ಕೂಡಿಗೆ, ನ. ೧೫: ಕೊಡಗು ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸಮಗ್ರ ಶಿಕ್ಷಣ ಕರ್ನಾಟಕ, ಕ್ಷೇತ್ರ ಸಂಪನ್ಮೂಲ ಕೇಂದ್ರದ ವತಿಯಿಂದ ಕೂಡಿಗೆಯ ಅಂಜೆಲಾ ವಿದ್ಯಾನಿಕೇತನ ಶಾಲೆಯ ಸಭಾಂಗಣದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಸೋಮವಾರಪೇಟೆ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಸ್ಪರ್ಧೆ ಹಾಗೂ ಕಲೋತ್ಸವ ಗಮನ ಸೆಳೆಯಿತು.
ಸ್ಪರ್ಧೆಯಲ್ಲಿ ಮಕ್ಕಳು ಪ್ರದರ್ಶಿಸಿದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ರಂಜಿಸಿದವು. ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಕ್ಷೇತ್ರ ಶಿಕ್ಷಣಾಸಾಂಸ್ಕೃತಿಕ ಕಾರ್ಯಕ್ರಮಗಳು ರಂಜಿಸಿದವು. ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಭಾಗ್ಯಮ್ಮ ಮಾತನಾಡಿ, ಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಕಾರಂಜಿ ಸ್ಪರ್ಧೆಯು ಒಂದು ವಿನೂತನ ಕಾರ್ಯಕ್ರಮವಾಗಿದ್ದು, ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಉತ್ತಮ ವೇದಿಕೆಯನ್ನು ಒದಗಿಸುತ್ತದೆ ಎಂದರು.
ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪ ಪ್ರಾಂಶುಪಾಲ ಕೆ.ಎನ್. ಶಿವಕುಮಾರ್ ಮಾತನಾಡಿ, ಮಕ್ಕಳಲ್ಲಿ ಹುದುಗಿರುವ ಪ್ರತಿಭೆಯನ್ನು ಬೆಳಕಿಗೆ ತರುವ ಪ್ರಯತ್ನಗಳಿಗೆ ಧಿಕಾರಿ ಎಸ್. ಭಾಗ್ಯಮ್ಮ ಮಾತನಾಡಿ, ಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಕಾರಂಜಿ ಸ್ಪರ್ಧೆಯು ಒಂದು ವಿನೂತನ ಕಾರ್ಯಕ್ರಮವಾಗಿದ್ದು, ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಉತ್ತಮ ವೇದಿಕೆಯನ್ನು ಒದಗಿಸುತ್ತದೆ ಎಂದರು.
ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪ ಪ್ರಾಂಶುಪಾಲ ಕೆ.ಎನ್. ಶಿವಕುಮಾರ್ ಮಾತನಾಡಿ, ಮಕ್ಕಳಲ್ಲಿ ಹುದುಗಿರುವ ಪ್ರತಿಭೆಯನ್ನು ಬೆಳಕಿಗೆ ತರುವ ಪ್ರಯತ್ನಗಳಿಗೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆಯಾಗಿದೆ ಎಂದರು.
ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಕೆ. ಬಸವರಾಜ್ ಮಾತನಾಡಿದರು.
ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಎಂ. ಹೇಮಂತ್, ಪ್ರತಿಭಾ ಕಾರಂಜಿ ಸ್ಪರ್ಧೆಯ ಮಹತ್ವ ಕುರಿತು ಮಾಹಿತಿ ನೀಡಿದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಅನಿತ ಡಯಾಸ್ ಅಧ್ಯಕ್ಷತೆ ವಹಿಸಿದ್ದರು.
ಬಿಆರ್‌ಸಿ ಎಂ.ವಿ. ಮಂಜೇಶ್, ಕೂಡಿಗೆ ಡಯಟ್‌ನ ಉಪನ್ಯಾಸಕ ಎಂ. ಕೃಷ್ಣಪ್ಪ, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ದಯಾನಂದ ಪ್ರಕಾಶ್, ಭಾರತ್ ಸ್ಕೌಟ್ಸ್, ಗೈಡ್ಸ್ನ ಕುಶಾಲನಗರ ತಾಲೂಕು ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ ಕೆ.ಪಿ. ರಾಜು, ಸ್ಪರ್ಧಾ ಕಾರ್ಯಕ್ರಮದ ನೋಡೆಲ್ ಅಧಿಕಾರಿ ಬಿ.ಆರ್.ಪಿ. ಎಸ್.ಎಸ್. ಶಿವಕುಮಾರ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಜಿ.ಪಿ. ಕವಿತ, ನಿರ್ದೇಶಕಿ ಹೆಚ್.ಎಸ್. ಉಮಾದೇವಿ, ತಾಲೂಕು ಸರ್ಕಾರಿ ನೌಕರರ ಸಂಘದ ನಿರ್ದೇಶಕರಾದ ಯಶವಂತ್, ಟಿ.ಎಸ್. ಶಶಿಕುಮಾರ್, ಜಿಲ್ಲಾ ಪ್ರಾಥಮಿಕ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷ ಪಿ. ಕರುಂಬಯ್ಯ, ಸಿಆರ್‌ಪಿ ಕೆ. ಶಾಂತಕುಮಾರ್, ಸಿಸ್ಟರ್ ಲೀನಾ ಫರ್ನಾಂಡೀಸ್, ತಾಲೂಕಿನ ಸಿಆರ್‌ಪಿಗಳು, ಮಾರ್ಗದರ್ಶಿ ಶಿಕ್ಷಕರು, ಶಾಲಾ ಶಿಕ್ಷಕರು, ಪೋಷಕರು ಇತರರು ಇದ್ದರು.
ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ೧೫ ಕ್ಲಸ್ಟರ್ ಕೇಂದ್ರ ವಿದ್ಯಾರ್ಥಿಗಳು ಭಾಗವಹಿಸಿದ್ದರು.