್ಷಕರಾದ ಲೀನಾ, ಕವಿಯತ್ರಿ ಕೆ.ಜಿ. ರಮ್ಯ, ಯಶೋಧ, ಅಂಗನವಾಡಿ ಶಿಕ್ಷಕರು, ಕಾರ್ಯಕರ್ತರು ವಿವಿಧ ಸಂಘ-ಸAಸ್ಥೆಗಳ ಮುಖಂಡರು ಹಾಜರಿದ್ದರು.
ಮೂರ್ನಾಡು ಹೋಬಳಿ ಕಸಾಪ ಗೌರವ ಕಾರ್ಯದರ್ಶಿ ಕಟ್ಟೆಮನೆ ಮಹಾಲಕ್ಷಿö್ಮ ಸ್ವಾಗತಿಸಿ ವಂದಿಸಿದರು.