*ಗೋಣಿಕೊಪ್ಪ, ನ. ೧೫: ವೈಯಕ್ತಿಕ ಬೆಳವಣಿಗೆಗೆ ಶಿಬಿರಗಳು ಸಹಕಾರಿ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಪೆಮ್ಮಂಡ ಕೆ. ಪೊನ್ನಪ್ಪ ಅಭಿಪ್ರಾಯಪಟ್ಟರು. ತೂಚಮಕೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗೋಣಿಕೊಪ್ಪ ಕಾವೇರಿ ಪದವಿಪೂರ್ವ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿ ಜೀವನದಲ್ಲಿ ಶಿಬಿರಗಳು ಹೆಚ್ಚು ಕಲಿಯಲು ಅವಕಾಶ ಮಾಡಿಕೊಡುತ್ತದೆ. ಕಿರಿಯ ವಯಸ್ಸಿನಲ್ಲಿ ಗ್ರಾಮಗಳ ಅಭಿವೃದ್ಧಿಗೆ ಕೈಜೋಡಿಸಬೇಕಿದೆ. ಶಾಲೆಗಳಲ್ಲಿ ಶಿಬಿರ ಆಯೋಜನೆಯಿಂದ ಗ್ರಾಮದ ಅಭಿವೃದ್ಧಿಗೆ ಸಹಕಾರಿ ಎಂದರು.

ಕಾಲೇಜು ಪ್ರಾಂಶುಪಾಲ ಎಸ್.ಎಸ್. ಮಾದಯ್ಯ ಮಾತನಾಡಿ, ಶಿಸ್ತು ಕಲಿಯಲು ಶಿಬಿರಗಳು ಸಹಕಾರಿಯಾಗಿದ್ದು, ಬದುಕಿಗೆ ಪೂರಕ ಮಾರ್ಗದರ್ಶನ ದೊರೆಯುತ್ತದೆ ಎಂದರು. ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕಿಶೋರ್ ನಾಚಪ್ಪ ಮಾತನಾಡಿ, ಜೀವನ ಸಾಗಿಸಲು ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಮೈಗೂಡಿಸಿಕೊಳ್ಳಬೇಕೆಂದರು.

ಎನ್‌ಎಸ್‌ಎಸ್ ಯೋಜನಾಧಿಕಾರಿ ವಿಪ್ರ ನೀಲಮ್ಮ ಎನ್‌ಎಸ್‌ಎಸ್ ಯೋಜನೆಗಳ ಮಾಹಿತಿ ನೀಡಿದರು. ಮಾಜಿ ಸೈನಿಕ ಕ್ಯಾಪ್ಟನ್ ವಿ. ಕೆ. ಮೋಹನ್, ಶಾಲೆ ಮುಖ್ಯ ಶಿಕ್ಷಕ ಹೆಚ್.ಎನ್. ಸುಬ್ರಮಣಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಗೀತಾ, ಕಾಫಿ ಬೆಳೆಗಾರ ಪೆಮ್ಮಂಡ ಅರುಣ್ ಇದ್ದರು. ಶಿಬಿರಾರ್ಥಿಗಳು ಎನ್‌ಎಸ್‌ಎಸ್ ಗೀತೆ ಹಾಡಿದರು. ಉಪನ್ಯಾಸಕಿ ಕೆ.ಎ. ಜಶ್ಮಿ ವಂದಿಸಿದರು. ಜನನಿ ಮತ್ತು ತಂಡ ಪ್ರಾರ್ಥಿಸಿದರು.